ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ.

ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ ಅತ್ಯಂತ ಪರಿಣಾಮಕಾರಿಯಾಗಿದೆ. ಈ ರಸ ಹೊಟ್ಟೆಯಲ್ಲಿಳಿದ ಬಳಿಕ ಜೀರ್ಣರಸಗಳನ್ನು ಅಗತ್ಯಪ್ರಮಾಣದಲ್ಲಿ ಸ್ರವಿಸಲು ಜಠರಕ್ಕೆ ಪ್ರಚೋದನೆ ನೀಡುತ್ತದೆ. ಪರಿಣಾಮವಾಗಿ ಹುಳಿತೇಗು, ಗ್ಯಾಸ್ಟ್ರಿಕ್, ಹೊಟ್ಟೆಯ ಹುಣ್ಣು ಮೊದಲಾದ ತೊಂದರೆಗಳಿಂದ ಕಾಪಾಡಿದಂತಾಗುತ್ತದೆ. ವಾರಕ್ಕೊಮ್ಮೆ ಬೆಳಿಗ್ಗೆದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿಯ ರಸವನ್ನು ಸೇವಿಸುವುದರಿಂದ ಆರೋಗ್ಯ ಉತ್ತಮಗೊಳ್ಳುತ್ತದೆ.
ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ತಗ್ಗಿಸುತ್ತದೆ : ಪ್ರತಿದಿನ ಬೆಳಿಗ್ಗೆ ಒಂದು ಲೋಟ ಹಾಗಲಕಾಯಿಯ ರಸವನ್ನು ಖಾಲಿಹೊಟ್ಟೆಯಲ್ಲಿ ಕುಡಿದರೆ ರಕ್ತದಲ್ಲಿ ಹೆಚ್ಚಾಗಿರುವ ಸಕ್ಕರೆಯ ಅಂಶ ಮೂರೇ ದಿನದಲ್ಲಿ ತಹಬಂದಿಗೆ ಬರುತ್ತದೆ. ಇದಕ್ಕೆ ಕಾರಣ ಹಾಗಲಕಾಯಿಯಲ್ಲಿರುವ ಕಾರಣವಾಗಿವೆ. ವಾಸ್ತವಾಗಿ ರಕ್ತದಲ್ಲಿನ ಸಕ್ಕರೆ ಉಪಯೋಗಿಸಲ್ಪಡದೇ ವಿಸರ್ಜಿಸಲಾಗಲು ಇನ್ಸುಲಿನ್ ಪ್ರಮಾಣ ಮಹತ್ವದ ಪಾತ್ರ ವಹಿಸುತ್ತದೆ. ಈ ಪೋಷಕಾಂಶಗಳು ಇನ್ಸುಲಿನ್ ಕೊರತೆಯಾಗದಂತೆ ನೋಡಿಕೊಳ್ಳುವುದೇ ಹಾಗಲಕಾಯಿಯ ಈ ಸಾಮರ್ಥ್ಯಕ್ಕೆ ಕಾರಣವಾಗಿದೆ.

ಕ್ಯಾನ್ಸರ್‌ನಿಂದ ಕಾಪಾಡುತ್ತದೆ : ರಕ್ತದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಲು ಕ್ಯಾನ್ಸರ್ ಗೆ ತುತ್ತಾಗಿ ಬಾಡಲಿಯ ಕಾರ್ಯಕ್ಷಮತೆ ಕುಸಿಯುವುದು ಪ್ರಮುಖ ಕಾರಣವಾಗಿದೆ. ಹಾಗಲಕಾಯಿಯಲ್ಲಿರುವ ಪೋಷಕಾಂಶಗಳು ಈ ಕ್ಯಾನ್ಸರ್ ಗೆ ಕಾರಣವಾದ ಅಪಾಯಕಾರಿ ಜೀವಕೋಶಗಳನ್ನು ಬೆಳೆಯದಂತೆ ತಡೆಯುತ್ತದೆ. ಪರಿಣಾಮವಾಗಿ ಬಾಡಲಿ ಸುಕ್ಷಮವಾಗಿ ಕಾರ್ಯನಿರ್ವಹಿಸಿ ರಕ್ತಕ್ಕೆ ಅಗತ್ಯವಾದ ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸಿಕೊಡಲು ಸಾಧ್ಯವಾಗುತ್ತದೆ.
ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ : ಹಾಗಲಕಾಯಿಯ ರಸದಲ್ಲಿ ಬೀಟಾ-ಕ್ಯಾರೋಟೀನ್ ಮತ್ತು ವಿಟಮಿನ್ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅಗತ್ಯವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡಿದಂತಾಗುತ್ತದೆ. ಅಲ್ಲದೇ ಉತ್ತಮ ಪ್ರಮಾಣದಲ್ಲಿರುವ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟುಗಳು ಮಧುಮೇಹದ ಕಾರಣದಿಂದಾಗಿ ಉತ್ಪತ್ತಿಯಾಗುವ ದೃಷ್ಟಿದೋಷದಿಂದ (oxidative stress) ಕಣ್ಣುಗಳನ್ನು ಕಾಪಾಡುತ್ತವೆ. ಹಾಗಲಕಾಯಿಯ ನಿಯಮಿತ ಸೇವನೆಯಿಂದ ಕಣ್ಣುಗಳ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಬರಲು ಸಾಧ್ಯವಾಗುತ್ತದೆ.

