ಸುದ್ದಿ

ಗ್ರಾಹಕರಿಗೆ ಶಾಕ್ ನೀಡಿದ ಏರ್‌ಟೆಲ್, ವೊಡಾಫೋನ್; ಡಿಸೆಂಬರ್‌ 1ರಿಂದ ಕರೆ ದುಬಾರಿ!

44

ಜಿಯೋ ಗ್ರಾಹಕರ ಬೆನ್ನಲ್ಲೇ ಏರ್‌ಟೆಲ್‌ ಮತ್ತು ವೊಡಾಫೋನ್‌ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್‌ ಬಿಲ್‌ ಶಾಕ್‌ ತಟ್ಟಲಿದೆ. ವೊಡಾಫೋನ್‌ ಐಡಿಯಾ ಹಾಗೂ ಭಾರ್ತಿ ಏರ್‌ಟೆಲ್‌ ಕಂಪನಿಗಳು ಡಿಸೆಂಬರ್‌ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ.

ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್‌ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್‌ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ ಬಿಎಸ್‌ಎನ್‌ಎಲ್ ಹೊರತುಪಡಿಸಿ ಬೇರೆ ಕಂಪೆನಿಗಳು ಪೈಪೋಟಿಯಲ್ಲಿಲ್ಲ. 

ನಷ್ಟವನ್ನು ಸರಿದೂಗಿಸಲು ದರ ಏರಿಕೆಯ ಅನಿವಾರ್ಯತೆಗೆ ಈ ಕಂಪೆನಿಗಳು ಮುಂದಾಗಿವೆ. ವಿವಿಧ ಸೇವೆಗಳನ್ನು ಉಚಿತವಾಗಿ ನೀಡುತ್ತಿದ್ದ ಕಂಪೆನಿಗಳು ಅವುಗಳಿಗೆ ಶುಲ್ಕ ವಿಧಿಸಲು ಮುಂದಾಗಿವೆ ಹಾಗೂ ಇತರೆ ಸೇವಾ ಶುಲ್ಕಗಳ ಮೇಲೆಯೂ ಹೆಚ್ಚುವರಿ ಹೊರೆ ನೀಡಿವೆ.

ಡಿಸೆಂಬರ್ 1ರಿಂದ ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ಕಂಪೆನಿಗಳ ಸೇವೆಗಳ ದರ ಏರಿಕೆಯಾಗಲಿದೆ. ಪೋಸ್ಟ್ ಪೇಯ್ಡ್ ಮತ್ತು ಪ್ರೀಪೇಯ್ಡ್ ಎರಡೂ ಗ್ರಾಹಕರಿಗೆ ಈ ದರ ಹೆಚ್ಚಳದ ಬಿಸಿ ತಟ್ಟಲಿದೆ. ಸೇವೆಗಳ ಮೇಲೆ ಸ್ವಲ್ಪ ಮಟ್ಟಿನ ಹೆಚ್ಚಳ ಮಾಡುವುದಾಗಿ ಸಂಸ್ಥೆಗಳು ತಿಳಿಸಿವೆ. ಜಿಯೋ ಇತರೆ ಸೇವಾದಾರರ ಗ್ರಾಹಕರಿಗೆ ಮಾಡುವ ಕರೆಗಳ ಮೇಲೆ ನಿಮಿಷಕ್ಕೆ ಆರು ಪೈಸೆಗಳ ದರ ವಿಧಿಸುವ ನಿರ್ಧಾರವನ್ನು ಇತ್ತೀಚೆಗೆ ತೆಗೆದುಕೊಂಡಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…

  • ಸುದ್ದಿ

    ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

    ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…

  • ಸುದ್ದಿ

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ,ಘೋಷ ವಾಕ್ಯಗಳಿರುವ ಚಿತ್ರಗಳನ್ನು ಹಾಕಿಕೊಳ್ಳುವಂತಿಲ್ಲ,ಹಾಕಿದರೆ ಬಾರಿ ಮೊತ್ತದ ದಂಡ ಕಟ್ಟಬೇಕಾಗುತ್ತದೆ,.!!

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ  ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ  ಘೋಷ ವಾಕ್ಯಗಳಿದ್ದ  250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ   ಸುಲಲಿತ ಸಂಚಾರ ಮತ್ತು  ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ  ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್‌ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…

  • ಸುದ್ದಿ

    ಎರಡಕ್ಕಿಂತ ಹೆಚ್ಚು ಮದ್ವೆ ಆಗಿಲ್ಲ ಅಂದ್ರೆ, ಜೈಲಿಗೆ ಹೋಗಲು ರೆಡಿಯಾಗಿ!ಎಲ್ಲಿ ಗೊತ್ತಾ?ಮುಂದೆ ಓದಿ…

    ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.

  • ಸುದ್ದಿ

    ಈ ವರ್ಷ ಭಾರತೀಯರು ಗೂಗಲ್ ನಲ್ಲಿ ಅತೀ ಹೆಚ್ಚಾಗಿ ಸರ್ಚ್ ಮಾಡಿ ನೋಡಿದ್ದು ಏನ್ ಗೊತ್ತಾ..?

    ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….