ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ.
ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ ಮತ್ತು ಗ್ರಹರಾಜ ಎಂದೂ ಕೂಡ ಕರೆಯಲಾಗುತ್ತದೆ. ಏಳು ಕುದುರೆಗಳುಳ್ಳ ರಥವು ಸೂರ್ಯದೇವನ ವಾಹನವಾಗಿದ್ದು, ಈತ ದೇಹದಲ್ಲಿನ 7 ಚಕ್ರಗಳನ್ನು ಹಾಗೂ ಕಾಮನಬಿಲ್ಲಿನ 7 ಬಣ್ಣಗಳನ್ನು ಪ್ರತಿನಿಧಿಸುತ್ತಾನೆ.
ಹಿಂದೂ ಧರ್ಮದಲ್ಲಿ ನಾಗರಹಾವನ್ನು ಹೊರತುಪಡಿಸಿ ಕಣ್ಣಿಗೆ ಕಾಣುವ ದೇವರೆಂದು ಸೂರ್ಯದೇವನನ್ನು ಕರೆಯುತ್ತಾರೆ. ಈತನನ್ನು ಪ್ರತಿದಿನವು ನಾವು ನೋಡಬಹುದಾಗಿದೆ. ಪ್ರತಿದಿನವು ಈತನಿಂದಲೇ ಆರಂಭ, ಈತನಿಂದಲೇ ಅಂತ್ಯ. ಶೈವ ಧರ್ಮದಲ್ಲಿ ಸೂರ್ಯನನ್ನು ಶಿವನೆಂದು, ವೈಷ್ಣವ ಧರ್ಮದಲ್ಲಿ ವಿಷ್ಣುವೆಂದು ಪೂಜಿಸುತ್ತಾರೆ. ಸೂರ್ಯನನ್ನು ವೈವಸ್ವತ, ರವಿ, ಆದಿತ್ಯ, ಪುಷ, ದಿವಾಕರ, ಸವಿತಾ, ಅರ್ಕ, ಮಿತ್ರ, ಭಾನು, ಭಾಸ್ಕರ ಮತ್ತು ಗ್ರಹಪತಿ ಅಥವಾ ಗ್ರಹರಾಜ ಎಂದೂ ಕೂಡ ಕರೆಯಲಾಗುತ್ತದೆ.
ಈಗಾಗಲೇ ಹೇಳಿರುವ ಹಾಗೇ ಹಿಂದೂ ಧರ್ಮದ ಪ್ರಮುಖ ದೇವರಾದ ಸೂರ್ಯನು ಕತ್ತಲನ್ನು ನಿವಾರಿಸಿ ಬೆಳಕನ್ನು ಹೊರಸೂಸುತ್ತಾನೆ. ಇದರರ್ಥ ಜಗತ್ತಿನಲ್ಲಿ ಅಜ್ಞಾನವನ್ನು ತೊಡೆದು ಹಾಕಿ ಸುಜ್ಞಾನವು ಬೆಳಗುವಂತೆ ಮಾಡುತ್ತಾನೆ. ಸೂರ್ಯ ದೇವನ ಕಿರಣಗಳಿಗೆ ಜನ ಜೀವನ ವನ್ನು ಸಂರಕ್ಷಿಸುವ, ಸಂಹಾರ ಮಾಡುವ ಎರಡೂ ಗುಣವೂ ಇದೆ. ಈತನ ಕೋಪಕ್ಕೆ ಕಾರಣರಾದವರು ಈತನ ಕಿರಣಗಳಿಂದಲೇ ಸುಟ್ಟು ಬಸ್ಮರಾಗುತ್ತಾರೆ. ಪ್ರತಿದಿನವು ಬೆಳಗಿನಿಂದ ಸಂಜೆಯವರೆಗೆ ಒಳಿತನ್ನು ಮಾಡುವ ಸೂರ್ಯದೇವನನ್ನು ಪೂಜಿಸಿದರೆ ಪ್ರತಿನಿತ್ಯದ ಕಷ್ಟವು ದೂರಾಗುತ್ತದೆ.
