ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ.
ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ.
2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ಸೂಚನೆ.
ಸದ್ಯ 2,000 ರೂ ನೋಟು ಹೊಂದಿದ್ದರೆ ಅವರು ಮೇ 23ರ ನಂತರ ಸಮೀಪದ ಬ್ಯಾಂಕ್‌ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು.
2 ಸಾವಿರ ರೂ. ನೋಟ್ ಬ್ಯಾನ್: ಚಲಾವಣೆ ಸ್ಥಗಿತಗೊಳಿಸಿದ RBI, ಸೆ. 30 ರವರೆಗೆ ಕರೆನ್ಸಿ ಬದಲಾವಣೆಗೆ ಅವಕಾಶ
2000 ರೂ. ನೋಟು ನೀಡದಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ.
ಹಾಲಿ ಇರುವ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ
ಬ್ಯಾಂಕುಗಳಲ್ಲಿ 2000 ರೂ. ನೋಟುಗಳ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.
2018 ರಲ್ಲಿ 2000 ನೋಟು ಮುದ್ರಣ ಸ್ಥಗಿತಗೊಳಿಸಲಾಗಿತ್ತು.
2000 ನೋಟು ಚಲಾವಣೆಯನ್ನು ಆರ್ಬಿಐ ವಾಪಸ್ ಪಡೆದುಕೊಂಡಿದೆ.
2016ರ ನವೆಂಬರ್ ನಲ್ಲಿ 2000 ರೂ. ನೋಟು ಚಲಾವಣೆಗೆ ತರಲಾಗಿತ್ತು.
ಸೆಪ್ಟೆಂಬರ್ 30ರವರೆಗೆ ನೋಟು ಬದಲಾವಣೆಗೆ ಅವಕಾಶ ನೀಡಲಾಗಿದೆ.
ಬ್ಯಾಂಕುಗಳಲ್ಲಿ 2000 ರೂ. ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದ್ದು, ಸೆ. 30ರವರೆಗೂ ಅವಕಾಶ ಕಲ್ಪಿಸಲಾಗಿದೆ.
ನವದೆಹಲಿ : ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ತಿಳಿಸಿದೆ.
ಶುಕ್ರವಾರ ಬಿಡುಗಡೆ ಪ್ರಕಟಣೆಯಲ್ಲಿ ಭಾರತೀಯ ರಿಸರ್ವರ್ ಬ್ಯಾಂಕ್ ಮಾಹಿತಿ ನೀಡಿದ್ದು,” 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಲಾಗಿದೆ. ಅಕ್ಟೋಬರ್ 1 ರಿಂದ ಈ ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ. ಹೀಗಾಗಿ, ಸೆ.30ರ ಒಳಗೆ ಸಾರ್ವಜನಿಕರು ಬ್ಯಾಂಕ್‌ಗಳಿಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬೇಕು ” ಎಂದು ಸೂಚನೆ ನೀಡಿದೆ.
ಮೇ 23 ರಿಂದ ಬದಲಾವಣೆಗೆ ಅವಕಾಶ
ಸದ್ಯ 2,000 ರೂಪಾಯಿ ನೋಟು ಹೊಂದಿದ್ದರೆ ಮೇ 23ರ ನಂತರ ಸಮೀಪದ ಬ್ಯಾಂಕ್‌ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು. ಆದರೆ, ಒಮ್ಮೆಗೆ 10 ನೋಟುಗಳ ಅಂದರೆ 20 ಸಾವಿರ ರೂಪಾಯಿ ಮಾತ್ರ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.
2016 ರಲ್ಲಿ 500 ಹಾಗೂ 1000 ನೋಟ್ ಬ್ಯಾನ್ ಆಗಿತ್ತು
2016ರ ನವೆಂಬರ್ 8 ರಂದು 500 ಹಾಗೂ 1000 ಮುಖಬೆಲೆಯ ನೋಟು ಅಮಾನ್ಯೀಕರಣದ ನಂತರ ಹೊಸದಾಗಿ 2000 ರೂ. ನೋಟುಗಳನ್ನು ಪರಿಚಯಿಸಲಾಗಿತ್ತು. ಸದ್ಯ ಆ ನೋಟಿನ ಚಲಾವಣೆ ನಿಲ್ಲಿಸಿ ವಾಪಸ್ ಪಡೆಯುವುದಾಗಿ ಆರ್‌ಬಿಐ ತಿಳಿಸಿದೆ.
