ಉಪಯುಕ್ತ ಮಾಹಿತಿ

ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

383

ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ.

ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ ಯಾವ ಬಣ್ಣದ ಪ್ಯಾಕೆಟ್ ತರ್ಬೇಕು ಅನ್ನೋ ಪ್ರಶ್ನೇನ ಎಲ್ಲರೂ ಹಾಕಿಕೊಳ್ಳೋದಿಲ್ಲ. ಎಲ್ಲರೂ ಯಾವುದು ಕೊಂಡ್ಕೋತಾರೋ ಅದನ್ನೇ ತರೋದು ವಾಡಿಕೆ. ಅದು ಸಾಮಾನ್ಯವಾಗಿ ನೀಲಿ ಬಣ್ಣದ ಪ್ಯಾಕೆಟ್ಟೇ ಆಗಿರುತ್ತೆ!

ಆದರೆ ನಂದಿನಿ ಹಾಲ್ನ ಸರಿಯಾಗಿ ಬಳಸಬೇಕು, ಅದರಿಂದ ಆದಷ್ಟು ಹೆಚ್ಚು ಉಪಯೋಗ ಪಡ್ಕೋಬೇಕು ಅನ್ನೋದಾದರೆ ಕೆಳಗಿನ ಮಾಹಿತಿ ಗಮನದಲ್ಲಿಡಿ…

1. ಹಾಗೇ (ಕಾಯಿಸದೆ) ಕುಡಿಯೋಕ್ಕೆ: ಬೆಳಗ್ಗೆ ಎದ್ದು ಹಾಲು ಕಾಯಿಸಿ ಕುಡಿಯಕ್ಕೆ ಟೈಮ್ ಇಲ್ವಾ? ಹಾಗಾದರೆ ನಂದಿನಿ ಗುಡ್ ಲೈಫ್ ಮಿಲ್ಕ್ ಪ್ಯಾಕೆಟ್ ತೊಗೊಂಡು ಹಾಗೆಯೇ ಕುಡಿಬೋದು. ಯಾಕೆ ಗೊತ್ತಾ? ಈ ಹಾಲನ್ನು ಪ್ಯಾಕೆಟಿಗೆ ಹಾಕೋ ಮುಂಚೆನೇ 137 ಡಿಗ್ರಿ ಸೆಲ್ಶಿಯಸ್ ತಾಪಮಾನದಲ್ಲಿ 4 ನಿಮಿಷಗಳ ತನಕ ಕಾಯಿಸಿ ತಕ್ಷಣವೇ ತಣ್ಣಗೆ ಮಾಡಿರುತ್ತಾರೆ. ಅದ್ದರಿಂದ ಈ ಹಾಲಿನಲ್ಲಿ ಬ್ಯಾಕ್ಟೀರಿಯಾ ಬೆಳೆಯಕ್ಕೆ ಅವಕಾಶವಿಲ್ಲ. ಟೆಟ್ರಾ ಪ್ಯಾಕಿನಲ್ಲಿ ಹಾಕುವುದರಿಂದ ಹೊರಗಿನ ಯಾವ ಉಷ್ಣಾಂಶದಿಂದ ಹಾಲು ಒಡೆಯುವುದಿಲ್ಲ.

2. ಗಟ್ಟಿ ಕಾಫಿ ಮಾಡೋಕ್ಕೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದು ಗಟ್ಟಿ ಕಾಫಿ ಮಾಡಿಕೊಳ್ಳಬಹುದು. ಪೂರ್ತಿ ಕೆನೆಯ ಅಂಶ ಈ ಹಾಲಿನಲ್ಲಿ ಇರೋ ಹಾಗೆ ಮಾಡಿರುತ್ತಾರೆ. ಆದ್ರೇನೂ ಕೆನೆ-ಕೆನೆ ಕಟ್ಟಿಕೊಳ್ಳುವುದಿಲ್ಲ. ಯಾಕಂದ್ರೆ ಹೊಮೊಜಿನೈಸ್ಡ್ ಹದಕ್ಕೆ ಮಾಡಿರುತ್ತಾರೆ.

