ಸುದ್ದಿ

ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ, ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

53

ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್‌ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಅಧಿಕೃತವಾಗಿ ಘೋಷಿಸಿದೆ.

”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,”

ಕಳೆದ ಮಾರ್ಚ್‌ನಲ್ಲಿ ರಾಮಲಲ್ಲಾ ವಿಗ್ರಹವನ್ನು ತಾತ್ಕಲಿಕ ಮಂದಿರಕ್ಕೆ ಸ್ಥಳಾಂತರಿಸಲಾಗಿತ್ತು. ಮೇ 11ರಂದು ಸಮತಟ್ಟುಗೊಳಿಸುವ ಕಾಮಗಾರಿ ಆರಂಭಿಸಿದ್ದು, ಆ ವೇಳೆ ಹಲವು ಶಿವಲಿಂಗ ಹಾಗೂ ಹಲವು ವಿಗ್ರಹಗಳು ಪತ್ತೆಯಾಗಿದ್ದವು. ಟ್ರಸ್ಟ್‌ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ ದಾಸ್‌ ಇತ್ತೀಚೆಗೆ ಅಯೋಧ್ಯೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ರಾಮನವಮಿಯಂದೇ (ಏ.22) ಶಿಲಾನ್ಯಾಸ ನೆರವೇರಿಸಲು ನಿರ್ಧರಿಸಲಾಗಿತ್ತಾದರೂ, ಕೊರೊನಾ ಲಾಕ್‌ಡೌನ್‌ ಕಾರಣದಿಂದ ಮುಂದೂಡಲಾಗಿತ್ತು.

ತಲಾ 16 ಅಡಿ ಎತ್ತರದ 424 ಕೆತ್ತನೆಯ ಕಂಬಗಳನ್ನು ನಿರ್ಮಾಣಕ್ಕೆ ಬಳಸಿಕೊಳ್ಳಲಾಗುತ್ತದೆ. ಮಂದಿರದ ಆವರಣದಲ್ಲಿ ಸೀತಾ ರಸೋಯಿ (ಪಾಕಶಾಲೆ), ಧರ್ಮಶಾಲೆ, ಭಜನಾ ಮಂದಿರ, ರಂಗಮಂಟಪಗಳು ಇರಲಿವೆ. ಗರ್ಭಗುಡಿ ಹಾಗೂ ಗೋಪುರವನ್ನು ವಿಶೇಷವಾಗಿ ರೂಪಿಸಲು ನಿರ್ಧರಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್..!?

    ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ. ಕಾರ್ತೀಕ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…

  • ಸ್ಪೂರ್ತಿ

    ಓದಿದ್ದು ಪಿಯುಸಿ, ಆದ್ರೆ ಇವರ ಈಗಿನ ಸಂಪಾದನೆ ಕೇಳಿದ್ರೆ ಶಾಕ್ ಆಗ್ತೀರಾ.!ಇದೆಲ್ಲಾ ಹೇಗಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…

  • ಜೀವನಶೈಲಿ

    ನಿಮ್ಮ ಗಡ್ಡ ಚೆನ್ನಾಗಿ ಬೇಗ ಬೆಳೆಯಬೇಕಂದ್ರೆ, ಈ ಲೇಖನಿಯಲ್ಲಿ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ…

    ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.

  • ಸುದ್ದಿ

    ಜಾತಿ ವಿಚಾರ ಮಾತನಾಡಿದ ಜೆಡಿಎಸ್ ಶಿವರಾಮೇಗೌಡರಿಗೆ ಟಾಂಗ್ ಕೊಟ್ಟ MTB ನಾಗರಾಜ್..!

    ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್‍ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್‍, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…

  • ಆರೋಗ್ಯ

    ಬಾಳೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೇ, ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರಾ…

    ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.