ರಥಸಪ್ತಮಿ ಎಂದರೆ ತಕ್ಷಣ ನೆನಪಾಗುವುದು ಎಕ್ಕದ ಎಲೆಯನ್ನು ಇಟ್ಟುಕೊಂಡು ಸ್ನಾನ ಮಾಡುವುದು. ಬೆಳಗಿನ ಜಾವದಲ್ಲಿ ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದಗಳ ಮೇಲೆ ಎಕ್ಕದ ಎಲೆಯನ್ನು ಇಟ್ಟುಕೊಂಡು ಸ್ನಾನ ಮಾಡಿ, ಪೂರ್ವಾಭಿಮುಖವಾಗಿ ಸೂರ್ಯನಿಗೆ ನಮಸ್ಕರಿಸುವುದು ರಥ ಸಪ್ತಮಿಯ ದಿನದಂದು ನಡೆದುಕೊಂಡು ಬಂದಿರುವ ರೂಢಿ. ಎಕ್ಕದ ಎಲೆಗಳನ್ನು ಮೇಲೆ ಹೇಳಿರುವ ದೇಹದ ಭಾಗಗಳಿಗೆ ಇಟ್ಟುಕೊಂಡು ಸ್ನಾನ ಮಾಡಿದ ನಂತರ, ಸೂರ್ಯನ 108 ಹೆಸರುಗಳನ್ನು ಉಚ್ಛರಿಸಿ ಸೂರ್ಯ ನಮಸ್ಕಾರ ಮಾಡುವ ಪದ್ಧತಿಯೂ ಇದೆ. ಒಂದು ವೇಳೆ 108 ನಾಮಗಳನ್ನು ಹೇಳಿಕೊಳ್ಳಲು ಸಾಧ್ಯವಾಗದೇ ಇದ್ದರೆ ಇಂದ್ರ, ಧಾತ, ಪರ್ಜನ್ಯ, ತ್ವಷ್ಟ, ಪುಷ, ಆರ್ಯಮ, ಭಾಗ, ವಿವಸ್ವನ, ವಿಷ್ಣು, ಅಂಶುಮಾನ, ವರುಣ ಮತ್ತು ಮಿತ್ರ ಎಂಬ ಸೂರ್ಯನ 12 ನಾಮಗಳನ್ನು ಜಪಿಸಿ ನಮಸ್ಕಾರ ಮಾಡಬಹುದಾಗಿದೆ.
ಸೂರ್ಯನ ಪಥ ಬದಲಾವಣೆಯಾಗುವುದರಿಂದ ಮಾಘಮಾಸದಿಂದ ಮುಂದಕ್ಕೆ ಚಳಿ ಗಣನೀಯವಾಗಿ ಕಡಿಮೆಯಾಗುತ್ತದೆ. ಈ ಹಿನ್ನೆಲೆಯಲ್ಲಿಯೂ ರಥಸಪ್ತಮಿಯ ಆಚರಣೆಯನ್ನು ನೋಡಬಹುದಾಗಿದ್ದು, ರಥಸಪ್ತಮಿ ಎಂಬ ಹೆಸರು ಸೂರ್ಯನ ರಥಕ್ಕೂ ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಗೂ ಸಂಬಂಧಿಸಿದ್ದನ್ನು ಸೂಚಿಸುತ್ತದೆ. ಸೂರ್ಯನ ಸಾರಥಿಯಾದ ಅರುಣ (ಅನೂರು) ರಥವನ್ನು ಉತ್ತರದತ್ತ ಮುನ್ನಡೆಸೆ, ಈಶಾನ್ಯ ದಿಕ್ಕಿಗೆ ಚಲಿಸುತ್ತಾನೆ. ಸೂರ್ಯನ ರಥದ ಚಕ್ರಗಳು ಕಾಲವನ್ನು, ಏಳು ಕುದುರೆಗಳು ಏಳು ಬಣ್ಣಗಳ ಹಾಗೂ ಏಳು ವಾರಗಳ ಪ್ರತಿನಿಧಿಗಳಾಗಿವೆ.