3. ಹಿರಿಯರಿಗೆ ಕುಡಿಯಲು: ನಂದಿನಿಯ ಗುಡ್ ಲೈಫ್ ಸ್ಲಿಮ್ಡ್ ಸ್ಕಿನ್ ಮಿಲ್ಕ್ ಪ್ಯಾಕೆಟ್ ಕೂಡ ತೊಗೊಬಹುದು. ಇದರಲ್ಲಿ ಹೆಸರೇ ಹೇಳುವಂತೆ ಕೊಬ್ಬಿನಂಶ ಕಡಿಮೆ ಇರುವುದರಿಂದ ವಯಸ್ಸಾದವರಿಗೆ ಜೀರ್ಣಿಸಿಕೊಳ್ಳಲು ಸುಲಭ. ಇದಲ್ಲದೆ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲೂ ಕಡಿಮೆ ಕೊಬ್ಬಿನಂಶ ಇರತ್ತೆ.

4. ಕಾಫಿ ಅಥವಾ ಟೀ ಮಾಡೋಕ್ಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದು ಮಾಡಿದರೆ ಹಾಲು ಒದಗುತ್ತದೆ. ಹೆಚ್ಚು ಲೋಟ ಕಾಫಿ/ಟೀ ಮಾಡಬಹುದು. ರುಚಿಯೂ ಚೆನ್ನ.

5. ಗಟ್ಟಿ ಮೊಸರು ಮಾಡೋಕ್ಕೆ: ನಂದಿನಿಯ ಸ್ಪೆಶಲ್ ಹಸಿರು ಬಣ್ಣದ ಪ್ಯಾಕೆಟ್ ಅಂದರೆ ಸ್ಪೆಶಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.

6. ಬೆಳೆಯುವ ಮಕ್ಕಳಿಗೆ: ಕಿತ್ತಳೆ ಬಣ್ಣದ ನಂದಿನಿಯ ಶುಭಂ ಪ್ಯಾಕೆಟ್. ಅಥವಾ ಸಂಪೂರ್ಣ ಸ್ಟ್ಯಾಂಡರ್ಡೈಸ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಬೆಳೆಯುವ ಮಕ್ಕಳಿಗೆ ಬೇಕಾಗುವ ಕೊಬ್ಬಿನಂಶ ಇರತ್ತೆ. ಅವರ ದಿನ ನಿತ್ಯದ ಚಟುವಟುಕೆಗಳಿಗೆ ಸಾಕಷ್ಟು ಶಕ್ತಿ ಕೊಡತ್ತೆ.

8. ಪಾಯಸ ಅಥವಾ ಹಾಲಿನಿಂದ ಮಾಡುವ ಸಿಹಿ ಪದಾರ್ಥಗಳಿಗೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದರೆ ತುಂಬಾ ಚೆನ್ನಾಗಿ ಆಗತ್ತೆ. “ಮಿಲ್ಕ್ ಮೈಡ್” ತರುವ ಬದಲು.

7. ಕಾಯಿಸಿ ಕುಡಿಯಲು: ಉಕ್ಕು ಬರುವ ತನಕ ಕಾಯಿಸಿಕೊಂಡು ಕುಡಿಯುವುದಕ್ಕೆ ನಂದಿನಿಯ ಯಾವ ಬಣ್ಣದ ಪ್ಯಾಕೆಟ್ ಬೇಕಾದರೂ ತರಬಹುದು.

9. ಪುಟ್ಟ ಮಕ್ಕಳಿಗೆ ಕುಡಿಸೋಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.

10. ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ಇರುವವರಿಗೆ: ನಂದಿನಿ  ಸ್ಮಾರ್ಟ್ ಡಬಲ್ ಟೋನ್ಡ್ ಹೊಮೊಜಿನೈಸೆಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.

11. ಕೊಬ್ಬು ಇಳಿಸೋಕೆ: ಕೊಬ್ಬು ಕರಗಬೇಕು ಅಂತ ಹಾಲು ಕುಡಿಯೋದನ್ನ ನಿಲ್ಲಿಸಬಿಟ್ಟರೆ ಬೇರೆ ಪೌಷ್ಟಿಕಾಂಶಗಳ ಕೊರತೆ ಉಂಟಾಗತ್ತೆ. ಇದಕ್ಕೆ ಸುಲಭವಾಗಿ ಸಿಗುವ ನಂದಿನಿಯ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ – ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಕಡಿಮೆ ಕೊಬ್ಬಿನಂಶ ಇರತ್ತೆ.

