ಸುದ್ದಿ, ಸ್ಪೂರ್ತಿ

100 ರೂ.ಗೆ ರೆಡಿಯಾಗುತ್ತೆ ಶಾಲಾ ಸಮವಸ್ತ್ರ. ಟೈಲರ್ ಆದ್ರೂ ಸಮಾಜಮುಖಿ ಸೇವೆ 5 ವರ್ಷದಲ್ಲಿ 30 ಸಾವಿರಕ್ಕೂ ಹೆಚ್ಚು ಯೂನಿಫಾರ್ಮ್.

85


ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ.

ಬೇರೆಯವರ ಬಳಿ ಒಂದು ಜೊತೆ ಬಟ್ಟೆ ಹೊಲಿಸಬೇಕೆಂದ್ರೆ 300 ರಿಂದ 400 ರೂ. ನೀಡಬೇಕು. ಎಸಾಬುಲ್ಲಾ ಖಾನ್ 100 ರೂಪಾಯಿಗೆ ಬಟ್ಟೆ ಹೊಲಿದು ಕೊಡ್ತಿರೋದು ಅವರ ಸೇವಾ ಮನೋಭಾವ ತೋರಿಸುತ್ತದೆ. ಶಾಲಾ ಮಕ್ಕಳು 100 ಜನ ಇದ್ದರೆ, ಅದರಲ್ಲಿ 10 ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಟ್ಟೆ ಹೊಲಿದು ಕೊಡುತ್ತಾರೆ. 

ಇವರಿಗೆ ಮಕ್ಕಳು ಸಮವಸ್ತ್ರ ಧರಿಸಿ ಹೋಗಬೇಕು ಎಂಬುದು ಆಸೆ. ಸರ್ಕಾರ ಮಕ್ಕಳಿಗೆ ಉಚಿತವಾಗಿ ಬಟ್ಟೆ ನೀಡುತ್ತೆ, ಆದ್ರೆ ನೂರಾರು ರೂಪಾಯಿ ಖರ್ಚು ಮಾಡಿ ಸಮವಸ್ತ್ರ ಹೊಲಿಸೋದು ಬಡ ಕುಟುಂಬಗಳಿಗೆ ಹೊರೆಯಾಗಿತ್ತು. ಬಡ ಕುಟುಂಬಗಳ ಮನದಾಳ ಅರಿತ ಎಸಾಬುಲ್ಲಾ ಕಡಿಮೆ ಬೆಲೆಯಲ್ಲಿ ಮಕ್ಕಳಿಗೆ ಸಮವಸ್ತ್ರ ಹೊಲಿಯಲು ಮುಂದಾದರು. ಕಳೆದ ಐದು ವರ್ಷಗಳಿಂದ ಎಸಾಬುಲ್ಲಾ ಕೇವಲ ನೂರು ರೂಪಾಯಿಗೆ ಸಮವಸ್ತ್ರ ಸಿದ್ಧ ಮಾಡಿಕೊಡುತ್ತಿದ್ದಾರೆ. ಈ ಬಟ್ಟೆ ಹೊಲಿಯುವ ಕಾಯಕದ ಮೂಲಕ 10 ಜನ ಮಹಿಳೆಯರಿಗೆ ಅನ್ನದಾತರಾಗುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೆಮಿಕಲ್ ಗೋಡಾನ್‍ನಲ್ಲಿ ಅಗ್ನಿ ಅನಾಹುತ

    ಕೆಮಿಕಲ್ ಗೋಡಾನ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್‍ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್‍ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್‍ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಜ್ಯೋತಿಷ್ಯ

    ನಿಮ್ಮ ಗುರುವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್‌ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…

  • ಹಣ ಕಾಸು

    ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

    ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.

  • ವಿಸ್ಮಯ ಜಗತ್ತು

    ಇವರು ನಮ್ಮ ಇಂಡಿಯನ್ ರಿಯಲ್ ಸ್ಪೈಡರ್ ಮ್ಯಾನ್!ಅಲಿಯಾಸ್ ಕೋತಿ ರಾಜ್.ಇವರ ಸಾಹಸದ ಬಗ್ಗೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ!

    ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!

  • ಕ್ರೀಡೆ, ಸಾಧನೆ, ಸುದ್ದಿ

    1500 ಮೀ. ಓಡಿ ಚಿನ್ನ ಗೆದ್ದು ಮೈದಾನದಲ್ಲೇ ಮೃತಪಟ್ಟ 78 ವರ್ಷದ ವೃದ್ಧ.

    78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್‍ನ ಸಂಗ್ರೂರ್‍ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…