India, Place

ಕೈಲಾಸ ಪರ್ವತ

333

ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ.

ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ ಪರ್ವತವನ್ನು ಏರಲು ಯಾರಿಗೂ ಅನುಮತಿ ದೊರೆಯುವುದಿಲ್ಲ. ಹೀಗಾಗಿ ಜಗತ್ತಿನ ಪ್ರಮುಖ ಶಿಖರಗಳ ಪೈಕಿ ಕೈಲಾಸಪರ್ವತವೊಂದು ಮಾತ್ರ ಆರೋಹಿಸಲ್ಪಡದೇ ಉಳಿದಿದೆ. ಶಿಖರವು ಸಮುದ್ರಮಟ್ಟದಿಂದ ೨೧,೭೭೮ ಅಡಿಗಳಷ್ಟು ಎತ್ತರದಲ್ಲಿದೆಯೆಂದು ಅಂದಾಜು ಮಾಡಲಾಗಿದೆ.

ಹಿಂದೂಧರ್ಮದ ಪ್ರಕಾರ ಪರಶಿವನು ಕೈಲಾಸಪರ್ವತದ ಶಿಖರದ ಮೇಲೆ ಹಿಮವಂತನ ಪುತ್ರಿ ಪಾರ್ವತಿ ಯೊಂದಿಗೆ ನೆಲೆಸಿರುವನು. ಶಿವನು ಇಲ್ಲಿ ಸದಾ ಧ್ಯಾನಮಗ್ನನಾಗಿರುತ್ತಾನೆ. ಅಲ್ಲದೇ ಧನಾಧಿಪತಿ ಕುಬೇರ ನ ನೆಲೆಯು ಸಹ ಕೈಲಾಸಪರ್ವತದ ಸನಿಹದಲ್ಲಿಯೇ ಎಂದು ಹೇಳಲಾಗುತ್ತದೆ. ಹಿಂದೂಧರ್ಮದ ಅನೇಕ ಶಾಖೆಗಳು ಕೈಲಾಸಪರ್ವತವನ್ನು ಸ್ವರ್ಗ  ಆತ್ಮದ ಅಂತಿಮ ನೆಲೆ ಮತ್ತು ವಿಶ್ವದ ಪರಮೋನ್ನತ ಅಧ್ಯಾತ್ಮಿಕ ಕೇಂದ್ರ ವೆಂದು ಪರಿಗಣಿಸುತ್ತವೆ. ವಿಷ್ಣುಪುರಾಣ ದ ಪ್ರಕಾರ ಕೈಲಾಸಪರ್ವತವು ಜಗತ್ತಿನ ಕೇಂದ್ರ ಮತ್ತು ಅದರ ನಾಲ್ಕು ಮುಖಗಳು ಸ್ಪಟಿಕ  ಪದ್ಮರಾಗ , ಸ್ವರ್ಣ  ಮತ್ತು ನೀಲವೈಢೂರ್ಯ ದಿಂದ ಮಾಡಲ್ಪಟ್ಟಿವೆ. ಕೈಲಾಸಪರ್ವತವು ಜಗತ್ತಿನ ಆಧಾರಸ್ಥಂಭ. ಅದರ ಎತ್ತರ ೮೪೦೦೦ ಯೋಜನಗಳಷ್ಟು. ಅದು ವಿಶ್ವಮಂಡಲದ ಕೇಂದ್ರವಾಗಿದ್ದು ಪದ್ಮಾಕೃತಿಯಲ್ಲಿ ಹಬ್ಬಿರುವ ಆರು ಪರ್ವತಶ್ರೇಣಿಗಳ ಕೇಂದ್ರಸ್ಥಾನದಲ್ಲಿದೆ. ಕೈಲಾಸಪರ್ವತದಿಂದ ಹೊರಹರಿಯುವ ನಾಲ್ಕು ನದಿಗಳು ನಾಲ್ಕೂ ದಿಕ್ಕಿನಲ್ಲಿ ಪ್ರವಹಿಸಿ ಜಗತ್ತನ್ನು ನಾಲ್ಕು ಪ್ರದೇಶಗಳನ್ನಾಗಿ ವಿಭಜಿಸಿವೆ. ಜಗತ್ತಿನ ಅತ್ಯಂತ ದೊಡ್ಡ ಮತ್ತು ಅತಿ ಪ್ರಮುಖ ಶಿಲೆಯಲ್ಲಿ ಕೊರೆದು ಮಾಡಿರುವ ದೇವಾಲಯವೆಂದರೆ ಎಲ್ಲೋರಾ ದ ಕೈಲಾಸ ದೇಗುಲ. ಇದಕ್ಕೆ ಕೈಲಾಸಪರ್ವತವೇ ಸ್ಫೂರ್ತಿ. ಈ ದೇವಸ್ಥಾನದ ಅನೇಕ ಶಿಲ್ಪಗಳು ಶಿವಪಾರ್ವತಿಯರಿಗೆ ಸಂಬಂಧಿಸಿದ ಘಟನಾವಳಿಗಳನ್ನು ತೋರಿಸುತ್ತವೆ. ಇವುಗಳ ಪೈಕಿ ರಾವಣ ನು ಕೈಲಾಸಪರ್ವತವನ್ನು ಬುಡಸಮೇತ ಕೀಳಲು ನಡೆಸಿದ ಪ್ರಯತ್ನವೂ ಒಂದು.