ಮೊಡವೆಗಳಿಗೆ : ಹಾಗಲಕಾಯಿಯ ಸೇವನೆಯು ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ ಮಾತ್ರವಲ್ಲದೇ ಆಳವಾದ ಚರ್ಮದ ಸೋಂಕುಗಳಿಗೂ ಶಮನಕಾರಿಯಾಗಿದೆ. ಹಾಗಲಕಾಯಿಯ ರಸವನ್ನು ನಿಂಬೆ ಹಣ್ಣಿನ ರಸದೊಂದಿಗೆ ಬೆರೆಸಿ, ಪ್ರತಿದಿನ ಖಾಲಿ ಹೊಟ್ಟೆಗೆ 6 ತಿಂಗಳುಗಳ ಕಾಲ ಸೇವಿಸಿರಿ ಇಲ್ಲವೇ ನಿಮ್ಮ ನಿರೀಕ್ಷಿತ ಫಲಿತಾಂಶ ದೊರೆಯುವವರೆಗೆ ಸೇವನೆಯನ್ನು ಮುಂದುವರೆಸಿರಿ.
ರಕ್ತವನ್ನು ಶುದ್ಧೀಕರಿಸುತ್ತದೆ : ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿ ರಸವನ್ನು ಸೇವಿಸುವುದರಿಂದ ರಕ್ತ ಶುದ್ಧಿಗೊಂಡು ಚರ್ಮದ ವಿವಿಧ ತೊಂದರೆಗಳು ಮಾಯವಾಗಿ ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ. ಶುದ್ದೀಕರಣಗೊಂಡ ರಕ್ತದ ಮೂಲಕ ಇಡಿಯ ಶರೀರ ಆರೋಗ್ಯದಿಂದ ಕಂಗೊಳಿಸುತ್ತದೆ.

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಮಾಡುತ್ತದೆ ಹಾಗಲಕಾಯಿಯಲ್ಲಿ ಫೈಟೋನ್ಯೂಟ್ರಿಯೆಂಟ್‌ಗಳೆಂಬ ಆಂಟಿ ಆಕ್ಸಿಡೆಂಟುಗಳಿದ್ದು ಇವು ಕೆಟ್ಟ ಕೊಲೆಸ್ಟಾಲ್ ಕಣಗಳನ್ನು ತಮ್ಮೊಂದಿಗೆ ಅಂಟಿಸಿಕೊಂಡು ಹೋಗುವ ಕ್ಷಮತೆ ಪಡೆದಿವೆ. ಹಾಗಲಕಾಯಿಯನ್ನು ತರಕಾರಿಯ ರೂಪದಲ್ಲಿ ಆಲಿವ್ ಎಣ್ಣೆಯೊಡನೆ ಸೇವಿಸಿದರೆ ಕೊಂಚ ಕಹಿ ಎನಿಸಿದರೂ ನಿಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ನಿವಾರಿಸುವ ಮೂಲಕ ಆರೋಗ್ಯವನ್ನು ವೃದ್ಧಿಸುತ್ತದೆ.
ಮಧುಮೇಹ ಗುಣಪಡಿಸಲು ನೆರವಾಗುತ್ತದೆ :ಬಾಳೆಹಣ್ಣು ಹಣ್ಣುಗಳು ಆರೋಗ್ಯ ರಹಸ್ಯಗಳನ್ನು ಮಧುಮೇಹವನ್ನು ಗುಣಪಡಿಸಲು ಹಾಗಲಕಾಯಿಯ ಜ್ಯೂಸ್ ಅತಿ ಸಾಮಾನ್ಯವಾದ, ಜನಪ್ರಿಯ ಪರಿಹಾರವಾಗಿದೆ. insulin ಗೆ ಸಮನಾದ ಕೆಲವು ರಾಸಾಯನಿಕಗಳು ಹಾಗಲಕಾಯಿಯಲ್ಲಿದ್ದು, ಅವು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.
ಸಿನಿಮಾವೊಂದರ ಬಗ್ಗೆ ಬಿಡುಗಡೆಗು ಮುನ್ನವೇ ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ ಚೇತನ್ ಅವರು ಈ…
ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್ ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್ ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.
ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್. ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….