ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಲಿವರ್ ಡ್ಯಾಮೇಜ್ ಆಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ತಂದೆಗೆ ಮಗಳ ಲಿವರ್ ನ ಒಂದು ಭಾಗವನ್ನು ಕಸಿ ಮಾಡುವಲ್ಲಿ ಚೆನ್ನೈನ ಜಿಇಎಂ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯಲ್ಲಿ ಕೇವಲ ಪಿತ್ತಜನಕಾಂಗದ ಒಂದು ಭಾಗವನ್ನು ಮಾತ್ರ ಕಸಿ ಮಾಡಲಾಗಿದೆ.
ಮಗಳು ಈ ನಿರ್ಧಾರಕ್ಕೆ ಕುಟುಂಬದ ಸದಸ್ಯರು ಒಪ್ಪಲಿಲ್ಲ. ಆಕೆ ಇನ್ನೂ ಮದುವೆಯಾಗಿಲ್ಲ. ಶಸ್ತ್ರಚಿಕಿತ್ಸೆ ಮಾಡಿದರೆ ಹೊಟ್ಟೆ ಭಾಗದಲ್ಲಿ ಮಾರ್ಕ್ ಆಗುತ್ತದೆ. ಈ ರೀತಿ ಆದರೆ ಮುಂದೆ ಈಕೆಯನ್ನು ಯಾರು ವಿವಾಹ ಆಗುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು. ಆದರೆ ನಾವು ಆಕೆ ಕುಟುಂಬದವರಿಗೆ ಶಸ್ತ್ರಚಿಕಿತ್ಸೆಯ ವಿಧಾನವನ್ನು ವಿವರಿಸಿದ್ದೇವೆ. ಮತ್ತು ಆದರ ಕಾರ್ಯ ವಿಧಾನದ ಬಗ್ಗೆಯೂ ಅರ್ಥವಾಗುವಂತೆ ವಿವರಿಸಿ ಹೇಳಿದಾಗ ಅವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದರು ಎಂದು ವೈದ್ಯರು ಹೇಳಿದ್ದಾರೆ. ಈ ವಿಚಾರದ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಇಎಂ ಆಸ್ಪತ್ರೆಯ ವೈದ್ಯರು, ರೋಗಿಗೆ ಲಿವರ್ ನ ಒಂದು ಭಾಗ ಮಾತ್ರ ಡ್ಯಾಮೇಜ್ ಆಗಿ ಕೊನೆಯ ಹಂತ ತಲುಪಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಲಿವರ್ ಸಿಗುತ್ತಾ ಅಂತ ದಾನಿಗಳಿಗೆ ಕಾಯುತ್ತಿದ್ದೆವು. ಆದರೆ ದಾನಿಗಳು ಸಿಗದ ಕಾರಣ ಮಗಳು ಹತಾಶೆಗೊಂಡು ತಂದೆಯ ಸ್ಥಿತಿಯನ್ನು ನೋಡಿ ನಾನೇ ನನ್ನ ಅಂಗವನ್ನು ದಾನ ಮಾಡುತ್ತೇನೆ ಎಂದು ಮಗಳು ಮುಂದೆ ಬಂದಳು ಎಂದು ಹೇಳಿದ್ದಾರೆ.
ದೇ ಮೊದಲ ಬಾರಿಗೆ ಭಾರತದಲ್ಲಿ ಡಾ. ಸಿ ಪಳನಿವೆಲು ಮತ್ತು ಅವರ ತಂಡವು ಲ್ಯಾಪರೊಸ್ಕೋಪಿಕ್ ಪಿತ್ತಜನಕಾಂಗದ ಕಸಿ ಮಾಡಿದೆ. ಲಿವರಿನ ಬಲ ಅರ್ಧವನ್ನು ಮೂರೂವರೆ ಗಂಟೆಗಳಲ್ಲಿ ಯಶಸ್ವಿಯಾಗಿ ಬೇರ್ಪಡಿಸಿ ನಂತರ ತಂದೆಗೆ ಮಗಳ ಪಿತ್ತಜನಕಾಂಗದ ಅರ್ಧ ಭಾಗವನ್ನು ಜೋಡಣೆ ಮಾಡಲಾಗಿದೆ ಎಂದು ವೈದ್ಯರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ವೈದ್ಯರ ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಭೇಟಿಯಾಗಿ ಈ ಕೆಲಸದ ಬಗ್ಗೆ ವಿವರಿಸಿದ್ದಾರೆ. ವೈದ್ಯರ ಈ ಸಾಧನೆಯನ್ನು ಮೆಚ್ಚಿರುವ ಪಳನಿಸ್ವಾಮಿ ಅವರು ವೈದ್ಯರ ಜೊತೆ ತಂದೆಗೆ ಅಂಗವನ್ನು ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿಯನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್. ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್‍ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್‍ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್‍ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್‍ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…
ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…