ಐದು ವರ್ಷಗಳ ಹಿಂದೆಯೇ ನೋಟು ಮುದ್ರಣ ಸ್ಥಗಿತ
2018ರಲ್ಲಿಯೇ 2000 ರೂಪಾಯಿ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತಾಗಿ ಸದನಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಲಾಗಿತ್ತು. ಇದೀಗ ಕ್ಲೀನ್ ನೋಟ್ ಅಭಿಯಾನದಡಿ ನೋಟ್‌ಗಳನ್ನು ಹಿಂಪಡೆಯಲು ಆರ್‌ಬಿಐ ಮುಂದಾಗಿದೆ. ಮೇ 23, 2023ರಿಂದ ಯಾವುದೇ ಬ್ಯಾಂಕ್‌ನಲ್ಲಿ 2000 ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಸೂಚಿಸಿದೆ.
ಸೆಪ್ಟೆಂಬರ್ 30 ನಂತರವೂ ಕಾನೂನು ಬದ್ದವಾಗಿರುತ್ತವೆ
ಜನರು ಬ್ಯಾಂಕ್‌ಗಳೊಂದಿಗೆ ನೋಟುಗಳನ್ನು ಬದಲಾಯಿಸಿಕೊಳ್ಳಲು 4 ತಿಂಗಳ ಸಮಯ ಸಾಕು. ಚಲಾವಣೆಯಲ್ಲಿರುವ ಹೆಚ್ಚಿನ ರೂ 2000 ನೋಟುಗಳು ಸೆಪ್ಟೆಂಬರ್ 30 ರ ನಿರ್ದಿಷ್ಟ ಸಮಯದ ಚೌಕಟ್ಟಿನೊಳಗೆ ಬ್ಯಾಂಕ್‌ಗಳಿಗೆ ಹಿಂತಿರುಗುತ್ತವೆ ಎಂದು ಆರ್‌ಬಿಐ ಹೇಳಿದೆ. ಸೆಪ್ಟೆಂಬರ್ 30 ರ ನಂತರವೂ ಕಾನೂನುಬದ್ಧವಾಗಿ ಉಳಿಯುತ್ತದೆ. ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.
2,000 ರೂ ನೋಟು ವಿನಿಮಯಕ್ಕೆ ಏನಿವೆ ನಿಯಮಗಳು?
ಸಾರ್ವಜನಿಕರು ಒಮ್ಮೆಗೆ 20,000 ರೂ ಮೊತ್ತದ ನೋಟುಗಳನ್ನು ವಿನಿಯಮ ಮಾಡಿಕೊಳ್ಳಲು ಅವಕಾಶ ಇದೆ. ಅಂದರೆ 2,000 ರೂ ಮುಖಬೆಲೆಯ 10 ನೋಟುಗಳನ್ನು ಮಾತ್ರ ಎಕ್ಸ್ಚೇಂಜ್ ಮಾಡಬಹುದು.
ಬ್ಯಾಂಕ್ ಖಾತೆ ಹೊಂದಿಲ್ಲದಿದ್ದವರೂ ಕೂಡ ಯಾವುದೇ ಬ್ಯಾಂಕ್ ಕಚೇರಿಗೆ ಹೋಗಿ ಏಕಕಾಲದಲ್ಲಿ 2,000 ರೂ ಮುಖಬೆಲೆಯ 10 ನೋಟುಗಳನ್ನು ವಿನಿಯಮ ಮಾಡಿಕೊಳ್ಳಬಹುದು.
ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲು ಯಾವುದೇ ಮಿತಿ ಇಲ್ಲ. 2,000 ರೂ ಮುಖಬೆಲೆಯ ಎಷ್ಟು ಬೇಕಾದರೂ ನೋಟುಗಳನ್ನು ಅಕೌಂಟ್ಗೆ ಡೆಪಾಸಿಟ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂಡೀಗಢ, ಅ.9-ಚೀನಾ ಡ್ರೋಣ್ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್ಗಳು ಹಾರಾಟ ನಡೆಸಿವೆ.ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…
ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್ ಕ್ಲಿಕ್ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…
ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…