ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ ಜೀವನ ಧಾರೆ ಎರೆಯುತ್ತಿದ್ದಾರೆ. ಜಯಲಕ್ಷ್ಮಿ ಅವರಿಗೆ ಮೂವರು ಮಕ್ಕಳಿದ್ದು, ಮೊದಲನೇ ಮಗ ರಾಜೇಶ್‍ಗೆ ಅಂಗವಿಕಲತೆ ಕಾಡುತ್ತಿದೆ.
ಪತಿ ಇಲ್ಲವಾದರೂ ಎದೆಗುಂದದ ಜಯಲಕ್ಷ್ಮಿ, ಸಣ್ಣಪುಟ್ಟ ಕೂಲಿ ಕೆಲಸ ಮಾಡಿ ಮೂವರು ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡುತ್ತಿದ್ದಾರೆ. ಏಳನೇ ತರಗತಿಯವರೆಗೆ ತಮ್ಮ ಸ್ವ-ಗ್ರಾಮವಾಗಿರುವ ಕಡುದರಹಳ್ಳಿಯಲ್ಲಿ ಓದಿದ್ದ ಬಾಬುಗೆ ಓಡಾಡಲು ಶಕ್ತಿಯಿಲ್ಲವಾದರೂ ವಿದ್ಯಾಭ್ಯಾಸದ ಚಿತ್ತ ಮಾತ್ರ ಕಡಿಮೆಯಾಗಿಲ್ಲ. ಹೀಗಾಗಿ ತನ್ನ ತಾಯಿಯ ಹೆಗಲ ಆಸರೆ ಪಡೆದು ಕಡುದರಹಳ್ಳಿಯಿಂದ ಮಿರಾಸಾಬಿಹಳ್ಳಿಯ ರಾಣಿಕೆರೆ ಹೈಸ್ಕೂಲಿಗೆ ಬಂದು ಎಂಟನೇ ತರಗತಿ ಓದುತ್ತಿದ್ದಾನೆ. ಸರ್ಕಾರದಿಂದ ರಾಜೇಶ್ ಬಾಬುಗೆ ನೀಡಿದ್ದ ತ್ರಿಚಕ್ರ ಸೈಕಲ್ ಹಾಳಾಗಿ ಮೂಲೆ ಸೇರಿದೆ. ನಿತ್ಯವೂ ತನ್ನ ತಾಯಿಯ ಹೆಗಲ ಮೇಲೆ ಶಾಲೆಗೆ ಬರುವ ರಾಜೇಶ್‍ಗೆ ಸರ್ಕಾರದಿಂದ ಅಗತ್ಯ ಸೌಲಭ್ಯ ಕಲ್ಪಿಸಬೇಕೆಂಬ ಎಂದು ಶಿಕ್ಷಕರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…
ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.