ಆರೋಗ್ಯ

ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತೀರಾ! ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ.

115

ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ.

ಪಪ್ಪಾಯಿ ಬೀಜಗಳ ಉಪಯೋಗವೇನು?

1. ಕ್ಯಾನ್ಸರ್
ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ.

2. ಹೊಟ್ಟೆನೋವು ಕಡಿಮೆ ಮಾಡುತ್ತದೆ
ಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ ಒಂದು ಚಮಚ ಪಪ್ಪಾಯಿ ಬೀಜದ ಪುಡಿಯನ್ನು ನೀರಿನಲ್ಲಿ ಬೆರಿಸಿ ಕುಡಿಯುವುದರಿಂದ ಹೊಟ್ಟೆನೋವು ಕಡಿಮೆಯಾಗುತ್ತದೆ.

3. ಮೊಡವೆ ಸಮಸ್ಯೆ
ದೇಹದ ಹಾರ್ಮೊನ್‍ನಲ್ಲಿ ಆಗುವ ಏರುಪೇರಿನಿಂದ ಸಾಮಾನ್ಯವಾಗಿ ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಪಪ್ಪಾಯಿ ಬೀಜಗಳು ಮತ್ತು ಪಪ್ಪಾಯಿ ಎಲೆಗಳನ್ನು ಅರೆದು ಫೇಸ್‍ಪ್ಯಾಕ್ ತಯಾರಿಸಿ, ಮುಖಕ್ಕೆ ಹಚ್ಚಿ 10 ನಿಮಿಷದ ಬಳಿಕ ತಣ್ಣಿರಲ್ಲಿ ಮುಖ ತೊಳೆದರೆ ಮೊಡವೆ ಕಡಿಮೆಯಾಗುತ್ತದೆ. ಆರೋಗ್ಯಕ್ಕೆ ಒಳ್ಳೆಯದು ಎಂದು ಹೆಚ್ಚಾಗಿ ಪಪ್ಪಾಯಿ ಬೀಜಗಳನ್ನು ಸೇವಿಸಿದರೂ ಅಪಾಯಕಾರಿ. ಹೆಚ್ಚಿನ ಪ್ರಮಾಣದಲ್ಲಿ ಪಪ್ಪಾಯಿ ಬೀಜಗಳನ್ನು ಸೇವಿಸಿದರೆ ಆರೋಗ್ಯದ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತದೆ. ಆದ್ದರಿಂದ ಮಿತವಾಗಿ, ಸ್ವಲ್ಪ ಪ್ರಮಾಣದಲ್ಲಿ ಪಪ್ಪಾಯಿ ಬೀಜ ಸೇವಿಸಿ ಆರೋಗ್ಯಕರ ಲಾಭ ಪಡೆಯಿರಿ.

4. ಮೂತ್ರಪಿಂಡದ ಸಮಸ್ಯೆ
ಮೂತ್ರಪಿಂಡದ ಸಮಸ್ಯೆ, ಕಾಯಿಲೆ, ವೈಫಲ್ಯಗಳನ್ನು ತಡೆಗಟ್ಟುವಳ್ಳಿ ಪಪ್ಪಾಯಿ ಬೀಜ ಪ್ರಮುಖ ಪಾತ್ರ ವಹಿಸುತ್ತದೆ. ಮೂತ್ರಪಿಂಡದ ಸಮಸ್ಯೆ ಇದ್ದವರು 3ರಿಂದ 4 ಪಪ್ಪಾಯಿ ಬೀಜವನ್ನು ಪುಡಿಮಾಡಿ ಅಥವಾ ಅರೆದು ನೀರಿನಲ್ಲಿ ಬೆರಿಸಿ ಕುಡಿದರೆ ನಿಧಾನವಾಗಿ ಸಮಸ್ಯೆಯಿಂದ ಪಾರಾಗಬಹುದು.

5. ಯಕೃತ್ತಿನ(ಲಿವರ್) ಕಾಯಿಲೆ
ಪಪ್ಪಾಯಿ ಬೀಜಗಳು ಯಕೃತ್ತಿನ ಸಿರೋಸಿಸ್ ಗುಣಪಡಿಸುವ ಪೋಷಕಾಂಶಗಳನ್ನು ಹೊಂದಿದೆ. 6 ಒಣಗಿದ ಪಪ್ಪಾಯಿ ಬೀಜಗಳನ್ನು ಪುಡಿಮಾಡಿ ಅಥವಾ ಜಜ್ಜಿ ಅದನ್ನು ಆಹಾರ ಅಥವಾ ನೀರು, ನಿಂಬೆ ರಸದೊಂದಿಗೆ ಬೆರಿಸಿ ಸೇವಿಸಿದರೆ ಲಿವರ್ ಸಮಸ್ಯೆ ಕ್ರಮೇಣ ಕಡಿಮೆಯಾಗುತ್ತದೆ. 30 ದಿನಗಳ ಕಾಲ ಪ್ರತಿನಿತ್ಯ ಹೀಗೆ ಮಾಡುವುದರಿಂದ ಲಿವರ್ ಸಮಸ್ಯೆ ಕಡಿಮೆ ಮಾಡಿಕೊಳ್ಳಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಓರ್ವ ಆಸ್ಪತ್ರೆಗೆ ದಾಖಲು…….!

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್‌ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…

  • ಉಪಯುಕ್ತ ಮಾಹಿತಿ

    ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

    ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.

  • ಜೀವನಶೈಲಿ

    ಸ್ಪೂನ್ ಬಿಡಿ…ಕೈ ನಲ್ಲಿ ಊಟ ಮಾಡಿ…ಆಮೇಲೆ ನೋಡಿ ಏನ್ ಲಾಭ ಆಗುತ್ತೆ ಅಂತಾ..!ತಿಳಿಯಲು ಈ ಲೇಖನ ಓದಿ…

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು

  • ಉಪಯುಕ್ತ ಮಾಹಿತಿ

    ನಿಮ್ಮ ಮುಖದ ಮೇಲಿನ ಅನಾವಶ್ಯಕ ಕೂದಲನ್ನು ತೆಗೆಯಲು ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…

  • ಸುದ್ದಿ

    ಈ ಮೀನಿನ ಮುಖ ನೋಡಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ ಯಾಕೆ ಗೊತ್ತಾ?ನೀವೇ ನೋಡಿ ಫ್ರೆಂಡ್ಸ್…

    ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…