ರೆಸಿಪಿ

ಒಮ್ಮೆ ಈ ರೀತಿ ಮಾಡಿ ನೋಡಿ ರುಚಿಯಾದ ಮೆಂತೆ ಸೊಪ್ಪಿನ ದೋಸೆ.

175

ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು.

ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.
ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ ಬೇಳೆ, ಮೆಂತ್ಯ ಕಾಳುಗಳನ್ನು ಚೆನ್ನಾಗಿ ತೊಳೆದು, ನೀರು ಸೇರಿಸಿ 6 ಘಂಟೆಗಳ ಕಾಲ ನೆನೆಸಿಟ್ಟು, ನಂತರ ನೀರು ಬಸಿದು ರುಬ್ಬಿಕೊಳ್ಳಬೇಕು.ಇದನ್ನು ಸುಮಾರು 8ಘಂಟೆಗಳ ಕಾಲ ಹುದುಗು ಬರಲು ಬಿಡಬೇಕು. ದೋಸೆ ಮಾಡುವ ಮೊದಲು ಉಪ್ಪು ಸೇರಿಸಿ ಸ್ವಲ್ಪ ನೀರು ಸೇರಿಸಿ ದೋಸೆ ಹಿಟ್ಟಿನ ಹದಕ್ಕೆ ಕಲಸ ಬೇಕು.

ಮೆಂತ್ಯ ಸೊಪ್ಪಿನ ಮಸಾಲೆ ತಯಾರಿಸಲು ಬೇಕಾಗುವ ಪದಾರ್ಥಗಳು. ಸುಮಾರು 8ದೋಸೆಗೆ ಆಗುವಷ್ಟು ಮೆಂತ್ಯ ಸೊಪ್ಪು, ಒಂದು ಬಟ್ಟಲು ಈರುಳ್ಳಿ, ಒಂದು ಹಸಿಕಾಯಿ ತುರಿ, ಕಾಲು ಬಟ್ಟಲು ಧನಿಯಾ, ಒಂದು ಟೀ ಚಮಚ ಜೀರಿಗೆ, ಅರ್ಧ ಟೀ ಚಮಚ,
ಬೆಳ್ಳುಳ್ಳಿ ಎಸಳು. ಎರಡು ಹುಣಸೇ ಹಣ್ಣು. ಅರ್ಧ ಟೀ ಚಮಚ ಹಸಿಮೆಣಸಿನ ಕಾಯಿ ಮೂರು ಉಪ್ಪು ರುಚಿಗೆ ತಕ್ಕಷ್ಟು ಇವುಗಳನ್ನು ಹಸಿಯಾಗಿಯೇ ಸ್ವಲ್ಪವೇ ಸ್ವಲ್ಪ ನೀರು ಸೆರಿಸಿ ನುಣ್ಣಗೆ ರುಬ್ಬಿಕೊಳ್ಳಬೇಕು.

ನಮಗೆ ಎಷ್ಟು ಬೇಕೋ ಅಷ್ಟೇ ದೋಸೆ ಹಿಟ್ಟಿಗೆ ಮೆಂತ್ಯ ಸೊಪ್ಪಿನ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕಲಸಿಕೊಂಡು ಕಾದ ಕಾವಲಿಯಲ್ಲಿ ದೋಸೆ ಮಾಡಿದರೆ, ರುಚಿಕರ. ಆರೋಗ್ಯಕರ.ಆಕರ್ಷಕ ಬಣ್ಣದ ಮೆಂತ್ಯ ಸೊಪ್ಪಿನ ದೋಸೆ ಸವಿಯಲು ಸಿದ್ಧ. ನಿಮ್ಮ ಇಷ್ಟದ ಚಟ್ನಿ ಯೊಂದಿಗೆ ಸೇವಿಸ ಬಹುದು. ದೋಸೆ ಕಹಿ ಇರುವುದಿಲ್ಲ. ತೀರಾ ಸೂಕ್ಷ್ಮವಾಗಿ ಪರೀಕ್ಷಿಸಿದರೆ ಸ್ವಲ್ಪ ಕಹಿ ಅನ್ನಿಸ ಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಟ್ಟೆ ಶಾಪಿಂಗ್ ಮಾಡೋವಾಗ ಈ ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ..!ತಿಳಿಯಲು ಈ ಲೇಖನ ಓದಿ ..

    ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.

  • ವಿಜ್ಞಾನ

    12 ವರ್ಷದ ಈ ಹಳ್ಳಿಹುಡುಗನ ಆವಿಷ್ಕಾರಕ್ಕೆ ವಿಜ್ಞಾನಿಗಳೇ ಶಾಕ್ ಆಗಿದ್ದಾರೆ..!ಈ ಲೇಖನ ಓದಿ ಶಾಕ್ ಆಗ್ತೀರಾ..!

    ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.

  • ಸುದ್ದಿ

    ಶಾಲೆಗೆ ಬಂದ ವಿದ್ಯಾರ್ಥಿಗಳು, ಶಿಕ್ಷಕರು ಶಾಕ್-ಬಿರುಗಾಳಿ ಸಹಿತ ಭಾರೀ ಮಳೆ…….!

    ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್‍ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ಹಣ ಕಾಸು

    ಈ ಕಾನೂನು ಜಾರಿಗೆ ಬಂದ್ರೆ ಎಲ್ಲ ಕಾರ್ಮಿಕರಿಗೂ ಸಿಗಲಿದೆ, ಕನಿಷ್ಟ 18,000ರೂ ಸಂಬಳ !

    ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ

  • ಸುದ್ದಿ

    ಚಿತ್ರಮಂದಿರಗಳಲ್ಲಿ ಹಾಕುವ ರಾಷ್ಟ್ರಗೀತೆಗೆ ಎದ್ದುನಿಲ್ಲುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್!ಕಾರಣವೇನು ಗೊತ್ತಾ?

    ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…