ಸಾಧನೆ

ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

118
ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ.
ಅತ್ಯಂತ ತಳ ಸಮುದಾಯದ ಮತ್ತು ಬಡತನದ ಹಿನ್ನೆಲೆಯಿಂದ ಬಂದ ಗಾಯತ್ರಿರವರು ಬಂಗಾರಪೇಟೆಯ ಕಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಧ್ಯಾಭ್ಯಾಸ ಆರಂಭಿಸಿ  ಬಾಲಕಿಯ ಪ್ರೌಢಶಾಲೆಯಲ್ಲಿ ಓದಿ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದುಕೊಂಡಿದ್ದರು.
ಕೆಜಿಎಫ್‌ನ ಕೆಂಗಲ್ ಹನುಮಂತಯ್ಯ ಲಾ ಕಾಲೇಜಿನಲ್ಲಿ ಕಾನೂನು ಪದವಿಯಲ್ಲಿ ಕರ್ನಾಟಕಕ್ಕೆ ನಾಲ್ಕನೆ‌ ಶ್ರೇಣಿಯನ್ನು ಪಡೆದುಕೊಂಡು ಉತ್ತೀರ್ಣರಾಗುವ ಮೂಲಕ ಗಮನ ಸೆಳೆದಿದ್ದರು. ಬಂಗಾರಪೇಟೆಯ  ನಾರಾಯಣಸ್ವಾಮಿ ವೆಂಕಟಲಕ್ಷ್ಮಿರವರ ಒಬ್ಬಳೇ ಮಗಳಾಗಿದ್ದು ತೀರಾ ಬಡತನದಲ್ಲಿ ಬೆಳೆದ ಗಾಯಿತ್ರಿರವರು ಮೊದಲಿನಿಂದಲೂ ಸಾಮಾಜಿಕ ಕಾಳಜಿಹೊಂದಿದ್ದು  ಏನಾದರೂ ಸಾಧಿಸಬೇಕೆಂಬ ಛಲ ಹೊಂದಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….

  • KOLAR NEWS PAPER

    ಕೆಎಂಎಫ್ ನಂದಿನಿ ಅಮುಲ್ ಜತೆ ವಿಲೀನದ ಪ್ರಸ್ತಾಪಕ್ಕೆ ಖಂಡನೆ

    ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…

  • ಸುದ್ದಿ

    ಯಾರಿಗೆ ಒಲಿಯುತ್ತೆ ಪ್ರಧಾನಿ ಪಟ್ಟ..?ಸಮೀಕ್ಷೆಯಲ್ಲಿ ಬಯಲಾಯ್ತು ಮತದಾರ ಪ್ರಭುವಿನ ಮನದಾಳ!ಈ ಸುದ್ದಿ ನೋಡಿ…

    ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…

  • ಸಿನಿಮಾ

    ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

    ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…

  • ಸಂಬಂಧ

    ಕಷ್ಟದಲ್ಲಿರುವಾಗ ಹುಡುಗಿಯರು ಅಳುತ್ತಾರೆ,ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?ತಿಳಿಯಲು ಇದನ್ನು ಓದಿ..

    ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?

  • ಸುದ್ದಿ

    ಬೀಳುವ ಹಂತದಲ್ಲಿ ಶಿಥಿಲಗೊಂಡಿದ್ದ ಸರ್ಕಾರೀ ಶಾಲೆಯ ಅಭಿವೃದ್ಧಿಗೆ ಮುಂದಾದ ಸಂಸದ ಜಿಸಿ ಚಂದ್ರಶೇಖರ್..!

    ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….