Cinema

1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

64

ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ.

ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು.

ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್ ಅವರಿಗೆ ಸೂಚಿಸಿದ್ದರು. ಅಂತೆಯೇ ಬೆಂಗಳೂರಿನ ಹೆಚ್​ಬಿ.ಆರ್ ಬಡಾವಣೆಯಲ್ಲಿ 1.60 ಕೋಟಿ ಮೌಲ್ಯದ ನಿವೇಶನ ಖರೀದಿಸಿದ್ದರು.

ಆದರೆ ಆ ಬಳಿಕ ನಿವೇಶನದ ದಾಖಲೆಗಳು ನಕಲಿ ಎಂಬುದು ಗೊತ್ತಾಗಿದೆ. ನಕಲಿ ದಾಖಲೆಗಳನ್ನು ನೀಡಿ ನನ್ನಿಂದ ವಂಚಕರು ಹಣ ಪಡೆದುಕೊಂಡಿದ್ದಾರೆ ಎಂದು ಎಸ್.ನಾರಾಯಣ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಒಂದೆಡೆ ಸಾಲದ ಸುಳಿಯಲ್ಲಿ ಸಿಲುಕಿರುವ ನಾರಾಯಣ್ ಅವರು ಸಾಲವನ್ನು ಹಿಂತಿರುಗಿಸಲು ಪರದಾಡುತ್ತಿದ್ದಾರೆ. ಈಗಾಗಲೇ 2 ಕೋಟಿಗೂ ಅಧಿಕ ಸಾಲ ಹೊಂದಿದ್ದು, ನಕಲಿ ದಾಖಲೆ ಮೂಲಕ ವಂಚಿಸಿದ ವಂಚಕರಿಂದ ನ್ಯಾಯ ಒದಗಿಸಿ ಕೊಡಿ ಎಂದು  ಡಿಸಿಪಿ ಅವರ ಹತ್ತಿರ ಎಸ್​.ನಾರಾಯಣ್ ಅವರು ಮನವಿ ಮಾಡಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮುಖ್ಯಮಂತ್ರಿಗಳ ಪ್ರಕಾರ ಈ ಸಂಘಟನೆಗಳು ಮತ್ತು ಈ ಪಕ್ಷದ ನಾಯಕರೇ ಉಗ್ರಗಾಮಿಗಳಂತೆ..! ಹಾಗಾದ್ರೆ ನಿಜವಾದ ಉಗ್ರಗಾಮಿಗಳು ಯಾರು..?

    ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.

  • ಸುದ್ದಿ

    ಹೊಸ ಸಂಚಾರಿ ನಿಯಮದಡಿ ಎತ್ತಿನ ಗಾಡಿಗೂ ದಂಡ….!

    ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…

  • ಸುದ್ದಿ

    ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

    ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು….

  • inspirational, ವ್ಯಕ್ತಿ ವಿಶೇಷಣ

    ವರದಕ್ಷಿಣೆ ವಿರೋಧಿಸಿ: ಈ ವರ ಮಾಡಿದ ಕೆಲಸ ನೋಡಿ ಆಶ್ಚರ್ಯಗೊಂಡ್ರು ಜನ..! ತಿಳಿಯಲು ಈ ಲೇಖನ ಓದಿ..

    ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…