ಸುದ್ದಿ

ತಮಿಳುನಾಡು ವಿರುದ್ಧ 1 ರನ್ ರೋಚಕ ಗೆಲುವು ಸಾಧಿಸಿ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ.

35

ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್‍ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್‍ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್‍ರೈಸರ್ಸ್ ಹೈದರಾಬಾದ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಪ್ರಕಾರ ಮದುವೆಯ ಆಚರಣೆ ಇನ್ನೂ ಎರಡು ದಿನಗಳ ಕಾಲ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರು ಭಾಗಿಯಾಗಿದ್ದಾರೆ. 

2012ರಲ್ಲಿ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶ್ರಿತಾ ‘ಇಂದ್ರಜಿತ್’, ‘ಒರು ಕಣ್ಣಿಯುನ್ ಮೂನು ಕಲಾವಾನಿಕಲಂ’, ‘ಉದಯಂ ಎನ್.ಎಚ್4’ ಸೇರಿದಂತೆ ಹಲವು ಚಿತಗಳಲ್ಲಿ ನಟಿಸಿದ್ದಾರೆ. ಬ್ಯೂಟಿ ಕಾಂಪಿಟೇಶನ್ ಭಾಗವಹಿಸಿದ ಆಶ್ರಿತಾ ಜಾಹೀರಾತುಗಳಲ್ಲಿಯೂ ಅಭಿನಯಿಸಿದ್ದಾರೆ.
ಭಾನುವಾರ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮನೀಶ್ ಪಾಂಡೆ ಅವರ ನಾಯಕತ್ವದಲ್ಲಿ ತಮಿಳುನಾಡಿನ ತಂಡದ ವಿರುದ್ಧ ಕರ್ನಾಟಕ ತಂಡ ಜಯಗಳಿಸಿದೆ. ಈ ಪಂದ್ಯದಲ್ಲಿ ಮನೀಶ್ 60 ರನ್‍ಗಳನ್ನು ಗಳಿಸಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

    ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.  ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು…

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • ಸುದ್ದಿ

    ಸರ್ಕಾರಿ ಶಾಲೆ ಒಂದರಲ್ಲಿ ಬಿಸಿ ಊಟದಲ್ಲಿ ಹಾವು ಪತ್ತೆ…ಎಲ್ಲಿ ಗೊತ್ತೇ?

    ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…

  • ಸುದ್ದಿ

    ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

    ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ…

  • ಹಣ ಕಾಸು

    ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

    ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.