ಸಿನಿಮಾ

ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

329

ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ ಬಸ್ ನಿಲ್ದಾಣ ವೃತ್ತಕ್ಕೆ ಕರೆ ತರಲಾಯಿತು.

ಅಲ್ಲಿ ಅಭಿಮಾನಿಗಳು ಮತ್ತು ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮುಖ್ಯಸ್ಥ ರಮೇಶ್‌ಯಾದವ್ ಇತರರು ಬೃಹತ್ ಆಪಲ್ ಮತ್ತು ಹೂವಿನ ಹಾರವನ್ನು ಕ್ರೇನ್ ಮೂಲಕ ಹಾಕಿ ಸ್ವಾಗತಿಸಿದರು. ಅಲಂಕೃತ ತೆರೆದ ಜೀಪಿನಲ್ಲಿ ಬಸ್ ನಿಲ್ದಾಣ ವೃತ್ತದಿಂದ ಭವಾನಿ ಚಿತ್ರ ಮಂದಿರದವರೆವಿಗೂ ಅವರನ್ನು ಹೂಗಳ ಸುರಿಮಳೆಯ ಸ್ವಾಗತ, ಡಿಜೆ ಮತ್ತು ಬ್ಯಾಂಡ್‌ಸೆಟ್ ಸಾರಥ್ಯದಲ್ಲಿ ಕಿಕ್ಕಿರಿದು ನೆರೆದಿದ್ದ ಅಭಿಮಾನಿಗಳು ಕರೆ ತಂದರು.

ಚಿತ್ರ ಮಂದಿರದಲ್ಲಿಯೂ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳತ್ತ ಕೈಬೀಸುತ್ತಾ ಚಿತ್ರದ ತಂಡ ಚಿತ್ರಮಂದಿರವನ್ನು ಪ್ರವೇಶಿಸಿತು. ಚಿತ್ರಮಂದಿರದಲ್ಲಿ ರಮೇಶ್‌ಯಾದವ್ ತಂಡವು ಅವರಿಗೆ ಆತ್ಮೀಯ ಸ್ವಾಗತಕೋರಿ ಕೇಕ್ ಕತ್ತರಿಸಿ, ಆಗಮಿಸಿದ್ದ ಚಿತ್ರ ತಂಡದ ಸದಸ್ಯರಿಗೆ ಸನ್ಮಾನ ಮಾಡಿದರು.

ಕೆಲ ಹೊತ್ತು ಅಭಿಮಾನಿಗಳೊಂದಿಗೆ ವೀರಸಿಂಹಾರೆಡ್ಡಿ ಚಿತ್ರ ವೀಕ್ಷಿಸಿದ ದುನಿಯಾವಿಜಿ ಮತ್ತು ಚಿತ್ರದ ತಂಡ ಕೋಲಾರದ ಅಭಿಮಾನಿಗಳ ಸ್ವಾಗತಕ್ಕೆ ಮನಸೋತರು. ನಿರ್ದೇಶಕ ಗೋಪಿಚಂದ್ ಮಲಿನೇನಿಮಾತನಾಡಿ, ಮುಂದಿನ ದಿನಗಳಲ್ಲಿ ಬಾಲಕೃಷ್ಣರನ್ನು ಕೋಲಾರಕ್ಕೆ ಕರೆ ತರುವುದಾಗಿ ಘೋಷಿಸಿದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    10 ವರ್ಷಗಳ ಹಿಂದೆ 16 ಕೆಜಿ ತೂಕವಿದ್ದ ಈ ಯುವತಿ ಈಗ ಹೇಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.

  • ಕರ್ನಾಟಕ

    ಕಲ್ಲಡ್ಕ ಶಾಲೆಯ ಸ್ವಾಭಿಮಾನಿ ಮಕ್ಕಳ ನೆರವಿಗೆ ನಿಂತ ಹೆಣ್ಣು ಮಗಳು…! ಹೇಗೆ ಎಂದು ತಿಳಿಯಲು ಈ ಲೇಖನ ಓದಿ ….

    ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..

  • ಸಿನಿಮಾ

    ನಮ್ಮ ಮೈಯಲ್ಲಿರುವ ರಕ್ತ ತೆಗೆದು ನಿಮ್ಮ ಕಾಲು ತೊಳಿಬೇಕು ಎಂದ ದರ್ಶನ್..!

    ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್​ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್​ ಜ್ಯುಬಿಲಿ ಪಾರ್ಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…

  • ಸುದ್ದಿ

    ಇನ್ಮುಂದೆ ಹೊಸ ಅಂಕಪಟ್ಟಿ ಪಡೆಯಬೇಕೆಂದರೆ ಆಧಾರ್‌ ಕಡ್ಡಾಯ,.!

    ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್‌ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…

  • ಸುದ್ದಿ

    ಫ್ಲೈಯಿಂಗ್ ಕಿಸ್ ಕೊಟ್ಟ ವ್ಯಕ್ತಿಗೆ 3 ವರ್ಷ ಜೈಲು, 3 ಸಾವಿರ ದಂಡ ವಿಧಿಸಿದ ಕೋರ್ಟ್ ….!

    ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ  ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…