ಸಿನಿಮಾ, ಸುದ್ದಿ

ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

148

ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು.

ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ, ಪದ್ಮಾವಾಸಂತಿ ಸೇರಿದಂತೆ ಹಲವು ತಾರೆಯರನ್ನು ಕನ್ನಡ ಚಿತ್ರರಂಗದಲ್ಲಿ ಭದ್ರ ಬುನಾದಿ ಹಾಕಿಕೊಟ್ಟವರು ಚಿತ್ರ ಬ್ರಹ್ಮ ಪುಟ್ಟಣ್ಣ ಕಣಗಾಲ್. ಇವರು ನಿರ್ದೇಶನದ ಚಿತ್ರದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ ಪ್ರತಿಭಾವಂತೆ ಅಪರ್ಣಾ ಅವರು.

1984 ರಲ್ಲಿ ಪುಟ್ಟಣ್ಣ ಕಣಗಲ್ ಅವರ ಚಲನಚಿತ್ರ ಮಸನದ ಹೂವು ಚಿತ್ರದಲ್ಲಿ ಅಪರ್ಣಾ ತಮ್ಮ ಚೊಚ್ಚಲ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಇದರಲ್ಲಿ ಅವರು ಅಂಬರೀಶ್ ಮತ್ತು ಜಯಂತಿ ಅವರೊಂದಿಗೆ ನಟಿಸಿದ್ದಾರೆ.  ಬಳಿಕ ಚಲನಚಿತ್ರಗಳಿಗಾಗಿ ಬಣ್ಣ ಹಚ್ಚಿದ್ದು ಅಪರೂಪ. ಆಲ್ ಇಂಡಿಯಾ ರೇಡಿಯೋ ಮತ್ತು ಎಫ್.ಎಂ.ರೇನ್ ಬೋದಲ್ಲಿ ರೇಡಿಯೋ ಜಾಕಿ ಆಗಿ ಕಾರ್ಯ ನಿರ್ವಹಿಸಿದ ಅಪರ್ಣಾ, ಡಿಡಿ ಚಂದನ ವಾಹಿನಿಯ ಹಲವು ಕಾರ್ಯಕ್ರಮಗಳಿಗೂ ನಿರೂಪಣೆ ಮಾಡಿದ್ದಾರೆ.

ಅಲ್ಲದೆ ದೈನಂದಿನ ಧಾರಾವಾಹಿಗಳಾದ ಮುಕ್ತ , ಮೂಡಲಮನೆ ಅವರಿಗೆ ಹೆಚ್ಚು ಖ್ಯಾತಿ ತಂದು ಕೊಟ್ಟಿತ್ತು. ಆದರೆ ಹೆಚ್ಚು ಜನಪ್ರಿಯತೆ ಗಳಿಸಿದ್ದು ಸೃಜನ್ ಲೋಕೇಶ್ ಅವರ ನೇತೃತ್ವದಲ್ಲಿ ಬರುತ್ತಿದ್ದ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ. ಈ ಕಾರ್ಯಕ್ರಮದಲ್ಲಿ ಒನ್ ಅಂಡ್ ಓನ್ಲಿ ವರಲಕ್ಷ್ಮಿಯಾಗಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತಿದ್ದ ಅಪರ್ಣಾ ಅವರಿಗೆ ಕಾಮಿಡಿ ಚಿತ್ರಗಳು ಇದೀಗ ಹುಡುಕಿಕೊಂಡು ಬರುತ್ತಿವೆ. ಆದರೆ ಒಂದು ಕಾಲದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮವನ್ನು ಬಿಟ್ಟು ಬಿಡೋಣ ಎಂದು ನಿರ್ಧಾರ ಮಾಡಿದ್ದರಂತೆ.