ಸಹಸ್ರಾರು ವರ್ಷಗಳಿಂದ ನಡೆದು ಬಂದಿರುವ ಸಂಪ್ರದಾಯದಂತೆ ಪ್ರತಿ ವರ್ಷ ದೊಡ್ಡ ಸಂಖ್ಯೆಯಲ್ಲಿ ಆಸ್ತಿಕರು ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳುವರು. ಹಲವು ಧರ್ಮದ ಶ್ರದ್ಧಾಳುಗಳು ಕೈಲಾಸಪರ್ವತಕ್ಕೆ ಕಾಲ್ನಡಿಗೆಯಲ್ಲಿ ಸುತ್ತುಬರುವುದು ಒಂದು ಪಾವನ ಕಾಯಕವೆಂದು ಭಾವಿಸುತ್ತಾರೆ. ಹಿಂದೂಗಳು ಮತ್ತು ಬೌದ್ಧರು ಪರ್ವತಕ್ಕೆ ಪ್ರದಕ್ಷಿಣವಾಗಿ ಸುತ್ತು ಬಂದರೆ ಜೈನರು ಮತ್ತು ಬಾನ್ ಧರ್ಮೀಯರು ಕೈಲಾಸಪರ್ವತಕ್ಕೆ ಅಪ್ರದಕ್ಷಿಣವಾಗಿ ಸುತ್ತು ಬರುತ್ತಾರೆ. ಪರ್ವತವನ್ನು ಒಂದು ಬಾರಿ ಸುತ್ತಿಬರಬೇಕಾದರೆ ೫೨ ಕಿ.ಮೀ. ಗಳಷ್ಟು ಉದ್ದದ ದಾರಿಯನ್ನು ಕ್ರಮಿಸಬೇಕಾಗುವುದು.

ಕೆಲವು ಯಾತ್ರಿಕರು ಕೈಲಾಸಪರ್ವತವನ್ನು ಒಂದೇ ದಿನದಲ್ಲಿ ಸುತ್ತಿಬರಬೇಕೆಂದು ನಂಬುವರು. ಆದರೆ ಒರಟು ಮೇಲ್ಮೈ, ಉನ್ನತಪ್ರದೇಶದಲ್ಲುಂಟಾಗುವ ಅಸ್ವಾಸ್ಥ್ಯ ಮತ್ತು ಪ್ರತಿಕೂಲ ವಾತಾವರಣಗಳಿಂದಾಗಿ ಇದು ಕಠಿಣಸಾಧ್ಯ ಮತ್ತು ಕೆಲವೇ ಕೆಲವರು ಮಾತ್ರ ಇದನ್ನು ಸಾಧಿಸುವರು. ಕೆಲವು ಭಕ್ತರು ಇಡೀ ಪರ್ವತಕ್ಕೆ ಅಂಗಪ್ರದಕ್ಷಿಣೆಯನ್ನು ಸಹ ಮಾಡುವರು. ಈ ಕ್ರಮದಲ್ಲಿ ಪ್ರತಿ ಹೆಜ್ಜೆಗೊಮ್ಮೆ ಭಕ್ತರು ಪರ್ವತಕ್ಕೆ ದೀರ್ಘದಂಡ ನಮಸ್ಕಾರ ಮಾಡಿ ಆ ಸ್ಥಾನವನ್ನು ಬೆರಳಿನಿಂದ ಗುರುತಿಸಿ ನಂತರ ಮಂಡಿಯೂರಿ ಪ್ರಾರ್ಥನೆ ಸಲ್ಲಿಸಿ ಮುಂದೆ ಕೈಗಳು ಮತ್ತು ಮಂಡಿಯ ಮೇಲೆ ಮೊದಲು ಗುರುತಿಸಿದ್ದ ಸ್ಥಾನಕ್ಕೆ ತೆವಳುವರು. ಈ ಪ್ರಕಾರದ ಅಂಗಪ್ರದಕ್ಷಿಣೆಯ ಮೂಲಕ ಕೈಲಾಸಪರ್ವತವನ್ನು ಒಂದು ಬಾರಿ ಸುತ್ತಿಬರಲು ಕನಿಷ್ಟ ನಾಲ್ಕು ದಿನಗಳು ತಗಲುತ್ತವೆಯಲ್ಲದೆ ಅತಿ ತೀವ್ರವಾದ ದೈಹಿಕ ದಂಡನೆಯನ್ನು ಸಹಿಸಿಕೊಳ್ಳಬೇಕಾಗುತ್ತದೆ.

