ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು, ಗುರುವಾರ ಆತನ ಪೋಷಕರು ಹತ್ತಿರದಲ್ಲಿದ್ದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ವೈದ್ಯರು ಸಂತೋಷ್‍ನನ್ನು ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲು ಸಲಹೆ ನೀಡಿದ್ದರು. ಅಲ್ಲದೆ ಸಂತೋಷ್‍ನನ್ನು ಆಸ್ಪತ್ರೆಗೆ ಸಾಗಿಸುವ ಕೆಲಸವನ್ನು ಅಂಬುಲೆನ್ಸ್ ಚಾಲಕ ಆಕಾಶ್ ಅವರಿಗೆ ವಹಿಸಲಾಗಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಆಕಾಶ್, ವೈದ್ಯರು ಆದಷ್ಟು ಬೇಗ ಕೊಯಮತ್ತೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗು ಎಂದು ಸೂಚಿಸಿದ್ದರು. ನಾನು ಸಂಜೆ ಸುಮಾರು 7 ಗಂಟೆಗೆ ವೆಲ್ಲಾಕೋಯಿಲ್ ಹೊರಟ್ಟಿದ್ದು, 8.10ಕ್ಕೆ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತಲುಪಿದೆ. ಇದು 90 ಕಿ.ಮೀ ಪ್ರಯಾಣವಾಗಿದ್ದು, ಸಂತೋಷ್‍ನನ್ನು ಮಕ್ಕಳ ವಾರ್ಡ್‍ಗೆ ದಾಖಲಿಸಲಾಯಿತು. ಸಂತೋಷ್ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಿದ್ದಾರೆ. ನಾನು 10ನೇ ತರಗತಿ ಡ್ರಾಪೌಟ್ ಆಗಿದ್ದು, ಇತ್ತೀಚೆಗೆ ಸ್ವಂತ ಅಂಬುಲೆನ್ಸ್ ಖರೀದಿಸಿದೆ. ಮುಂದಿನ ದಿನಗಳಲ್ಲಿ ಮತ್ತೊಂದು ಅಂಬುಲೆನ್ಸ್ ಖರೀದಿಸುವ ಮೂಲಕ ನನ್ನ ಬುಸಿನೆಸ್ ವಿಸ್ತರಿಸಲು ನಿರ್ಧರಿಸಿದ್ದೇನೆ. ರೋಗಿಗಳು ಹಾಗೂ ಆಸ್ಪತ್ರೆಗಳು ಬೇಡಿಕೆ ಇಟ್ಟಾಗ ನಾನು ಗಡಿಯನ್ನು ಮೀರಿ ಕೆಲಸ ಮಾಡುತ್ತೇನೆ ಎಂದು ಆಕಾಶ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್‌ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…
ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್ ಮೀನಿನ ಕಾಟವು ಮುಂದುವರೆದಿದೆ ಇದರಿಂದ ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…