ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ.
ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ.

ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್
ಏಲಕ್ಕಿ ಪುಡಿ – 1/2 ಸ್ಪೂನ್, ಗಸಗಸೆ – 1/4 ಕಪ್, ಗೋಡಂಬಿ – 1/4 ಕಪ್, ಬಾದಾಮಿ – 1/4ಕಪ್
ಒಣದ್ರಾಕ್ಷಿ – 1/4 ಕಪ್.
ತಯಾರಿಸುವ ವಿಧಾನ

ಒಂದು ಬೌಲ್ನಲ್ಲಿ ಕಡಲೇ ಬೇಳೆಯನ್ನು ಹಾಕಿ. ಅದಕ್ಕೆ 2 ಕಪ್ ನೀರನ್ನು ಸೇರಿಸಿ ಅರ್ಧ ಗಂಟೆ ನೆನೆಯಲು ಬಿಡಿ. ನೆನೆಸಿಕೊಂಡ ಕಡಲೇ ಬೇಳೆಯನ್ನು ಕುಕ್ಕರ್ಗೆ ಹಾಕಿ. ಅರ್ಧ ಕಪ್ ನೀರನ್ನು ಸೇರಿಸಿ. 4-5 ಸೀಟಿ ಕೂಗಿಸಿ ಬೇಯಿಸಿ. ನಂತರ ಆರಲು ಬಿಡಿ. ಮುಚ್ಚಳವನ್ನು ತೆರೆದು, ಲಘು ಪ್ರಮಾಣದಲ್ಲಿ ಬೇಳೆಯನ್ನು ಅರೆದು ಒಂದೆಡೆ ಇಡಿ. ಒಂದು ಪಾತ್ರೆಯಲ್ಲಿ ಬೆಲ್ಲವನ್ನು ಸೇರಿಸಿ ಬಿಸಿ ಮಾಡಿ. ತಕ್ಷಣವೇ ಅರ್ಧ ಕಪ್ ನೀರನ್ನು ಬೆರೆಸಿ. ಬೆಲ್ಲ ಸಂಪೂರ್ಣವಾಗಿ ಕರಗಲು, ಮಧ್ಯಮ ಉರಿಯಲ್ಲಿ 5-7 ನಿಮಿಷಗಳ ಕಾಲ ಕುದಿಸಿ. ಬೆಲ್ಲದ ಪಾಕಕ್ಕೆ ಬೇಯಿಸಿಕೊಂಡ ಬೇಳೆಯನ್ನು ಸೇರಿಸಿ ಚೆನ್ನಾಗಿ ಬೆರೆಸಿ. ಗಸಗಸೆಯನ್ನು ಬೆರೆಸಿ, ಚೆನ್ನಾಗಿ ಮಿಶ್ರಗೊಳಿಸಿ, 3 ಟೇಬಲ್ ಚಮಚ ತುಪ್ಪವನ್ನು ಸೇರಿಸಿ. ಇವೆಲ್ಲವನ್ನು 15 ನಿಮಿಷಗಳ ಕಾಲ ಚೆನ್ನಾಗಿ ಬೇಯಿಸಿ, ಒಣದ್ರಾಕ್ಷಿ ಮತ್ತು ಒಣ ತೆಂಗಿನ ತುರಿಯನ್ನು ಸೇರಿಸಿ. ಪುನಃ 5 ಟೇಬಲ್ ಚಮಚ ತುಪ್ಪವನ್ನು ಸೇರಿಸಿ, ಚೆನ್ನಾಗಿ ಮಿಶ್ರಗೊಳಿಸಿ. ಇದನ್ನು 2 ನಿಮಿಷ ಬೇಯಿಸಲು ಬಿಡಿ. ಈ ಮಧ್ಯೆ, ಒಂದು ಚಿಕ್ಕ ಪಾತ್ರೆಯಲ್ಲಿ ಒಂದು ಟೇಬಲ್ ಚಮಚ ತುಪ್ಪವನ್ನು ಸೇರಿಸಿ ಬಿಸಿ ಮಾಡಿ, ಕತ್ತರಿಸಿಕೊಂಡ ಗೋಡಂಬಿಯನ್ನು ಹಾಕಿ 2 ನಿಮಿಷ ಹುರಿಯಿರಿ. ಅವು ಹುರಿದು ಹೊಂಬಣ್ಣಕ್ಕೆ ತಿರುಗಬೇಕು,ನಂತರ ಲವಂಗವನ್ನು ಸೇರಿಸಿ ಬೇಯಿಸಿದ ಗೋಡಂಬಿ ಮಿಶ್ರಣವನ್ನು ಬೆಲ್ಲ ಮತ್ತು ಬೇಳೆಯ ಮಿಶ್ರಣಕ್ಕೆ ಸೇರಿಸಿ. ಏಲಕ್ಕಿ ಪುಡಿಯನ್ನು ಸೇರಿಸಿ, ಚೆನ್ನಾಗಿ ಬೆರೆಸಿ, ಬಿಸಿ ಇರುವಾಗಲೇ ಸವಿಯಲು ನೀಡಿ.

ಸಲಹೆ : ಕಡಲೇ ಬೇಳೆಯನ್ನು ನೆನೆಸಿಕೊಂಡರೆ ನುಣ್ಣಗೆ ಬೇಯುತ್ತದೆ. ಒಣಗಿದ ತೆಂಗಿನ ತುರಿ ಸೇರಿಸುವುದು ನಿಮ್ಮ ಆಯ್ಕೆ. ಗಸಗಸೆಯನ್ನು ಸೇರಿಸುವುದು ನಿಮ್ಮ ಆಯ್ಕೆಗೆ ಬಿಟ್ಟಿದ್ದು.
ಕ್ಯಾಲೋರಿ – 256.9 ಕ್ಯಾಲ್ ಫ್ಯಾಟ್ – 11.4 ಗ್ರಾಂ. ಪ್ರೋಟೀನ್ – 21.1 ಗ್ರಾಂ. ಕಾರ್ಬೋಹೈಡ್ರೇಟ್ – 61 ಗ್ರಾಂ. ಸಕ್ಕರೆ – 24.8 ಗ್ರಾಂ. ಫೈಬರ್ – 6.2 ಗ್ರಾಂ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.
ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…