ಕೈಲಾಸಪರ್ವತವು ಟಿಬೆಟ್ ನ ಹಿಮಾಲಯದಲ್ಲಿ ಅತಿ ದುರ್ಗಮ ಪ್ರಾಂತ್ಯದಲ್ಲಿ ಮತ್ತು ಪ್ರತಿಕೂಲ ಪರಿಸರದಲ್ಲಿದೆ. ಈಚೆಗೆ ಯಾತ್ರಿಕರಿಗೆ ಕೆಲವು ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವ ದಿಸೆಯಲ್ಲಿ ಪ್ರಯತ್ನಗಳು ಸಾಗಿವೆ. ಕೈಲಾಸಪರ್ವತವನ್ನು ಪೂಜಿಸುವ ಎಲ್ಲ ಧರ್ಮಗಳ ಪ್ರಕಾರ ಪರ್ವತಕ್ಕೆ ಕಾಲು ಸೋಕಿಸುವುದು ಅತಿ ಘೋರ ಪಾಪದ ಕಾರ್ಯ. ಇದನ್ನು ಮೀರಿ ಪರ್ವತವನ್ನು ಏರಲು ಹೊರಟವರು ಪ್ರಾಣಕಳೆದುಕೊಂಡರೆಂದು ಜನರ ಹೇಳಿಕೆ.

೧೯೫೦ರಲ್ಲಿ ಚೀನೀಯರಿಂದ ಟಿಬೆಟ್ ನ ಆಕ್ರಮಣ ಮತ್ತು ಭಾರತ -ಚೀನಾಗಳ ನಡುವೆ ಸಂಭವಿಸಿದ ಘರ್ಷಣೆಗಳಿಂದಾಗಿ ೧೯೫೯ ರಿಂದ ೧೯೮೦ ರ ವರೆಗೆ ಕೈಲಾಸಪರ್ವತದ ಯಾತ್ರೆ ನಿಂತುಹೋಗಿತ್ತು. ೧೯೮೦ರ ನಂತರ ಪ್ರತಿವರ್ಷ ಭಾರತದಿಂದ ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳಲು ನಿಗದಿತ ಸಂಖ್ಯೆಯ ಯಾತ್ರಿಕರಿಗೆ ಪರವಾನಿಗಿ ನೀಡಲಾಗುತ್ತಿದೆ. ಈ ಯಾತ್ರೆಯು ಭಾರತ ಮತ್ತು ಚೀನಾ ಸರಕಾರಗಳ ಮಾರ್ಗದರ್ಶನ ಮತ್ತು ನಿರ್ದೇಶನದಡಿ ನಡೆಯುವುದು. ಭಾರತೀಯರು ಸಾಮಾನ್ಯವಾಗಿ ಉತ್ತರಾಖಂಡ ದ ಕುಮಾವ್ ಹಿಮಾಲಯವನ್ನು ಕಾಲ್ನಡಿಗೆಯಲ್ಲಿ ದಾಟಿ ಕೈಲಾಸಪರ್ವತವನ್ನು ತಲುಪುವರು. ಈ ಪಾದಯಾತ್ರೆಯು ಅತಿ ದೀರ್ಘದಾರಿಯದು ಮತ್ತು ಅಪಾಯಕಾರಿ ಕೂಡ. ಬೇರೆ ಮಾರ್ಗಗಳೆಂದರೆ ಕಾಠ್ಮಂಡುವಿನಿಂದ ಅಥವಾ ಲ್ಹಾಸಾದಿಂದ ರಸ್ತೆಯ ಮೇಲಿನ ಪಯಣ. ಕಾಠ್ಮಂಡು ಮತ್ತು ಲ್ಹಾಸಾಗಳನ್ನು ಭಾರತದಿಂದ ವಿಮಾನಯಾನದ ಮೂಲಕ ತಲುಪಬಹುದು.

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

    ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…

  • ಉಪಯುಕ್ತ ಮಾಹಿತಿ

    ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಇದು..?ಅದಕ್ಕೆ ಇಲ್ಲಿದೆ ಪರಿಹಾರ…

    ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.

  • ಆರೋಗ್ಯ

    ವೈಜ್ಞಾನಿಕವಾಗಿ ಸಾಬೀತಾಗಿರುವ ಗೋಮೂತ್ರದ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ..?ತಿಳಿಯಲು ಈ ಲೇಖನ ಓದಿ..

    ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….

    ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…

  • ಸುದ್ದಿ, ಸ್ಪೂರ್ತಿ

    ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

    ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…

  • ಉಪಯುಕ್ತ ಮಾಹಿತಿ

    ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.