ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.
ಹುದ್ದೆಗಳ ವಿವರ
ದಾಖಲಾತಿ ತಜ್ಞರು 01
ಹಿರಿಯ ಭೂ ವಿಜ್ಞಾನಿ o1
ಸಮಾಲೋಚಕರು 02
ಹಿರಿಯ ಸಮಾಲೋಚಕರು 02
ಕಿರಿಯ ಸಮಾಲೋಚಕರು 01
ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05
ಸಪೋರ್ಟ್ ಇಂಜಿನಿಯರ್ 04
ಡೇಟಾ ಎಂಟ್ರಿ ಆಪರೇಟರ್ 02
ಜಿಲ್ಲಾ ಯೋಜನಾ ವ್ಯವಸ್ಥಾಪಕ 08
ಜಿಲ್ಲಾ ಸಮಾಲೋಚಕರು 16 .
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು 01 .
ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು o7 .
ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 02 .
ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ಸಮಾಲೋಚಕರು 02 .
ಈ ಹುದ್ದೆಗಳನ್ನು ಕೇಂದ್ರ ಕಛೇರಿ, ಜಿಲ್ಲಾ ಪಂಚಾಯಿತಿ ಕಛೇರಿ- ಜಲ ಜೀವನ ಮಿಷನ್, ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಈ ಕಛೇರಿಗಳಲ್ಲಿ ನೇಮಕ ಮಾಡಲಾಗುತ್ತದೆ.
ವಯೋಮಾನ ಮತ್ತು ವಿದ್ಯಾರ್ಹತೆ
ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು. ಕೆಳಗೆ ನೀಡಲಾದ ಅಧಿಸೂಚನೆಯಲ್ಲಿ ಯಾವ್ಯಾವ ಹುದ್ದೆಗೆ ಯಾವ ವಿದ್ಯಾರ್ಹತೆ ಅಗತ್ಯ ಎಂದು ತಿಳಿಸಲಾಗಿದ್ದು, ಓದಿ ತಿಳಿಯಿರಿ.
ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳು, ರೆಸ್ಯೂಮ್ ಹಾಗೂ ಅರ್ಜಿ ಜೊತೆಗೆ, ‘ನಾನೂ ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ’ ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ : ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ ರಸ್ತೆ, ಬೆಂಗಳೂರು-560009.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-08-2020 (ಸಂಜೆ-05-30 ಗಂಟೆ) ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಛೇರಿ ಅಥವಾ ಆಯಾ ಜಿಲ್ಲಾ ಪಂಚಾಯಿತಿ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು, ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಹಾಜರಾಗುವುದು. ಹಾಗೂ ಸಂದರ್ಶನದಲ್ಲಿ ಆಯ್ಕೆಯಾದ ಕೆಲವು ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು, ನಿಗದಿತ ದಿನಾಂಕದಲ್ಲಿ ಪರೀಕ್ಷೆಗೆ ಹಾಜರಾಗುವುದು.
ಹುದ್ದೆಗಳಿಗೆ ನಿಗದಿಪಡಿಸಿದ ಮಾಸಿಕ ಸಂಭಾವನೆಯನ್ನು ನೀಡಲಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.
ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.
ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…