Health

ನೆನೆಸಿಟ್ಟ ಒಣದ್ರಾಕ್ಷಿ ದಿನಾ ಒಂದೆರಡು ತಿಂದ್ರೆ, ಏನೆಲ್ಲಾ ಲಾಭವಿದೆ ಗೊತ್ತಾ?

180

ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ.

ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ ತೊಂದರೆಗಳಿಂದ ರಕ್ಷಣೆ ನೀಡುತ್ತದೆ.

ರಕ್ತಹೀನತೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕಬ್ಬಿಣವೂ ಇದೆ. ನೀರಿನಲ್ಲಿ ನೆನೆಸಿಟ್ಟ ಒಣದ್ರಾಕ್ಷಿಯನ್ನು ಸೇವಿಸುವ ಮೂಲಕ ದೇಹದಲ್ಲಿ ಕಬ್ಬಿಣದ ಪ್ರಮಾಣ ಹೆಚ್ಚುತ್ತದೆ ಹಾಗೂ ರಕ್ತಹೀನತೆಯ ತೊಂದರೆಯಿಂದ ರಕ್ಷಿಸುತ್ತದೆ.

ದೃಷ್ಟಿಹೀನತೆಯಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ವಿಟಮಿನ್ ಎ, ಬೀಟಾ ಕ್ಯಾರೋಟೀನ್ ಸಹಿತ ಉತ್ತಮ ಪೋಷಕಾಂಶಗಳಿದ್ದು ಇವು ಕಣ್ಣಿಗೆ ಅತ್ಯುತ್ತಮ ಪೋಷಣೆಯನ್ನು ನೀಡುತ್ತವೆ. ಪರಿಣಾಮವಾಗಿ ದೃಷ್ಟಿ ಉತ್ತಮಗೊಳ್ಳುತ್ತದೆ ಹಾಗೂ ದೃಷ್ಟಿಹೀನತೆಯಿಂದ ರಕ್ಷಿಸುತ್ತದೆ.

ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ : ಸುಮಾರು ಹತ್ತು ಹನ್ನೆರಡು ಒಣದ್ರಾಕ್ಷಿಗಳನ್ನು ರಾತ್ರಿ ನೆನೆಸಿ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಸೇವಿಸುವ ಮೂಲಕ ಜೀರ್ಣಶಕ್ತಿ ಉತ್ತಮಗೊಳ್ಳುತ್ತದೆ.

ಮೂಳೆಗಳು ದೃಢಗೊಳ್ಳುತ್ತವೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ಇದೆ. ಇದರೊಂದಿಗೆ ಇರುವ ಇನ್ನೂ ಹಲವು ಸೂಕ್ಷ್ಮ ಪೋಷಕಾಂಶಗಳು ಈ ಕ್ಯಾಲ್ಸಿಯಂ ಅನ್ನು ಮೂಳೆಗಳು ಹೀರಿಕೊಳ್ಳಲು ನೆರವಾಗುವ ಮೂಲಕ ಮೂಳೆಗಳು ಆರೋಗ್ಯಕರ ಮತ್ತು ದೃಢವಾಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರದ ಖಡಕ್ ಎಚ್ಚರಿಕೆ :2ನೇ ತರಗತಿವರೆಗೂ ಹೋಂ ವರ್ಕ್‌ ನೀಡುವಂತಿಲ್ಲ…..!

    ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್‌ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್‌ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್‌ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…

  • ಸುದ್ದಿ

    ನಿರ್ಮಾಣ ಪ್ರಗತಿಯಲ್ಲಿದ್ದ ನೀರಿನ ಟ್ಯಾಂಕ್ ಕುಸಿತ…..,7 ಇಂಜಿನಿಯರ್‌ಗಳು ಪೊಲೀಸರ ವಶಕ್ಕೆ….

    ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….

  • ಸುದ್ದಿ

    ಸಿಹಿ ಸುದ್ದಿ : 2022 ರ ವೇಳೆಗೆ ಎಲ್ಲಾ ಬಡವರಿಗೆ ‘ಮನೆ ಭಾಗ್ಯ’…!

    ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…

  • ವಿಸ್ಮಯ ಜಗತ್ತು

    ಈ ಕಾಲದಲ್ಲೂ ಈ ಜನ ವರ್ಷ ಪೂರ್ತಿ ನೀರಿನಲ್ಲೇ ವಾಸ ಮಾಡುತ್ತಾರೆ!

    ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.

  • ರೆಸಿಪಿ

    106 ವರ್ಷದ ಈ ಅಜ್ಜಿ ವಿಶ್ವದ ಹಿರಿಯ ಯೂಟ್ಯೂಬ್ ಸ್ಟಾರ್..!ಈ ಅಜ್ಜಿ ಯೂಟ್ಯೂಬ್ ಸ್ಟಾರ್ ಆಗಿದ್ದು ಹೇಗೆ ಗೊತ್ತಾ?

    ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್‍ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್‍ಗಳಿವೆ. ಚೆಫ್‍ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್‍ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.