ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ.
ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ ತಿಳಿಸಿವೆ.
ಆರೋಗ್ಯಕರ ಗುಣವಿರುವ ನಿಂಬೆಹಣ್ಣಿನ ರಸವನ್ನು ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎಂಬುದು ತಿಳಿಯದಿದ್ದರೆ ಅಪಾಯ ತಪ್ಪಿದ್ದಲ್ಲ. ನಿಂಬೆ ಹಣ್ಣಿನಲ್ಲಿರುವ ಆಮ್ಲೀಯ ಗುಣ ಹೆಚ್ಚಾಗಿ ದೇಹ ಸೇರಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.
ಎಷ್ಟು ಪ್ರಮಾಣದಲ್ಲಿ ನಿಂಬೆರಸ ಸೇವನೆ ಮಾಡಬೇಕು?
ನಿಂಬೆರಸ ಎಷ್ಟು ಸೇವಿಸಬೇಕು ಎಂಬುದು ವ್ಯಕ್ತಿಯ ವಯಸ್ಸು, ಆರೋಗ್ಯ ಮುಂತಾದವುಗಳ ಮೇಲೆ ಅವಲಂಬಿತವಾಗಿರುತ್ತೆ. ನಿಂಬೆರಸವನ್ನು ಇಷ್ಟೇ ಪ್ರಮಾಣದಲ್ಲಿ ಸೇವಿಸಬೇಕು ಎಂದು ನಿರ್ಧರಿಸಲು ಸಾಕಷ್ಟು ವೈಜ್ಞಾನಿಕ ಮಾಹಿತಿಗಳಿಲ್ಲ. ಆದರೆ ವೈದ್ಯರ ಪ್ರಕಾರ, ದಿನಕ್ಕೆ ಒಂದು ಲೋಟ ಅಥವಾ ಎರಡು ಲೋಟ ನಿಂಬೆರಸ (ಸುಮಾರು 120 ಮಿಲಿ) ಸುರಕ್ಷಿತವೆಂದು ಸೂಚಿಸಲಾಗಿದೆ. ಅದಕ್ಕಿಂತ ಹೆಚ್ಚು ನಿಂಬೆರಸ ಸೇವಿಸುವುದು ಒಳ್ಳೆಯದಲ್ಲ ಎನ್ನಲಾಗುತ್ತೆ.
ಹೆಚ್ಚು ನಿಂಬೆರಸ ಸೇವಿಸಿದ್ರೆ ಏನಾಗುತ್ತೆ?
1. ಹಲ್ಲಿನ ಸಮಸ್ಯೆ
ಅತಿಯಾದ ನಿಂಬೆರಸ ಸೇವನೆಯಿಂದ ಅದರಲ್ಲಿರುವ ಆಮ್ಲೀಯ ಗುಣ ಹಲ್ಲಿನ ಮೆರುಗನ್ನು ನಾಶಗೊಳಿಸಬಹುದು. ಇತರೆ ತಂಪು ಪಾನೀಯಗಳಂತೆ ನಿಂಬೆರಸ ಕೂಡ ಹಲ್ಲಿನ ಸಮಸ್ಯಗೆ ಕಾರಣವಾಗಿದೆ. ಆದರೆ ನಿಂಬೆರಸ ಸೇವನೆಯ ಬಳಿಕ ಹಲ್ಲನ್ನು ಉಜ್ಜುವುದರಿಂದ ಹಲ್ಲಿನ ಸವೆತವನ್ನು ತಡೆಗಟ್ಟಬಹುದು.
2. ಮೈಗ್ರೇನ್ ಹೆಚ್ಚಿಸುತ್ತದೆ
ಸಿಟ್ರಸ್ ಹಣ್ಣುಗಳು ಮೈಗ್ರೇನ್ ಅನ್ನು ಹೆಚ್ಚು ಮಾಡುತ್ತದೆ. ಸಿಟ್ರಸ್ ಹಣ್ಣುಗಳನ್ನು ಮಿತಿಮೀರಿ ಸೇವಿಸಿದರೆ ಆರೋಗ್ಯಕ್ಕೆ ಹಾನಿಕಾರಕ. ಈ ಹಣ್ಣುಗಳು ಅಲರ್ಜಿ ಉಂಟುಮಾಡುವುದರ ಮೂಲಕ ಮೈಗ್ರೇನ್‍ಗೆ ಕಾರಣವಾಗಬಹುದು. ಸಿಟ್ರಸ್ ಹಣ್ಣುಗಳಲ್ಲಿ ಟೈರಮೈನ್ ಅಂಶ ಇರುತ್ತದೆ. ಇದು ಮೈಗ್ರೇನ್ ಗೆ ಪ್ರಮುಖ ಕಾರಣವಾಗಿದೆ.