ಮಜಾ ಟಾಕೀಸ್’ನಲ್ಲಿ ವರಲಕ್ಷ್ಮಿ ಆಗಿ ಕಾಣಿಸಿಕೊಂಡ ಮೇಲೆ ಅಪರ್ಣಾ ಟ್ರೋಲ್ ಆಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅಪರ್ಣಾ ಬಗ್ಗೆ ಕೆಲವರು ನೆಗೆಟಿವ್ ಕಾಮೆಂಟ್ ಹಾಕಿದ್ದರು. ಆಗ ಬೇಸರಗೊಂಡಿದ್ದ ಅಪರ್ಣಾ ‘ಮಜಾ ಟಾಕೀಸ್’ ಕಾರ್ಯಕ್ರಮವನ್ನು ಬಿಡಲು ಮುಂದಾಗಿದ್ದರು. ಬಳಿಕ ನೆಗೆಟಿವ್ ಗಿಂತ ಪಾಸಿಟಿವ್ ಟಾಕ್ ಹೆಚ್ಚಿದೆ ಅಂತ ಸೃಜನ್ ಲೋಕೇಶ್ ಮನವೊಲಿಸಿದ ಮೇಲೆ ಕಾರ್ಯಕ್ರಮದಲ್ಲಿ ಅಪರ್ಣಾ ಮುಂದುವರೆದರು.

ಹೀಗೆ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸಿದ ಅಪರ್ಣಾ ಅವರಿಗೆ ಕಾಮಿಡಿ ಸಿನಿಮಾಗಳು ಸಾಲು ಸಾಲು ಬರುತ್ತಿವೆಯಂತೆ. ಆದರೆ ಕಾಮಿಡಿ ಸಿನಿಮಾಗಳಲ್ಲಿ ನಟಿಸಲು ಒಲವು ಹೊಂದಿರದ ಅಪರ್ಣಾ ಈ ಸಿನಿಮಾಗಳನ್ನೆಲ್ಲ ರಿಜೆಕ್ಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗೆ ಕಾಮಿಡಿ ಸಿನಿಮಾಗಳನ್ನು ರಿಜೆಕ್ಟ್ ಮಾಡಲು ಕಾರಣವೇನೆಂದರೆ ”ಜನರನ್ನು ನಗಿಸುವುದು ಸುಲಭ ಅಲ್ಲ. ಅದು ತುಂಬಾ ಕಷ್ಟದ ಕೆಲಸ. ನಾನು ಕಾಮಿಡಿಯನ್ ಅಲ್ಲ. ಆದ್ದರಿಂದ ನಾನು ಕಾಮಿಡಿ ಸಿನಿಮಾಗಳನ್ನು ಒಪ್ಪಿಕೊಳ್ಳಲಿಲ್ಲ” ಎನ್ನುತ್ತಾರೆ ಅಪರ್ಣಾ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಹಿಂದೂಗಳಿಗೆ ನಾಗರ ಪಂಚಮಿ ಹಬ್ಬ ಏಕೆ ತುಂಬಾ ಮಹತ್ವ ಗೊತ್ತಾ?ರೋಚಕವಾಗಿದೆ ಈ ಹಬ್ಬದ ವೈಶಿಷ್ಟ್ಯಗಳು…

    ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.

  • ರಾಜಕೀಯ

    ಇವಿಎಂನಲ್ಲಿದ್ದ ವೋಟ್ ಗಳನ್ನು ಡಿಲೀಟ್ ಮಾಡಿದ ಅಧಿಕಾರಿಗಳು…!

    ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…

  • ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಹರಿದ ಬಟ್ಟೆ, ಜೀನ್ಸ್ ತೊಡೋದರಿಂದ ಏನಾಗುತ್ತೆ ಗೊತ್ತಾ?

    ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ.  ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…

  • ಕರ್ನಾಟಕ

    ಗೋವಾ ನಿರಾಶ್ರಿತ ಕನ್ನಡಿಗರಿಗೆ, ರಾಜ್ಯದಿಂದ ಸಿಕ್ಕ ಭಾಗ್ಯ ಏನು ಗೊತ್ತಾ..?

    ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ‌ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.