ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ ಆಗುತ್ತದೆ ಎಂದು ಯೋಚಿಸುವ ಹೊತ್ತಿಗೆ ಕೊರೊನಾ ಎರಡನೇ ಅಲೆಯ ಆರ್ಭಟ ಬಂದು ಅಪ್ಪಳಿಸಿದೆ. ಕೊರೊನಾ ಎರಡನೇ ಅಲೆಗೆ ಈಗಾಗಲೇ ಜನ ನೊಂದು ಬೆಂದಿದ್ದಾರೆ. ಆದರೆ ಕೊರೊನಾ ಮೂರನೇ ಅಲೆ ಬರುತ್ತದೆ ಎಂಬ ಸೂಚನೆಗಳಿವೆ. ಹೀಗಾಗಿ ಸರ್ಕಾರ ಮೂರನೆ ಅಲೆಯನ್ನು ಎದುರಿಸುವುದಕ್ಕೆ ಸಿದ್ಧತೆಯನ್ನು ಮಾಡಿಕೊಂಡಿದೆಯಂತೆ.
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಕೊರೊನಾ ಮೂರನೇ ಅಲೆ ಎದುರಿಸುವುದಕ್ಕೆ ಸರ್ಕಾರ ಹೊಸ ಯೋಜನೆ ರೂಪಿಸುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಸರ್ಕಾರ ಚರ್ಚೆ ನಡೆಸುತ್ತಿದೆ.
ದೊಡ್ಡ ದೊಡ್ಡ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲಾಗುತ್ತದೆ. ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಿ ಆಕ್ಸಿಜನ್ ಉತ್ಪಾದನೆಯ ಜೊತೆಗೆ ಬಳಕೆ ಮಾಡಲಾಗುತ್ತದೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಆಕ್ಸಿಜನ್ ಸಮಸ್ಯೆಯಾಗಬಹುದು. ಹೀಗಾಗಿ ಆಕ್ಸಿಜನ್ ಸಮಸ್ಯೆ ಎದುರಾಗಬಾರದೆಂಬ ಕಾರಣಕ್ಕೆ ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲು ಸರ್ಕಾರ ಆಸ್ಪತ್ರೆಗಳ ಹುಡುಕಾಟ ನಡೆಸುತ್ತಿದೆ. ಸದ್ಯ ಜನರಲ್ ಬೆಡ್ಗಳ ಅವಶ್ಯಕತೆ ಇಲ್ಲದಿರುವ ಕಾರಣ, ಜನರಲ್ ಬೆಡ್ಗಳನ್ನು ಐಸಿಯು ಬೆಡ್ಗಳಾಗಿ ಮಾರ್ಪಾಡು ಮಾಡಲಾಗುತ್ತದೆ. 3ನೇ ಅಲೆ ಆರಂಭವಾಗುವ ಮೊದಲೇ ಐಸಿಯು ಬೆಡ್ಗಳ ಸಂಖ್ಯೆ ಹೆಚ್ಚಿಸುವುದಕ್ಕೆ ಸಿದ್ಧತೆ ಮಾಡಿಕೊಳ್ಳುವುದಕ್ಕೆ ಸರ್ಕಾರ ಮುಂದಾಗಿದೆ.
ರಾಜ್ಯದಲ್ಲಿ ಹೆಚ್ಚು ಮಕ್ಕಳ ಆಸ್ಪತ್ರೆ ತೆರೆಯುವ ಬಗ್ಗೆ ಯೋಚಿಸಿದ್ದು, ವಾರ್ಡ್ ಮಟ್ಟದಲ್ಲೂ ಮಕ್ಕಳ ಆಸ್ಪತ್ರೆ ಸ್ಥಾಪಿಸಲು ಪ್ಲ್ಯಾನ್ ಮಾಡುತ್ತಿದೆ. ಜೊತೆಗೆ ಮಕ್ಕಳಿಗೂ ಲಸಿಕೆ ನೀಡುವ ಬಗ್ಗೆ ಚರ್ಚೆ ಆಗುತ್ತಿದೆ. ಮೂರನೇ ಅಲೆಯಿಂದ ಮಕ್ಕಳನ್ನು ತಪ್ಪಿಸಲು 8-12 ವರ್ಷದ ಮಕ್ಕಳಿಗೆ ಲಸಿಕೆ ನೀಡುವುದು ಉತ್ತಮ ಎಂದು ತಜ್ಞರು ತಿಳಿಸಿದ್ದಾರೆ. ಹೀಗಾಗಿ ಕೇಂದ್ರದ ಆದೇಶಕ್ಕಾಗಿ ರಾಜ್ಯ ಸರ್ಕಾರ ಕಾಯುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ. ವೆಸ್ಟ್ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು. ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ. ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು…