govt

ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

64

ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಹಣಕಾಸು ಅಧಿಕಾರಿಗಳೊಂದಿಗೆ ಸಹ ಚರ್ಚಿಸಿ, ರಾಜ್ಯ ಸರ್ಕಾರಿ ನೌಕರರಿಗೆ , ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಆದೇಶಿಸಲಾಗಿದೆ. ಎನ್.ಪಿ.ಎಸ್ ಕುರಿತಂತೆ ಸಮಿತಿಯೊಂದನ್ನು ರಚಿಸಿ, ಅದರ ವರದಿಯನುಸಾರ ಕ್ರಮ ಕೈಗೊಳ್ಳುತ್ತೇವೆ.

ರಾಜ್ಯ ನೌಕರರ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಪರಿಶೀಲಿಸಲು 7ನೇ ವೇತನ ಆಯೋಗವನ್ನು ರಚಿಸಿ ಆದೇಶ ಹೊರಡಿಸಲಾಗಿರುತ್ತದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಸರ್ಕಾರದ ನೀತಿ ನಿರ್ಣಯದಂತೆ 7ನೇ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸುತ್ತದೆ. ಅದರಂತೆ ಈ ಕೆಳಕಂಡ ಆದೇಶವನ್ನು ಹೊರಡಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 2023ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನ ಶೇಕಡ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರ ಮಾಡಲು ಸರ್ಕಾರ ಹರ್ಷಿಸುತ್ತದೆ ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ಹಣಕಾಸು ಇಲಾಖೆ ಅಧಿಕಾರಿಳ ಜೊತೆಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಎಸಿಎಸ್​ ಐಎಸ್​​ಎನ್‌ ಪ್ರಸಾದ್ ಜತೆ ಧನಾತ್ಮಕವಾಗಿ ಚರ್ಚೆಯಾಗಿದೆ. ಫಿಟ್​ಮೆಂಟ್​ ಆದೇಶ, ಎನ್​ಪಿಎಸ್​ ರದ್ದು ಸಂಬಂಧ ಆದೇಶಿಸಿದ್ದಾರೆ. ಎನ್​ಪಿಎಸ್​ ಸಂಬಂಧ ಸರ್ಕಾರ ಸಮಿತಿ ರಚಿಸಿದೆ. ಸುಮಾರು 2 ತಿಂಗಳು ಕಾಲಾವಕಾಶ ನೀಡಿ ಸರ್ಕಾರ ಆದೇಶ ಮಾಡಿದೆ. ಆದೇಶ ಸಂಪೂರ್ಣ ತೃಪ್ತಿ ತಂದಿಲ್ಲ, ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಸ್ಪಷ್ಟಪಡಿಸಿದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ತಾಮ್ರದ ಲೋಟದಲ್ಲಿ ನೀರು ಕುಡಿದರೆ ಏನೆಲ್ಲಾ ಪರಿಣಾಮ ಆಗುತ್ತೆ ಗೊತ್ತಾ???

    ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ

  • ಸುದ್ದಿ

    ನಟಿ ಕಾಜಲ್‍ಗಾಗಿ ಬರೋಬ್ಬರಿ 60 ಲಕ್ಷ ರೂ. ಕಳೆದುಕೊಂಡ ಅಭಿಮಾನಿ…!

    ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್‌ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…

  • ಸುದ್ದಿ

    ಈ ವರ್ಷವೂ ಗೂಗಲ್ ಸರ್ಚ್​ನಲ್ಲಿ ನಂ 1 ಸ್ಥಾನ ಉಳಿಸಿಕೊಂಡ ಸೆಲಿಬ್ರೆಟಿ…ಯಾರು ಗೊತ್ತೇ ?

    ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್​ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…

  • ದೇಶ-ವಿದೇಶ

    ಜುಲೈ 1ರಿಂದ ಜಾರಿಗೆ ಬರುವ ಈ ವೆವಸ್ಥೆಯಿಂದ ಏನೆಲ್ಲಾ ಬದಲಾವಣೆ ಆಗುತ್ತೆ ಗೊತ್ತಾ!ತಿಳಿಯಲು ಈ ಲೇಖನಿ ಓದಿ…..

    ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…

  • India

    ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

    ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…

  • ಸುದ್ದಿ

    ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

    ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…