12. ತುಂಬಾ ದಿನ ಇಟ್ಟುಕೊಳ್ಳಬೇಕಾದರೆ: ಪ್ರವಾಸಕ್ಕೆ ಹೋಗ್ಬೇಕು, ಮಕ್ಕಳಿಗೆ ಹಾಲು ಸಿಗಲ್ವಲ್ಲಾ ಅಂತ ಚಿಂತೆ ಬಂದರೆ ನಂದಿನಿಯ ಗುಡ್ ಲೈಫ್ ಟೆಟ್ರಾ ಪ್ಯಾಕ್ ತೊಗೊಳ್ಳಿ. 10 ದಿನದ ತನಕ ಹಾಲನ್ನು ಹಾಗೆ ಕುಡಿಯಬಹುದು. ಕಾಯಿಸುವುದೂ ಬೇಡ. ಟೆಟ್ರಾ ಪ್ಯಾಕಿನಲ್ಲಿ ಇರುವುದರಿಂದ ಹಾಲು ಒಡೆಯುವುದಿಲ್ಲ.

13. ಬರೀ ಹಸುವಿನ ಹಾಲು ಬೇಕು ಅನ್ನುವವರಿಗೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.

ಅನ್ನ ನೈಸರ್ಗಿಕವಾಗಿ ತಂಪು ಉಂಟುಮಾಡುತ್ತದೆ. ಬೆಳಗ್ಗೆ ರಾತ್ರಿಯ ಅನ್ನವನ್ನು ಊಟ ಮಾಡುವುದರಿಂದ ದೇಹ ತಂಪಾಗಿರುತ್ತದೆ. ರಾತ್ರಿ ಮಿಕ್ಕಿದ ಅನ್ನವನ್ನು ಬೆಳಗ್ಗೆ ಸೇವಿಸುವುದರಿಂದ ಉದರ ಸಂಬಂಧಿ ಕಾಯಿಲೆಗಳು ದೂರವಾಗುತ್ತದೆ. ದೇಹದಲ್ಲಿ ಎಲ್ಲಾದರೂ ಹುಣ್ಣುಗಳಾಗಿದ್ದರೆ ರಾತ್ರಿ ಮಿಕ್ಕಿದ ಅನ್ನವನ್ನು ಅದಕ್ಕೆ ಹಚ್ಚುವುದರಿಂದ ಹುಣ್ಣು ಬೇಗ ವಾಸಿಯಾಗುತ್ತದೆ. ರಾತ್ರಿ ಉಳಿದ ಅನ್ನವನ್ನು ಸೇವಿಸುವುದರಿಂದ ಕೊಬ್ಬು ಕಡಿಮೆಯಾಗಿ ದೇಹದ ತೂಕ ಕಡಿಮೆಯಾಗಿತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಟ್ರೋಲ್ ಪೇಜ್ ವಿರುದ್ಧ ಗರಂ ; ಹೀಯಾಳಿಸಿದವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ ರಶ್ಮಿಕಾ ಮಂದಣ್ಣ..!

     ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್​ಸ್​ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್​ ಸ್ಟಾಗ್ರಾಮ್​ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್​ ಸ್ಟಾಗ್ರಾಮ್​ನಲ್ಲಿ ಪೊಸ್ಟ್​ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್​ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…

  • ಸಿನಿಮಾ

    ಮಗನ ಫೋಟೋ ಹಾಕಿ ನಟ ಜಗ್ಗೇಶ್ ರವರನ್ನು ಟ್ರೊಲ್ ಮಾಡಿದ ರಮ್ಯಾ ಬೆಂಬಲಿಗರು..ಇದಕ್ಕೆ ಜಗ್ಗೇಶ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…

  • ಉಪಯುಕ್ತ ಮಾಹಿತಿ

    ಮಲಗುವ ರೀತಿ ನೋಡಿ ನಿಮ್ಮ ಗುಣಗಳನ್ನು ತಿಳಿಯಬಹುದು..!ಹೇಗೆ ಗೊತ್ತಾ..?

    ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….

  • ತಂತ್ರಜ್ಞಾನ

    ಭಾರತದ ಮೊದಲ ವಿಮಾನ ನಿಲ್ದಾಣ ಸಮುದ್ರದ ಮೇಲೆ ನಿರ್ಮಾಣವಾಗಲಿದೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.

  • ಆರೋಗ್ಯ

    ಚುಕ್ಕೆ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ, ನಿಮಗೆ ತಿಳಿದಿಲ್ಲ ಇದರ ಈ ರಹಸ್ಯ.!

    ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…