ಆರೋಗ್ಯ

ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

50

ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು.

ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು ವಾಕಿಂಗ್, ಜಾಗಿಂಗ್, ಸೈಕ್ಲಿಂಗ್, ಈಜು ಇವೆಲ್ಲಾ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ತುಂಬಾ ಸಹಕಾರಿ. ವಾರದಲ್ಲಿ 5 ದಿನ ವ್ಯಾಯಾಮ ಮಾಡಿದರೆ ಒಳ್ಳೆಯದು.

ರಕ್ತದೊತ್ತಡ ಸಮಸ್ಯೆ ಇರುವವರು ಆಹಾರ ತಿನ್ನುವಾಗ ಉಪ್ಪಿನ ಪ್ರಮಾಣದ ಕಡೆ ಗಮನ ಕೊಡುವುದು ಒಳ್ಳೆಯದು. ಸಾಮಾನ್ಯವಾಗಿ ಒಬ್ಬ ಮನುಷ್ಯ ದಿನದಲ್ಲಿ 9-12ಗ್ರಾಂ ಉಪ್ಪಿನಂಶ ಸೇವಿಸುತ್ತಾನೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ 5ಗ್ರಾಂಕ್ಕಿಂತ ಕಡಿಮೆ ಪ್ರಮಾಣದಲ್ಲಿ ಉಪ್ಪು ತಿನ್ನುವುದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ಅಧಿಕ ರಕ್ತದೊತ್ತಡ ನಿವಾರಣೆಗೆ ಆಹಾರ ಸೂತ್ರವನ್ನೂ ಪಾಲಿಸುವುದು ಪರಿಣಾಮಕಾರಿ. ಹಣ್ಣುಗಳು, ತರಕಾರಿ, ಕಡಿಮೆ ಕೊಬ್ಬು ಇರುವ ಡೈರಿ ಉತ್ಪನ್ನಗಳನ್ನು ಸೇವಿಸುವುದು ಉತ್ತಮ ಎನ್ನುತ್ತಾರೆ ತಜ್ಞರು.

ದಾಸವಾಳದ ಚಹಾ : ಇದರಲ್ಲಿ ಆ್ಯಂಥೋಸಿಯಾನಿನ್‌ ಹಾಗೂ ಆ್ಯಂಟಿ ಆಕ್ಸಿಡೆಂಟ್‌ಗಳು ಇರುವುದರಿಂದ ಇವು ರಕ್ತನಾಳಗಳ ಅಗಲ ಕಿರಿದಾಗುವುದನ್ನು ತಡೆಯುತ್ತವೆ.

ಗ್ರೀನ್‌ಟೀ : ಇದರಲ್ಲಿರುವ ಪಾಲಿಫೆನಾಲ್‌ ಅಂಶವು ರಕ್ತದೊತ್ತಡವನ್ನು ತಡೆಯುತ್ತದೆ.

ದಾಳಿಂಬೆ ಜ್ಯೂಸ್‌ : ಇದು ರಕ್ತದೊತ್ತಡ ಕಡಿಮೆ ಮಾಡುತ್ತದೆ. ಅಪಧಮನಿಗಳಲ್ಲಿ ತಡೆ ಉಂಟಾಗುವುದನ್ನು ತಪ್ಪಿಸುತ್ತದೆ.

ಬೀಟ್‌ರೂಟ್‌ ಜ್ಯೂಸ್‌ : ಇದು ಅಪಧಮನಿಗಳನ್ನು ರಿಲ್ಯಾಕ್ಸ್‌ ಮಾಡುತ್ತದೆ. ಪ್ರತಿದಿನ 250 ಎಂಎಲ್‌ ಬೀಟ್‌ರೂಟ್‌ ಜ್ಯೂಸ್‌ ಸೇವನೆಯಿಂದ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು.

ಬಾಳೆಹಣ್ಣು : ಪೊಟ್ಯಾಷಿಯಂ ಅಧಿಕವಿರುವ ಆಹಾರ ಸೇವನೆಯೂ ಉತ್ತಮ. ಹೀಗಾಗಿ ಬಾಳೆಹಣ್ಣು ರಕ್ತದೊತ್ತಡ ಇರುವವರಿಗೆ ಪೂರಕ.

ಬ್ರೊಕೊಲಿ: ಪೊಟ್ಯಾಷಿಯಂ, ಮೆಗ್ನೇಷಿಯಂ ಹಾಗೂ ಕ್ಯಾಲ್ಶಿಯಂ ಅಧಿಕವಿರುವ ಬ್ರೊಕೊಲಿ ರಕ್ತದೊತ್ತಡ ನಿಯಂತ್ರಿಸಲು ಅತ್ಯುತ್ತಮ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized

    ಬಿಸಿಲು ಬಿಸಿಲು ಬಿಸಿಲು…!!!

    ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…

  • ಸುದ್ದಿ

    ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ ಭಾರತೀಯ ವಿಜ್ಞಾನಿಗಳು,..!

    ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ್ದಾರೆ. ಅಹಮದಾಬಾದ್‌,  ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…

  • ಸಿನಿಮಾ

    ಈ ನಟ ‘ಮೆಗಾ ಸ್ಟಾರ್’ ಆದ್ರೂ ಈಗಲೂ ಬೀಡಿ ಸೇದುತ್ತಾರೆ..!ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…

  • Cinema

    ಟ್ರೋಲ್ ಪೇಜ್ ವಿರುದ್ಧ ಗರಂ ; ಹೀಯಾಳಿಸಿದವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ ರಶ್ಮಿಕಾ ಮಂದಣ್ಣ..!

     ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್​ಸ್​ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್​ ಸ್ಟಾಗ್ರಾಮ್​ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್​ ಸ್ಟಾಗ್ರಾಮ್​ನಲ್ಲಿ ಪೊಸ್ಟ್​ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್​ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…

  • ಜೀವನಶೈಲಿ

    ನಿಮ್ಮ ದೇಹದ ಶಾಖವನ್ನು ಕಡಿಮೆ ಮಾಡಲು ಈ ಆಹಾರ ಕ್ರಮಗಳನ್ನು ಅನುಸರಿಸಿ…ತಿಳಿಯಲು ಈ ಲೇಖನ ಓದಿ…

    ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.