*ಇನ್ನು ರಥಸಪ್ತಮಿಯ ದಿನದಂದು ಬಳಸುವ ಎಕ್ಕದ ಎಲೆಗಳ ಬಗ್ಗೆ ಹೇಳುವುದಾದರೆ ಎಕ್ಕದ ಎಲೆಗಳಿಗೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು, ರೋಗಗಳನ್ನು ನಿವಾರಿಸುವ ಸಾಮರ್ಥ್ಯವಿದೆ, ಅಷ್ಟೇ ಅಲ್ಲದೇ, ದೇಹದಲ್ಲಿನ ಕೀಲು ನೋವು, ಹಲ್ಲು ನೋವು, ಹೊಟ್ಟೆ ನೋವುಗಳಿಗೂ ಸಹ ಎಕ್ಕದ ಗಿಡ, ಅದರ ಎಲೆಗಳಲ್ಲಿರುವ ಔಷಧೀಯ ಅಂಶಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ರಥ ಸಪ್ತಮಿಯಂದು ಮುಂಜಾನೆಯೇ ಎದ್ದು ಎಕ್ಕದ ಎಲೆಗಳನ್ನು ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದಗಳ ಮೇಲೆ ಇಟ್ಟುಕೊಂಡು ಸ್ನಾನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ ಎಂಬ ನಂಬಿಕೆ ಇದೆ*. ಈ ಹಿನ್ನೆಲೆಯಲ್ಲಿ ರಥಸಪ್ತಮಿಯ ದಿನದಂದು ಎಕ್ಕದ ಎಲೆಗಳನ್ನು ಮೈಮೇಲೆ ಇಟ್ಟುಕೊಂಡು ಸ್ನಾನ ಮಾಡುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
*”ರಥ ಸಪ್ತಮಿ ಸ್ನಾನ ಮಂತ್ರ”* –
ಸ್ನಾನ ಮಾಡುವಾಗ ಹೇಳುವ ಧ್ಯಾನಶ್ಲೋಕ ಮತ್ತು ಮಂತ್ರಗಳು
*ಸಪ್ತ ಸಪ್ತ ಮಹಾಸಪ್ತ ಸಪ್ತದ್ವೀಪಾ ವಸುಂಧರಾ |*
*ಸಪಾರ್ಕಪರ್ಣಮಾದಾಯ ಸಪ್ತಮ್ಯಾಂಸ್ನಾನ ಮಾಚರೇತ್ ||*
ಪ್ರಣವಸ್ಯ ಪರಬ್ರಹ್ಮಋಷಿ: ಪರಮಾತ್ಮಾ ದೇವತಾ., … ರಥಸಪ್ತಮಿ ಶುಭೇಶೋಭನ ಮುಹೂರ್ತೇ ಅದ್ಯಬ್ರಹ್ಮಣ: ದ್ವಿತೀಯಪರಾರ್ಧೇ ಶ್ರೀಶ್ವೇತವರಾಹಕಲ್ಪೇ ವೈವಸ್ವತ ಮನ್ವಂತರೇ ಕಲಿಯುಗೇ ಪ್ರಥಮಪಾದೇ ಭರತವರ್ಷೇ ದಂಡಕಾರಣ್ಯೇ ಗೋದಾವರ್ಯಾ: ದಕ್ಷಿಣೇತೀರೇ ಶಾಲೀವಾಹನಶಖೇ, ಬೌದ್ಧಾವತಾರೇ, ರಾಮಕ್ಷೇತ್ರೇ/ಪರಶುರಾಮಕ್ಷೇತ್ರೇ, ಅಸ್ಮಿನ್ ವರ್ತಮಾನೇ ಚಾಂದ್ರಮಾನೇನ ಶ್ರೀ _ಶುಭಕೃತ್ ನಾಮ_ ಸಂವತ್ಸರೇ, ಉತ್ತರಾಯಣೇ, ಶಿಶಿರಋತೌ, ಮಾಘಮಾಸೇ, ಶುಕ್ಲಪಕ್ಷೇ ಸಪ್ತಮ್ಯಾಂ ಶುಭತಿಥೌ, ರಥಸಪ್ತಮೀ ಪ್ರಯುಕ್ತ, ಲಕ್ಷ್ಮೀ ವೆಂಕಟೇಶ/ನರಸಿಂಹ ಪ್ರೀತ್ಯರ್ಥಂ ಸ್ನಾನಮಹಂ ಕರಿಷ್ಯೇ.
*ಯದ್ಯಜ್ಜನ್ಮಕೃತಂ ಪಾಪಂ ಮಯಾ ಸಪ್ತಸು ಜನ್ಮಸು |*
*ತನ್ಮೇ ರೋಗಂ ಚ ಶೋಕಂ ಚ ಮಾಕರೀ ಹಂತು ಸಪ್ತಮೀ |*
*ಏತಜ್ಜನ್ಮಕೃತಂ ಪಾಪಂ ಜಚ್ಚ ಜನ್ಮಾಂತರಾರ್ಜಿತಂ |*
*ಮನೋವಾಕ್ಕಾಯಜಂ ಯಚ್ಚ ಜ್ಞಾತಾಜ್ಞಾತಂ ಚ ಯತ್ಪುನ: |*