3. ಎದೆಯುರಿ ಉಂಟುಮಾಡುತ್ತದೆ
ಕೆಲವು ಸಂಶೋಧನೆಗಳ ಪ್ರಕಾರ, ಸಿಟ್ರಸ್ ಅಂಶ ಒಳಗೊಂಡ ಹಣ್ಣುಗಳು ಎದೆಯುರಿ ಅಥವಾ ಆಸಿಡ್ ರಿಫ್ಲಕ್ಸ್ ಗೆ ಕಾರಣವಾಗಬಹುದು. ನಿಂಬೆರಸ ಎದೆಯುರಿಯನ್ನು ಹೆಚ್ಚಿಸಬಹುದು ಮತ್ತು ಕಡಿಮೆ ಮಾಡಲೂ ಬಹುದು. ಆದರೆ ಅತೀಯಾಗಿ ನಿಂಬೆರಸ ಸೇವಿಸಿದರೆ ಎದೆಯುರಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಎದೆಯುರಿ ಸಮಸ್ಯೆ ಇದ್ದರೆ ನಿಂಬೆರಸ ಅಥವಾ ಯಾವುದೇ ಸಿಟ್ರಿಕ್ ಅಂಶದ ಪಾನಿಯ ಕುಡಿಯುವ ಮೊದಲು ವೈದ್ಯರ ಸಲಹೆ ಪಡೆಯೋದು ಸೂಕ್ತ.
4. ಬಾಯಿ ಹುಣ್ಣನ್ನು ಉಲ್ಬಣಗೊಳಿಸಬಹುದು
ಬಾಯಿ ಹುಣ್ಣುಗಳಲ್ಲಿ ಕ್ಯಾಂಕರ್ ಹುಣ್ಣುಗಳು ಒಂದು ರೂಪ. ಇವು ಬಾಯಿಯೊಳಗೆ ಉಂಟಾಗುವ ಹುಣ್ಣುಗಲಾಗಿದ್ದು, ಹೆಚ್ಚು ನೋವಿನಿಂದ ಕೂಡಿರುತ್ತವೆ. ಸಿಟ್ರಿಕ್ ಆಮ್ಲವು ಬಾಯಿಯ ಹುಣ್ಣುಗಳನ್ನು ಇನ್ನಷ್ಟು ಹೆಚ್ಚು ಮಾಡುವುದರಿಂದ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…
ಯಾರ ಮನೆಯಲ್ಲಿ ಇಲಿಗಳು ಇಲ್ಲ ಹೇಳಿ, ಇನ್ನು ಇಲಿಗಳ ಕಾಟ ಕೇವಲ ಮನೆಯಲ್ಲಿ ಮಾತ್ರವಲ್ಲೇ ಹೊಲ ಗದ್ದೆಗಳಲ್ಲಿ ಕೂಡ ಇರುತ್ತದೆ, ಹೌದು ಹೊಲ ಗದ್ದೆಗಳಲ್ಲಿ ಇಲಿಗಳ ಕಾಟ ಆರಂಭವಾಯಿತು ಅಂದರೆ ರೈತರಿಗೆ ದಿಕ್ಕೇ ತೋಚದಂತೆ ಆಗುತ್ತದೆ. ಇಲಿಗಳು ಇಲ್ಲಿ ಇರುತ್ತದೆಯೋ ಅಲ್ಲಿ ಸರ್ವಶನಾಶ ಆಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ, ಯಾಕೆ ಅಂದರೆ ಇಲಿಗಳು ಕಚ್ಚದ ವಸ್ತುಗಳೇ ಇಲ್ಲ. ಎಷ್ಟೇ ಗಟ್ಟಿ ವಸ್ತುವಾದರೂ ಅದನ್ನ ತೂತು ಮಾಡುವ ಶಕ್ತಿಯನ್ನ ಹೊಂದಿರುತ್ತದೆ ಇಲಿಗಳು, ಮನೆಯ ವಸ್ತುಗಳನ್ನ ಹಾಲು ಮಾಡುತ್ತದೆ ಮತ್ತು…
ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು