ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ.
ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ ಅಗ್ನಿಸಾಕ್ಷಿ ಧಾರಾವಾಹಿಯನ್ನು ಹಯವದನ ನಿರ್ದೇಶಿಸಿದ್ದಾರೆ. ಇನ್ನು ಈ ಧಾರಾವಾಹಿ ಆರಂಭವಾಗಿದ್ದೇ ವಿಭಿನ್ನ ಪ್ರಯತ್ನದಿಂದ. ಈ ಧಾರಾವಾಹಿಗೂ ಮುನ್ನ ಪ್ರಸಾರವಾದ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯಲ್ಲಿ ವಿಜಯ್ ಸೂರ್ಯ ಸಿದ್ದಾರ್ಥ ಆಗಿ ಹಾಗೂ ‘ಅಶ್ವಿನಿನಕ್ಷತ್ರ’ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಸನ್ನಿಧಿ ಆಗಿ ನಟಿಸಿದ್ದರು.
‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಚಿನ್ನುವಿಗೆ ಮದುವೆಯಾಗಿದೆ ಎಂದು ತಿಳಿಯದ ಸಿದ್ದಾರ್ಥ ಆಕೆಯನ್ನು ಪ್ರೀತಿಸುತ್ತಾನೆ. ಆದರೆ ಆಕೆಗೆ ಮದುವೆಯಾಗಿದೆ ಎಂದು ತಿಳಿದು ಬೇಸರಗೊಳ್ಳುತ್ತಾನೆ. ಇಷ್ಟವಿಲ್ಲದಿದ್ದರೂ ಮನೆಯವರು ನೋಡಿದ ‘ಅಶ್ವಿನಿ ನಕ್ಷತ್ರ’ದ ಜೆಕೆ ತಂಗಿ ಸನ್ನಿಧಿಯನ್ನು ಮದುವೆಯಾಗುತ್ತಾನೆ. ನಂತರ ಆರಂಭಗೊಳ್ಳುವುದೇ ‘ಅಗ್ನಿಸಾಕ್ಷಿ’ ಧಾರಾವಾಹಿ. ಸಿದ್ದಾರ್ಥ ಆಗಿ ವಿಜಯ್ ಸೂರ್ಯ, ಸನ್ನಿಧಿ ಆಗಿ ವೈಷ್ಣವಿಗೌಡ, ವಾಸುದೇವ್ ಆಗಿ ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಅಖಿಲ್ ಆಗಿ ರಾಜೇಶ್ ಧ್ರುವ, ತನು ಆಗಿ ಐಶ್ವರ್ಯ ಸಾಲಿಮಠ್, ಅಂಜಲಿ ಆಗಿ ಸುಕೃತ, ಚಂದ್ರಿಕಾ ಆಗಿ ಪ್ರಿಯಾಂಕ, ಮಾಯಾ ಆಗಿ ಇಶಿತಾ ವರ್ಷ, ಆಯುಷಿ ಆಗಿ ಬೇಬಿ ಚಂದನ ಹಾಗೂ ಇನ್ನಿತರರು ಧಾರಾವಾಹಿಯಲ್ಲಿ ನಟಿಸಿದ್ದಾರೆ.
6 ವರ್ಷಗಳಿಂದ ನಾವು ಒಂದೇ ಕುಟುಂಬದಂತೆ ಇದ್ದೆವು. ನಮ್ಮ ನಡುವೆ ಒಳ್ಳೆ ಬಾಂಧವ್ಯ ಇತ್ತು. ಪ್ರತಿದಿನ ಎಲ್ಲರೂ ಭೇಟಿ ಆಗುತ್ತಿದ್ದೆವು. ಆದರೆ ಈಗ ಧಾರಾವಾಹಿ ಮುಗಿದಿರುವುದು ಬೇಸರ ತರಿಸಿದೆ ಎಂದು ಧಾರಾವಾಹಿಯ ಕಲಾವಿದರು ಬೇಸರದಿಂದಲೇ ಹೇಳುತ್ತಾರೆ. ಇನ್ನು ವೀಕ್ಷಕರು ಕೂಡಾ ಧಾರಾವಾಹಿ ಮುಗಿದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ರಾತ್ರಿ 8 ಗಂಟೆಗೆ ನಮಗೆ ಒಳ್ಳೆ ಮನರಂಜನೆ ಸಿಗುತ್ತಿತ್ತು. ಆದರೆ ಈಗ ಏನೋ ಕಳೆದುಕೊಂಡಂತೆ ಆಗುತ್ತಿದೆ ಎನ್ನುತ್ತಿದ್ದಾರೆ. ನೋಡೋಣ ‘ಅಗ್ನಿಸಾಕ್ಷಿ’ ಧಾರಾವಾಹಿ ಸ್ಥಾನ ತುಂಬಲು ಬೇರೆ ಧಾರಾವಾಹಿ ಬಂದರೂ ಬರಬಹುದು. ವಿಶೇಷ ಎಂದರೆ ತೆಲುಗಿನಲ್ಲಿ ಇದೇ ಧಾರಾವಾಹಿ ‘ಮನಸಾಕ್ಷಿ’ ಎಂಬ ಹೆಸರಿನಲ್ಲಿ ಪ್ರಸಾರವಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…
ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್ನಲ್ಲಿ ಫೇಸ್ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…