ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು ರಸ್ತೆ, ಹೊಸೂರು ರಸ್ತೆ ಸಂಪರ್ಕಿಸುವ ಪಿಆರ್ಆರ್ಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ
ಯೋಜನೆ ಪೂರ್ಣಗೊಂಡ ನಂತರ, ಫೆರಿಫೆರಲ್ ರಿಂಗ್ ರಸ್ತೆಯು ಒಟ್ಟು 73 ಕಿ.ಮೀ ಉದ್ದ ಇರಲಿದ್ದು, ಇದು ಬೆಂಗಳೂರಿನ ಈಶಾನ್ಯ, ಪೂರ್ವ ಮತ್ತು ಆಗ್ನೇಯ ಭಾಗಗಳನ್ನು ಸಂಪರ್ಕಿಸಲಿದೆ. ನಗರದ ವಾಯುವ್ಯ, ಪಶ್ಚಿಮ ಮತ್ತು ನೈಋುತ್ಯ ಪ್ರದೇಶಗಳ ಮೂಲಕ ತುಮಕೂರು ರಸ್ತೆ ಮತ್ತು ಹೊಸೂರು ರಸ್ತೆಯನ್ನು ಸಂಪರ್ಕಿಸುವ ನೈಸ್ ರಸ್ತೆಯೊಂದಿಗೆ ಬೆಂಗಳೂರು ತನ್ನ ವ್ಯಾಪ್ತಿಯಲ್ಲಿ 116 ಕಿ. ಮೀ. ಉದ್ದದ ಬೈಪಾಸ್ ಹೊಂದಲಿದೆ.

ಬಹು ದಿನಗಳಿಂದ ಬಾಕಿ ಉಳಿದಿದ್ದ ತುಮಕೂರು ರಸ್ತೆ ಮತ್ತು ಹೊಸೂರು ರಸ್ತೆ ಸಂಪರ್ಕಿಸುವ 8 ಪಥದ ಪೆರಿಫೆರಲ್ ರಿಂಗ್ ರಸ್ತೆ (ಪಿಆರ್ಆರ್)ಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ.
ಭೂ ಸ್ವಾಧೀನ ಮತ್ತು ಅನುದಾನ ಕೊರತೆಯ ಕಾರಣ ದಶಕಗಳಿಂದ ಈ ಯೋಜನೆ ನನೆಗುದಿಗೆ ಬಿದ್ದಿತ್ತು. ಅಗತ್ಯ ಭೂಮಿ ಸ್ವಾಧೀನಪಡಿಸಿಕೊಳ್ಳುವ ಮೂಲಕ ಪಿಆರ್ಆರ್ ಯೋಜನೆ ಆರಂಭಿಸುವಂತೆ ಸುಪ್ರೀಂ ಕೋರ್ಟ್ ಇತ್ತೀಚಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಕ್ಕೆ ಸೂಚಿಸಿದೆ.

ಯೋಜನೆಗೆ ತಾಂತ್ರಿಕ ವಿವರಗಳು ಮತ್ತು ಟೆಂಡರ್ಗಳನ್ನು ಅಂತಿಮಗೊಳಿಸಲು ರಾಜ್ಯ ಸರಕಾರ ಇತ್ತೀಚಿಗೆ ಎರಡು ಸಭೆಗಳನ್ನು ನಡೆಸಿದೆ. ಯೋಜನಾ ವೆಚ್ಚ 21,091 ಕೋಟಿ ರೂ. ಆಗಿದ್ದು, ಸಾರ್ವಜನಿಕ – ಖಾಸಗಿ ಸಹಭಾಗಿತ್ವದಲ್ಲಿ(ಪಿಪಿಪಿ) ರಸ್ತೆ ನಿರ್ಮಿಸಲು ಸರಕಾರ ಮತ್ತು ಬಿಡಿಎ ನಿರ್ಧರಿಸಿವೆ. ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಆಧಾರದ ಮೇಲೆ ಗುತ್ತಿಗೆದಾರರ ನಿರ್ಧಾರವಾಗುವ ನಿರೀಕ್ಷೆಯಿದೆ.

ಹಿಂದಿನ ಪ್ರಸ್ತಾವನೆಯಂತೆ ಯೋಜನೆಗಾಗಿ 33,000 ಮರಗಳನ್ನು ತೆರೆವುಗೊಳಿಸಬೇಕಿದೆ. ಯೋಜನೆಯ ವಿನ್ಯಾಸದಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ಹೆಚ್ಚುವರಿ ಭೂಮಿ ಸ್ವಾಧೀನದ ಕಾರಣ ಹೆಚ್ಚುವರಿ 5,000 ಮರಗಳನ್ನು ತೆರೆವುಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಹೊಸ ಪ್ರಸ್ತಾವನೆಯನ್ನು ಬಿಡಿಎ ಸಲ್ಲಿಸಿದೆ ಎಂದು ತಿಳಿಸಿದರು.
15 ವರ್ಷಗಳ ಹಿಂದೆ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದಾಗ ಯೋಜನಾ ವೆಚ್ಚ 3 ಸಾವಿರ ಕೋಟಿ ರೂ. ಆಗಿತ್ತು. ಆದರೆ ಸುದೀರ್ಘ ವಿಳಂಬದ ಕಾರಣ ಯೋಜನಾ ವೆಚ್ಚು ಏಳು ಪಟ್ಟು ಹೆಚ್ಚಿದೆ. ಇತ್ತೀಚಿನ ಅಂದಾಜಿನ ಪ್ರಕಾರ, ಭೂಸ್ವಾಧೀನಕ್ಕೆಂದೇ 15,475 ಕೋಟಿ ರೂ. ವೆಚ್ಚವಾಗಲಿದೆ ಹಾಗೂ ಸಂಪೂರ್ಣ ಯೋಜನಾ ವೆಚ್ಚ 21,091 ಕೋಟಿ ರೂ. ನಿಗದಿಪಡಿಸಲಾಗಿದೆ.
ಪಿಆರ್ಆರ್ ನಿರ್ಮಾಣಕ್ಕೆ ಐರೋಪ್ಯ ಕಂಪನಿಗಳು ಮತ್ತು ಇಸ್ರೇಲಿ ಸಂಸ್ಥೆ ಆಸಕ್ತಿ ತೋರಿವೆ. ಆದರೆ ಇನ್ನೂ ಟೆಂಡರ್ ಪ್ರಕ್ರಿಯೆ ಆರಂಭವಾಗಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…
ಸಿನಿಮಾಗಳಲ್ಲಿ ಸ್ಟಾರ್ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…
ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…