inspirational, ದೇಶ-ವಿದೇಶ, ಸುದ್ದಿ

ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

45

ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ.

ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ ಒದ್ದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು, ಮಹಿಳೆಯನ್ನು ಹೊರಸಿನ ಸಮೇತ ಎತ್ತಿಕೊಂಡು, ರಸ್ತೆವರೆಗೆ ಹೆಗಲ ಮೇಲೆ ಹೊತ್ತೊಯ್ದಿದ್ದಾರೆ. ಮಹಿಳೆಯ ಮನೆಯಿದ್ದ ಕಾಡಿನ ಪ್ರದೇಶ ಪಡೇಡಾದಿಂದ ಸುಮಾರು 6ಕಿ.ಮೀ. ದೂರದಲ್ಲಿ ರಸ್ತೆ ಇದ್ದು, ಅಲ್ಲಿಯವರೆಗೂ ಯೋಧರು ಮಹಿಳೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.

ರಸ್ತೆವರೆಗೆ ಮಹಿಳೆಯನ್ನು ಹೊತ್ತುಕೊಂಡು ಹೋಗಿ, ನಂತರ ವಾಹನದ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೋಧರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಅವಕಾಡೊ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್​ ಫ್ರೂಟ್​ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…

  • inspirational

    ಸಿ ಮ್ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ- ಮಾಜಿ ಸಿಮ್ ಸಿದ್ದರಾಮಯ್ಯ ಸ್ಪಷ್ಟನೆ

    ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…

  • ಸುದ್ದಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ :ಅಂಬರೀಶ್ ನಂತರ ಶಿವಣ್ಣರಿಗೆ ಅಪ್ಪಾಜಿ ಸ್ಥಾನ ಕೊಟ್ಟಿದ್ಯಾಕೆ? ದರ್ಶನ್ ಹೇಳಿದ ಈ ಮಾತುಗಳನ್ನು ಕೇಳಿ,

    ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ  ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು.‌ ಧ್ರುವನ್ ಅವರು‌…

  • ಸುದ್ದಿ

    ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…

  • ಸುದ್ದಿ

    ಮಧ್ಯಪ್ರದೇಶದಲ್ಲಿ ಬಿಜೆಪಿ ಪಕ್ಷದವರಿಂದ ಕುದುರೆ ವ್ಯಾಪಾರ: ಸಿಎಂ ಕಮಲ್‍ನಾಥ್ ಹೇಳಿಕೆ….!

    ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್‍ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…