ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ ಗೌರವ ನಿಜಕ್ಕೂ ಸಂತಸವನ್ನು ತರುವ ವಿಚಾರವಾಗಿದೆ.
ವರ್ಚವಲ್ ಆಫ್ ಯೂನಿವರ್ಸಿಟಿ ಫಾರ್ ಪೀಸ್ ಅಂಡ್ ಎಜುಕೇಶನ್ ವಿಶ್ವವಿದ್ಯಾಲಯದಿಂದ ಥ್ರಿಲ್ಲರ್ ಮಂಜು ಅವರಿಗೆ ಅವರ ಜೀವಮಾನದ ಸಾಧನೆಗಾಗಿ ಗೌರವ ಡಾಕ್ಟರೇಟ್ ಅನ್ನು ಪ್ರಧಾನ ಮಾಡಿ ಗೌರವಿಸಿದೆ. ಕಳೆದ ಮೂರು ದಶಕಗಳಿಂದ ಸಾಹಸ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ಥ್ರಿಲ್ಲರ್ ಮಂಜು ಅವರು ಕನ್ನಡ, ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ಸಾಹಸ ನಿರ್ದೇಶಕರಾಗಿ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ಪಯಣ ಆರಂಭವಾಗಿದ್ದು ಸ್ಯಾಂಡಲ್ ವುಡ್ ನಿಂದ. ಶಂಕರ್ ನಾಗ್ ಅವರ ಅಭಿನಯದ ನರಸಿಂಹ ಸಿನಿಮಾ ಮೂಲಕ 1990 ರಲ್ಲಿ ಸಾಹಸ ನಿರ್ದೇಶನ ಆರಂಭಿಸಿದರು.
ಕನ್ನಡದ ಎಲ್ಲಾ ಸೂಪರ್ ಸ್ಟಾರ್ ಗಳ ಸಿನಿಮಾಗಳಿಗೂ ಇವರು ಸಾಹಸ ನಿರ್ದೇಶನವನ್ನು ಮಾಡಿದ್ದು, ಇದುವರೆವಿಗೂ ಸುಮಾರು 500 ಕ್ಕಿಂತಲೂ ಅಧಿಕ ಸಿನಿಮಾಗಳಿಗೆ ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಪ್ರಧಾನ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರ ಅಭಿಮಾನಿಗಳು, ಸ್ನೇಹಿತರು ಶುಭಾಶಯಗಳನ್ನು ಕೋರುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…
ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…
ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…