ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ
ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ.
ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು ಆರೋಪಗಳನ್ನು ಮಾಡಲಾಗಿದೆ. ಆದರಿಂದ ಸರ್ಕಾರದಿಂದ ಅಥವಾ ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಅಧಿಕೃತಗೊಳಿಸದ ಯಾವುದೇ ಏಜೆನ್ಸಿಯ ಯಾವುದೇ ಚಟುವಟಿಕೆಗಳನ್ನು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವರೆಗೆ ಜಿಲ್ಲೆಯಲ್ಲಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಮತದಾರರ ಹಾಗೂ ವೈಯಕ್ತಿಕ ಡಾಟಾವನ್ನು ಸುರಕ್ಷಿತವಾಗಿರಿಸಲು ಯಾವುದೇ ಮಾಧ್ಯಮದ ಮೂಲಕ ಯಾವುದೇ ರೀತಿಯ ನೇರ ಸಮೀಕ್ಷೆಗಳಲ್ಲಿ ಭಾಗಿಯಾಗುವ ಸಂಸ್ಥೆ/ವ್ಯಕ್ತಿಗಳ ವಿರುದ್ದ ಐ.ಪಿ.ಸಿ ಸೆಕ್ಷನ್ 188 ರಡಿಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳವುದಾಗಿ ಆದೇಶದಲ್ಲಿ ಎಚ್ಚರಿಸಲಾಗಿದೆ.
ಸಾರ್ವಜನಿಕರು ಅಂತಹ ಚಟುವಟಿಕೆಗಳ ಬಗ್ಗೆ ಯಾವುದೇ ಕುಂದುಕೊರತೆ ಇದ್ದಲ್ಲಿ ಸಾಕ್ಷಿ ಆಧಾರಗಳೊಂದಿಗೆ ದೂರನ್ನು ಜಿಲ್ಲಾ ಚುನಾವಣಾಧಿಕಾರಿಗಳ ಕಛೇರಿಯ ಟೋಲ್ ಫ್ರೀ ಸಂಖ್ಯೆ: 08152-1950 ಮೂಲಕ ತಿಳಿಸಬಹುದು ಹಾಗೂ ಸಾರ್ವಜನಿಕರು ಭಾರತ ಚುನಾವಣಾ ಆಯೋಗದ ಅನುಮೋದಿತ ತಂತ್ರಾAಶಗಳ ಮೂಲಕ ಮಾತ್ರವೇ ಮಾಹಿತಿಯನ್ನು ಜಿಲ್ಲಾ ಚುನಾವಣಾಧಿಕಾರಿ ಅಥವಾ ಅವರಿಂದ ನೇಮಿಸಲಾದ ಅಧಿಕೃತ ಅಧಿಕಾರಿಗಳಿಗೆ ಮತ್ತು ಬಿ.ಎಲ್.ಓ/ಮತಗಟ್ಟೆ ಹಂತದ ಅಧಿಕಾರಿಗಳಿಗೆ ಮಾತ್ರ ತಮ್ಮ ವೈಯಕ್ತಿಕ ಅಥವಾ ಮತದಾರರ ಮಾಹಿತಿಯನ್ನು ಹಂಚಿಕೊಳ್ಳುವಂತೆ ಸಾರ್ವಜನಿಕರಿಗೆ ಕೋಲಾರಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್‌ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….
19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…