ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ.
ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ.

ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್ ನಲ್ಲಿರುವ ಗೂಗಲ್ ಕಚೇರಿಯ ಮುಂದೆ 99 ಮೊಬೈಲ್ ಗಳನ್ನು ಸಣ್ಣ ಗಾಡಿಯಲ್ಲಿ ಎಳೆದುಕೊಂಡು ಹೋಗಿದ್ದಾನೆ. 99 ಮೊಬೈಲ್ ಗಳಲ್ಲಿ ಜಿಪಿಎಸ್ ಆನ್ ಆಗಿದ್ದ ಕಾರಣ ಸಹಜವಾಗಿ ಗೂಗಲ್ ಕಚೇರಿಯ ಮುಂದೆ ಸಿಕ್ಕಾಪಟ್ಟೆ ಟ್ರಾಫಿಕ್ ಜಾಮ್ ತೋರಿಸಿದೆ.
ಸೈಮನ್ ವೆಕರ್ಟ್ ತಂತ್ರಜ್ಞಾನವನ್ನು ನಾವು ಹೇಗೆ ಮೂರ್ಖರನ್ನಾಗಿ ಮಾಡಬಹುದು ಎಂದು ತೋರಿಸಲು ನಾನು ಈ ರೀತಿ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ತಾನು ಸಣ್ಣ ಗಾಡಿಯಲ್ಲಿ ಮೊಬೈಲ್ಗಳನ್ನು ಎಳೆದುಕೊಂಡು ಹೋಗುತ್ತಿರುವ ವಿಡಿಯೋವನ್ನು ಯೂ ಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದಾನೆ.

ಈ ವಿಡಿಯೋಗೆ ಜನರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಕೆಲವರು ಸೈಮನ್ ವೆಕರ್ಟ್ ಸೃಜನಶೀಲತೆಗೆ ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನು ಕೆಲವರು, ಬೇರೆ ಏನು ಕೆಲಸ ಇಲ್ಲದ ಈ ವ್ಯಕ್ತಿ ತುಂಬಾ ಫ್ರೀ ಇರಬೇಕು. ಪ್ರಚಾರಕ್ಕಾಗಿ ಈ ಕೆಲಸ ಮಾಡಿದ್ದಾನೆ. ತಂತ್ರಜ್ಞಾನ ಇಂತವರಿಂದಲೇ ದುರುಪಯೋಗ ಆಗುತ್ತದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ…
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.
ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…