ಸುದ್ದಿ

ಯುವಕನ ಕಣ್ಣೀರು ನೋಡಿ ಕರಗಿದ ಕಳ್ಳರು, ಕಿತ್ತುಕೊಂಡ ಹಣ ಮತ್ತು ವಸ್ತುಗಳು ವಾಪಸ್.

687

ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ.

ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು ದರೋಡೆಕೋರರು. ಆತನ ಬಳಿ ಬಂದು ಹೆದರಿಸಿ ಅವನ ಜೇಬಿನಲ್ಲಿದ್ದ ಹಣ ಮತ್ತು ವಸ್ತುಗಳನ್ನು ಕಿತ್ತುಕೊಳ್ಳುತ್ತಾರೆ. ಈ ವೇಳೆ ಕಷ್ಟಪಟ್ಟು ದುಡಿದ ಹಣ ಹೀಗೆ ಕಿತ್ತುಕೊಂಡರಲ್ಲ ಎಂದು ಯುವಕ ಕಣ್ಣೀರು ಹಾಕುತ್ತಾನೆ.

ಯುವಕ ಕಣ್ಣೀರು ಹಾಕಿದ ಕೂಡಲೇ ಇದನ್ನು ಕಂಡ ದರೋಡೆಕೋರರು ಮನಸ್ಸನ್ನು ಚೇಂಜ್ ಮಾಡಿಕೊಳ್ಳುತ್ತಾರೆ. ಯುವಕ ಕಣ್ಣೀರು ನೋಡಿ ಕರಗಿದ ಕಳ್ಳರು ಕಿತ್ತುಕೊಂಡ ಹಣ ಮತ್ತು ವಸ್ತುಗಳನ್ನು ವಾಪಸ್ ನೀಡುತ್ತಾರೆ. ಜೊತೆಗೆ ಅವನಿಗೆ ಶೇಕ್ ಹ್ಯಾಂಡ್ ನೀಡಿ ತಬ್ಬಿಕೊಂಡು ಸಮಾಧಾನ ಮಾಡುತ್ತಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಜೊತೆಗೆ ಈ ವಿಡಿಯೋ ನೋಡಿದ ನೆಟ್ಟಿಗರು ಫಿದಾ ಆಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವೂ ಈ ಕೆಲಸ ಮಾಡಿದ್ದೇ ಆದ್ರೆ ಬಂದ್ ಆಗುತ್ತೆ ನಿಮ್ಮ ವಾಟ್ಸಾಪ್ ಖಾತೆ..!ಏಕೆ ಗೊತ್ತಾ..?

    ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…

  • ಉಪಯುಕ್ತ ಮಾಹಿತಿ

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ಬರಲಿದೆ ಎಂದ ವಿಜ್ಞಾನಿಗಳು..!ತಿಳಿಯಲು ಈ ಲೇಖನ ಓದಿ..

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ

  • ಆರೋಗ್ಯ

    ಈ ನುಗ್ಗೆ ಎಲೆಗಳ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು  ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್‌ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…

  • ಸುದ್ದಿ

    ಚುನಾವಣೆ ಹೊಸ್ತಿಲಲ್ಲೇ ಯಡಿಯೂರಪ್ಪಗೆ ಪೆನ್‍ ಡ್ರೈವ್‍ ಶಾಕ್!ಅಸಲಿಗೆ ಪೆನ್‍ ಡ್ರೈವ್‍ ನಲ್ಲಿ ಏನಿದೆ ಗೊತ್ತಾ?

    ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್‍.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್‍ ಡ್ರೈವ್‍ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್‍ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್‍, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…

  • ಉಪಯುಕ್ತ ಮಾಹಿತಿ, ತಂತ್ರಜ್ಞಾನ

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಸಿಇಟಿ ನೋಂದಣಿ ಇನ್ನುಮುಂದೆ ಮೊಬೈಲ್ ನಲ್ಲೇ ಮಾಡಬಹುದಾಗಿದೆ .. !

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

  • ಉಪಯುಕ್ತ ಮಾಹಿತಿ

    ನಮ್ಮ ದೇಹದ ವಿಚಿತ್ರ ಸತ್ಯಗಳು!!

    ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….