ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು.
‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ ಟಿಕೆಟ್ ನೀಡುವುದು ಖಚಿತ’ ಎಂದರು.
‘ಸಿದ್ದರಾಮಯ್ಯ ಹಾಗೂ ಅವರ ಕಾಂಗ್ರೆಸ್ ಪಕ್ಷವು ಕುರುಬ, ಒಕ್ಕಲಿಗ, ದಲಿತ ಹಾಗೂ ಅಲ್ಪಸಂಖ್ಯಾತರ ವಿರೋಧಿ. ಇವರೆಲ್ಲರೂ ಸಿದ್ದರಾಮಯ್ಯ ಕೋಲಾರಕ್ಕೆ ಬರಲಿ ಎಂದು ಕಾಯುತ್ತಿದ್ದಾರೆ’ ಎಂದು ಹೇಳಿದರು.

‘ಕಾಂಗ್ರೆಸ್ ಪಕ್ಷವು ದಲಿತರ ವಿರೋಧಿ. ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಯಾರು? ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಅಂತ್ಯಸಂಸ್ಕಾರಕ್ಕೆ ನೂರಾರು ಎಕರೆ ಜಾಗ ಕೊಟ್ಟ ಕಾಂಗ್ರೆಸ್ಸಿಗರು ಅಂಬೇಡ್ಕರ್ ವಿಧಿವಶರಾದಾಗ ದೆಹಲಿ
ಯಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ’ ಎಂದು ಟೀಕಿಸಿದರು.
‘ಕೇಂದ್ರ ಸರ್ಕಾರ ₹ 100 ಅನುದಾನ ಬಿಡುಗಡೆ ಮಾಡಿದರೆ ಜನತೆಗೆ ₹20 ಮಾತ್ರ ತಲುಪುತ್ತಿದೆ ಎಂಬುದಾಗಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜೀವ್ ಗಾಂಧಿ ಹೇಳಿದ್ದರು. ಮೂರು ತಲೆಮಾರಿಗಾಗುವಷ್ಟು ಆಸ್ತಿ ಮಾಡಿಕೊಂಡಿರುವುದಾಗಿ ಈಚೆಗೆ ಶ್ರೀನಿವಾಸಪುರ ಶಾಸಕರ ಘೋಷಿಸಿದ್ದರು. ಜನರ ದುಡ್ಡು ತಿಂದು ತೇಗಿದ್ದೇ ಇವರ ಸಾಧನೆ’ ಎಂದುಆರೋಪಿಸಿದರು.
ಮಾಜಿ ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ‘ವಕ್ಕಲೇರಿ ಹೋಬಳಿಯ ಜನತೆ ಬುದ್ಧಿವಂತರು. ಈ ಕ್ಷೇತ್ರದಲ್ಲಿ ಈ ಹಿಂದಿನ ಎರಡೂ ಚುನಾವಣೆಗಳಲ್ಲಿ ನನಗೆ ಮುನ್ನಡೆ ನೀಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ. ಈ ಕ್ಷೇತ್ರದಲ್ಲಿ ಗೆದ್ದ ಶಾಸಕರು ಜನರು ಹಾಗೂ ಗ್ರಾಮಗಳನ್ನು ಮರೆತಿದ್ದಾರೆ’ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…
ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…
ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…