ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ.

ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ ಯೋಜನೆ ಜಾರಿಯಾಗಿ ಒಂದು ವಾರ ಕಳೆದರೂ
ಹಣ ಬಾರದ ಕಾರಣ ಮಹಿಳೆಯರು ಗೃಹಲಕ್ಷ್ಮಿಗಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಇಷ್ಟಕ್ಕೂ ಗೃಹಲಕ್ಷ್ಮೀಯ ಹಣ ಖಾತೆಗೆ ಬಾರದೇ ಇದ್ದ ಮಹಿಳೆಯರು ಏನು ಮಾಡ್ಬೇಕು? ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿಯೂ ನಿಮಗೆ ಹಣ ಬರುತ್ತಿಲ್ಲವಾದರೆ ಸರ್ಕಾರವೇ ನಿಮಗೊಂದು ಸಹಾಯವಾಣಿ ಸಂಖ್ಯೆಯನ್ನು ತಿಳಿಸಿದೆ.

ನಿಮ್ಮ ಪಡಿತರ ಚೀಟಿ, ಬ್ಯಾಂಕ್ ಅಕೌಂಟ್, ಆಧಾರ್ ನಂಬರ್ ಮಿಸ್ ಮ್ಯಾಚ್ ಆಗಿದ್ದಲಿ ಇದರ ಮಾಹಿತಿಯನ್ನು ನೀಡಲು ಇಲಾಖೆ ಸಹಾಯವಾಣಿಯ ನಂಬರ್ ವೊಂದನ್ನು ನೀಡಿದೆ. ಅರ್ಜಿಯ ಸ್ಟೇಟಸ್ ಪರಿಶೀಲಿಸಲು ಈ ಸಹಾಯವಾಣಿ ನೆರವಾಗಲಿದೆ. 8147500500 ಈ ನಂಬರ್ ಗೆ ನಿಮ್ಮ ಆಧಾರ್ ರಿಜಿಸ್ಟರ್ಡ್ ಮೊಬೈಲ್ ನಂಬರ್ ನಿಂದ ನಿಮ್ಮ ರೇಷನ್ ಕಾರ್ಡ್ ನಂಬರ್ ನ್ನು ಮೆಸೆಜ್ ಮಾಡಿ. ಹೀಗೆ ಮೆಸೆಜ್ ಮಾಡಿದ ತಕ್ಷಣ ನಿಮ್ಮ ಪಡಿತರ ಚೀಟಿ ಸಂಖ್ಯೆ ಆಧರಿಸಿ ನಿಮ್ಮ ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಸಂದೇಶ ಬರಲಿದೆ. ಆ ಮೂಲಕ ನೀವು ನಿಮಗೆ ಯಾವ ಕಾರಣಕ್ಕಾಗಿ ಹಣ ಬರುತ್ತಿಲ್ಲ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ.

ಅಲ್ಲದೆ ಅದನ್ನು ಸರಿಪಡಿಸಿಕೊಳ್ಳಬಹುದಾಗಿದೆ. ನಿಮ್ಮ ಎಲ್ಲಾ ಪ್ರಶ್ನೆಗೂ ಈ ನಂಬರ್ ಮೆಸೆಜ್ ನಲ್ಲಿ ಮಾಹಿತಿ ಸಿಗಲಿದೆ. ನಿಮ್ಮ ಅರ್ಜಿ ಅಸ್ವೀಕೃತವಾಗಿದ್ದರೇ, ಮತ್ತೊಮ್ಮೆ ಅರ್ಜಿ ಸಲ್ಲಿಸುವಂತೆಯೂ ಮಾಹಿತಿ ಬರಲಿದೆ. ಪಡಿತರ ಚೀಟಿಯಲ್ಲಿ ಮನೆ ಯಜಮಾನಿ ಹೆಸರನ್ನು ತಿದ್ದುಪಡಿ ಮಾಡಿಸಲು ಸಪ್ಟೆಂಬರ್ 1 ರಿಂದ 10 ರವರೆಗೆ ಅವಕಾಶ ನೀಡಲಾಗಿತ್ತು. ಈಗ ಅವಧಿಯನ್ನು ಸಪ್ಟೆಂಬರ್ 14 ರವರೆಗೆ ವಿಸ್ತರಿಸಲಾಗಿದೆ.ರಾಜ್ಯದಲ್ಲಿ ಒಟ್ಟು 1.28 ಫಲಾನುವಿಗಳಿದ್ದಾರೆ ಎಂದು ಅಂದಾಜಿಸಲಾಗಿದ್ದು, ಈ ಪೈಕಿ 1.11 ಕೋಟಿ ಮಹಿಳೆಯರು ಮಾತ್ರ ನೋಂದಣಿಯನ್ನು ಮಾಡಿಸಿ ಕೊಂಡಿದ್ದಾರೆ. ಹೀಗಾಗಿ ಸರ್ಕಾರ ಗೃಹಲಕ್ಷ್ಮೀ ನೋಂದಣಿಗೆ ಯಾವುದೇ ಕೊನೆಯ ದಿನಾಂಕ ನಿಗದಿಪಡಿಸಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…
ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.