ಸಾಧನೆ, ಸುದ್ದಿ, ಸ್ಪೂರ್ತಿ

ಆಟೋ ಓಡಿಸುತ್ತಿರುವ ಈ ಮಹಿಳೆ ನಿಜಾಂಶ ಹೊರಬರುತ್ತಿದ್ದಂತೆ ಎಲ್ಲರೂ ಶಾಕ್. ಅಸಲಿಗೆ ಈ ಮಹಿಳೆ ಯಾರು?

73

ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹಾಕಿಕೊಂಡಳು. ಅಂಕಿತಾಳಿಗೆ ಇಬ್ಬರು ತಂಗಿಯರು ಕೂಡ ಇದ್ದಾರೆ.ಅವರ ಓದು, ಮದುವೆಯ ಜವಾಬ್ದಾರಿ ಎಲ್ಲವನ್ನೂ ಕೂಡ ಅಂಕಿತಾಳೆ ಹೆಗಲಮೇಲೆ ಹಾಕಿಕೊಂಡಿದ್ದಾಳೆ.

ನೀವು ಅಂದುಕೊಳ್ಳಬಹುದು ಇದೇನಿದು ದೊಡ್ಡ ವಿಷಯಾನ ಈ ರೀತಿಯ ನೂರಾರು ಘಟನೆಗಳನ್ನು ಟಿ.ವಿ.ಗಳಲ್ಲಿ ನಾವು ಪೇಪರ್ ಗಳಲ್ಲಿ ಓದಿರುತ್ತೀವಿ, ನೋಡಿರುತ್ತೀವಿ ಅಂತ. ಆದರೆ ನಿಮಗೆ ಗೊತ್ತಿಲ್ಲದೇ ಇರುವ ವಿಷಯವೇನೆಂದರೆ ಚಿಕ್ಕ ವಯಸ್ಸಿನಲ್ಲಿಯೇ ಪೋಲಿಯೋ ಕಾರಣದಿಂದಾಗಿ ಅಂಕಿತಾಳ ಬಲಗಾಲನ್ನು ತೆಗೆಯಬೇಕಾಗಿತ್ತು. ಕೇವಲ ಒಂದು ಕಾಲಿನಿಂದಲೇ ತನ್ನ ಕುಟುಂಬದ ಭಾರವನ್ನು ಹೊರುತ್ತಿದ್ದಾಳೆ ಈ ಅಂಕಿತ.
ಈ ‌ಹಿಂದೆ ಅಂಕಿತ ಕಾಲ್ ಸೆಂಟರ್ ನಲ್ಲಿ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಳು. ಆದರೆ ತಿಂಗಳಿಗೆ ಕೇವಲ 8 ಸಾವಿರ ರೂಪಾಯಿ ಮಾತ್ರ ಸಂಬಳ ಸಿಗುತ್ತಿತ್ತು. ಬರುವ ಸಂಬಳದಲ್ಲಿ ಮನೆಯ ಬಾಡಿಗೆ,ತಂದೆಯ ಔಷಧಿಗಳಿಗೆ,ತಂಗಿಯರ ವಿದ್ಯಾಭ್ಯಾಸಕ್ಕೆ, ಮನೆಯ ದಿನಸಿಗೆ ಸಾಲುತ್ತಿರಲಿಲ್ಲ. ಅದಕ್ಕೆ ಆ ಕೆಲಸವನ್ನು ಬಿಟ್ಟು ಲೋನ್ ಪಡೆದುಕೊಂಡು ಒಂದು ಆಟವನ್ನು ತೆಗೆದುಕೊಂಡಳು.

ಇದರಲ್ಲಿ ಕೇವಲ ಎಂಟು ಗಂಟೆಗಳ ಕಾಲ ಕೆಲಸ ಮಾಡಿದರು ಸಹ ತಿಂಗಳಿಗೆ 20 ರಿಂದ 24 ಸಾವಿರ ರೂಪಾಯಿ ದುಡಿಯುತ್ತಿದ್ದಾಳೆ ಮತ್ತು ತನ್ನ ಕುಟುಂಬವನ್ನು ಸಂತೋಷವಾಗಿ ನೋಡಿಕೊಳ್ಳುತ್ತಿದ್ದಾಳೆ ಈ ಅಂಕಿತ. ಕೈಕಾಲು ಗಟ್ಟಿಮುಟ್ಟಾಗಿದ್ದರು ಸಹ ಕೆಲಸ ಮಾಡಲು ಹಲವರು ಸೋಂಬೇರಿಗಳಾಗಿ ಬಿಡುತ್ತಾರೆ.ಆದರೆ ಇಂತಹವರನ್ನು ನೋಡಿದಾಗ ನಮಗೂ ಕೂಡ ಜೀವನದಲ್ಲಿ ಏನಾದರೂ ಒಂದನ್ನು ಸಾಧಿಸಲೇಬೇಕೆಂಬ ಛಲ ಹುಟ್ಟಿಬರುತ್ತದೆ ಮತ್ತು ಜೀವನದಲ್ಲಿ ಹುಟ್ಟಿದ ಮೇಲೆ ಏನನ್ನಾದರೂ ಸಾಧಿಸಿಯೇ ತೀರಬೇಕು ಇಲ್ಲವಾದರೆ ನಾವು ಹುಟ್ಟಿದಕ್ಕೆ ಯಾವುದೇ ಪ್ರಯೋಜನವೂ ಇರುವುದಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪೂರ್ಣ ಯುದ್ಧ ಸಂಭವ:ಭಾರತಕ್ಕೆ ಪಾಕ್ ಎಚ್ಚರ…..!

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…

  • ಸುದ್ದಿ

    ಹಗಲು ನಿದ್ದೆ ಮಾಡುವುದರಿಂದಾಗುವ ಪ್ರಜಾಜನಗಳೇನು ಗೊತ್ತ..?

    ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…

  • ವಿಸ್ಮಯ ಜಗತ್ತು

    ಹೊಸ ದೇಶ ಸ್ಥಾಪಿಸಿ ತಾನೇ ಅಧ್ಯಕ್ಷನೆಂದು ಘೋಷಿಸಿಕೊಂಡ ಭೂಪತಿ!ಹೀಗೂ ಇರ್ತಾರೆ ನೋಡಿ…

    ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…

  • ಆರೋಗ್ಯ

    ಕರ್ಜೂರದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…