ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು.
ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು.
ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು. ರಾಯಚೂರು – ಗುಂತಕಲ್ ಮಾರ್ಗದಲ್ಲಿ ಗೀತಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಗೀತಾ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.
ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….