*ಇತಿ ಸಪ್ತವಿಧಂ ಪಾಪಂ ಸ್ನಾನಾನ್ಮೇ ಸಪ್ತ ಸಪ್ತಕೇ |*
*ಸಪ್ತವ್ಯಾಧಿಸಮಾಯುಕ್ತಂ ಹರ ಮಾಕರಿ ಸಪ್ತಮಿ |*
*ಸೂರ್ಯ ಅರ್ಘ್ಯ ಮಂತ್ರ –*
ಸಪ್ತಸಪ್ತಿವಹಪ್ರೀತ ಸಪ್ತಲೋಕಪ್ರದೀಪನ |
ಸಪ್ತಮೀ ಸಹಿತೋ ದೇವ ಗೃಹಾಣಾರ್ಘ್ಯಂ ದಿವಾಕರ |
*ಸೂರ್ಯ ಮಂತ್ರಗಳು:*
ಸೂರ್ಯ ದೇವನನ್ನು ಮನಸ್ಸಾದಗಲೆಲ್ಲಾ ಪೂಜಿಸುವಂತಿಲ್ಲ. ಆತನನ್ನು ಪೂಜಿಸಲು ಪ್ರತ್ಯಕ ಸಮಯವಿದೆ. ಮುಂಜಾನೆ ಸೂರ್ಯ ಹುಟ್ಟಿದಾಕ್ಷಣ ಸ್ನಾನ ಮಾಡಿ ಪರಿಶುದ್ಧ ಮನಸ್ಸಿನಿಂದ ಆತನನ್ನು ಪೂಜಿಸಬೇಕು. ಸೂರ್ಯನನ್ನು ಪೂಜಿಸುವಾಗ ಪಠಿಸಬೇಕಾದ ಮಂತ್ರಗಳು ಹೀಗಿವೆ:
*ಸೂರ್ಯ ಮಂತ್ರ:*
ನಮಃ ಸೂರ್ಯಾಯ ಶಾಂತಾಯಾ ಸರ್ವರೋಗ ನಿವಾರಿಣೆ
ಆಯುರ್ ಆರೋಗ್ಯ ಮ ಐಶ್ವರ್ಯ ಮ ದೇಹಿ ದೇವಾಃ ಜಗತ್ಪತೆ
ಈ ಮಂತ್ರವು ಸೂರ್ಯದೇವನನ್ನು ಹೊಗಳುವ ಮಂತ್ರವಾಗಿದೆ. ಈ ಮಂತ್ರದಲ್ಲಿ ಸೂರ್ಯನನ್ನು ಬ್ರಹ್ಮಾಂಡದ ಅಧಿಪತಿಯೆಂದು ಹೊಗಳಲಾಗುತ್ತದೆ. ಉತ್ತಮ ಆರೋಗ್ಯ, ಐಶ್ವರ್ಯ ಮತ್ತು ಸಮೃದ್ಧಿಗಾಗಿ ಭಕ್ತರು ಸೂರ್ಯದೇವನನ್ನು ಪ್ರಾರ್ಥಿಸಲಾಗುತ್ತದೆ. ಮಾನವನ ಜೀವನದಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯ ಈ ಮಂತ್ರಕ್ಕಿದೆ ಎಂದು ನಂಬಲಾಗಿದೆ.
*ಸೂರ್ಯ ಗಾಯತ್ರಿ ಮಂತ್ರ:*
ಓಂ ಆದಿತ್ಯಾಯ ವಿಧ್ಮಹೇ ಮಾರ್ತಾಂಡಾಯ ಧೀಮಹೀ ತನ್ನೋಃ ಸೂರ್ಯಃ ಪ್ರಚೋದಯಾತ್
*ಸೂರ್ಯ ವಶೀಕರಣ ಮಂತ್ರ:*
ಓಂ ನಮೋ ಭಗವತೇ ಶ್ರೀ ಸೂರ್ಯಾಯಾ ಹ್ರೀಂ ಸಹಸ್ರ ಕಿರಣಾಯ ಐಂ ಅತುಲಬಲ ಪರಾಕ್ರಮಾಯ ನವಗ್ರಹ
ದಶದಿಕ್ಪಾಲ ಲಕ್ಷ್ಮಿ ದೇವತಾಯ ಧರ್ಮಕರ್ಮ ಸಹಿತಾಯ ಅಮುಕ ನಾಥಾಯ ನಾಥಾಯ ನಾಮ ಮೋಹಾಯ ಮೋಹಾಯ
ಆಕರ್ಶಯ ಆಕರ್ಶಯ ದಾಸಾನುದಾಸಂ ಕುರು ಕುರು ವಶಂ ಕುರು ಕುರು ಸ್ವಾಹಾ
*ಈ ಮಂತ್ರವನ್ನು ಪಠಿಸಲಿಚ್ಛಿಸುವವರು ಸ್ನಾನ ಮಾಡಿ ಶುದ್ಧತೆಯಿಂದ ಈ ಮಂತ್ರವನ್ನು ಪಠಿಸಬೇಕು. ಈ ಮಂತ್ರವನ್ನು ಜಪಿಸುವುದರಿಂದ ಸಂಬಂಧಿಸಿದ ಸಮಸ್ಯೆಗಳನ್ನು, ಕೌಟುಂಬಿಕ ಸಮಸ್ಯೆಗಳನ್ನು ಬಗೆಹರಿಸಲು ಸಹಕರಿಸುತ್ತದೆ*.🙏
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…
ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…
ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…