ಆಧ್ಯಾತ್ಮ

ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

45

 

 

ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ
ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು.
ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ ಸೆಳೆದರು.


ತೆಪ್ಪೋತ್ಸವದ ಜತೆಗೆ ವಿಶಾಲಾಕ್ಷಿ ಸಮೇತ ಕಾಶಿ ವಿಶ್ವೇಶ್ವರ ಸ್ವಾಮಿಯ ಕಲ್ಯಾಣೋತ್ಸವವನ್ನು ಸಹಾ ಏರ್ಪಡಿಸಿದ್ದು, ಜನರನ್ನು ಭಕ್ತಿಸಾಗರದಲ್ಲಿ ಮುಳುಗಿಸಿತ್ತು.
ಚಳಿಯ ನಡುವೆಯೂ ಅಂತರ0ಗೆಯ ಕ್ಷೇತ್ರವನ್ನು ಒಂದು ಸಾವಿರ ಕೆಜಿ ಎಣ್ಣೆ ಹಾಕಿ ಲಕ್ಷಾಂತರ ಹಣತೆಗಳಿಂದ ಬೆಳಗಿಸಿದ್ದು, ವಿಶೇಷ ಹೂವಿನ ಅಲಂಕಾರವನ್ನು ನಡೆಸಿದ್ದು, ಕಲ್ಲು ಬಸವನ ಬಾಯಿಂದ ಸದಾ ನೀರು ಜಿನುಗುವ ಅಂತರ0ಗೆ ದೇವಾಲಯದ ಕಲ್ಯಾಣಿಯಲ್ಲಿ ತೆಪ್ಪೋತ್ಸವವನ್ನು ನಡೆಸಿದ್ದು ನೆರೆದಿದ್ದ ಸಹಸ್ರಾರು ಭಕ್ತರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಯಿತು.

 

ವಿಶಿಷ್ಟ ರೀತಿಯಲ್ಲಿ
ಶಿವನಿಗೆ ಅಲಂಕಾರ
ಪ್ರತಿ ವರ್ಷವೂ ಕಾಶಿ ವಿಶ್ವೇಶ್ವರಸ್ವಾಮಿಗೆ ಹೂವಿನ ಅಲಂಕಾರ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಇಡೀ ಗರ್ಭಗುಡಿಯನ್ನು ಕೈಲಾಸ,ಹಿಮ ಪರ್ವತದಂತೆ ಅಲಂಕರಿಸಲಾಗಿದ್ದು, ಗೌರಿಶಂಕರ ಶಿಖರದಲ್ಲಿ ಶಿವನು ಕುಳಿತಂತೆ ಮಾಡಿದ್ದು, ಜನತೆ ಶ್ರದ್ದಾಭಕ್ತಿಗಳಿಂದ ನಮಿಸಿ ಸಂಭ್ರಮಿಸಿದರು.
ಶಿವ ಲಕ್ಷ ದೀಪೋತ್ಸವ, ತೆಪ್ಪೋತ್ಸವಕ್ಕೆ ನಾದಸ್ವರ ಮತ್ತು ಸ್ಯಾಕ್ಯೋಫೋನ್ ವಾದನದ ಹಿಮ್ಮೇಳ ಗಮನ ಸೆಳೆಯಿತು.
ಮಧ್ಯರಾತ್ರಿ 1 ಗಂಟೆಯವರೆಗೂ ನಡೆದ ನಾದಸ್ವರ ಮತ್ತಿತರ ಕಾರ್ಯಕ್ರಮಗಳು ಭಕ್ತರನ್ನು ರಂಜಿಸಿದ್ದು, ಇಡೀ ಅಂತರಗ0ಗೆ ಹಣತೆಗಳಿಂದ ಕಂಗೊಳಿಸುತ್ತಿತ್ತು.
ಸ0ಜೆ ಆರು ಗಂಟೆಯಿ0ದಲೂ ಅಂತರ0ಗೆ ಬೆಟ್ಟದತ್ತ ತೆರಳಿದ ಭಕ್ತರ ಸಮೂಹವನ್ನು ನಿಯಂತ್ರಿಸುವಲ್ಲಿ ಪೊಲೀಸರು ಸಹಕರಿಸಿದರೆ, ಶಿವ ಲಕ್ಷ ದೀಪೋತ್ಸವದಲ್ಲಿ ಪಾಲ್ಗೊಂಡ ಎಲ್ಲಾ ಭಕ್ತಾಗಳಿಗೂ ಪ್ರಸಾದ ವಿನಿಯೋಗಿಸಲಾಯಿತು.
ಇಡೀ ರಾತ್ರಿ ಅಂತರಗ0ಗೆ ಬೆಟ್ಟದ ತಪ್ಪಲಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿ, ಜಾತ್ರೆಯ ಕಳೆ ಕಂಡು ಬಂತು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…

  • ಸರ್ಕಾರದ ಯೋಜನೆಗಳು

    ಬಿ.ಪಿ.ಎಲ್. ಕುಟುಂಬಗಳಿಗೆ ಸರ್ಕಾರದಿಂದ “ಇಂದಿರಾ ಬಟ್ಟೆ ಭಾಗ್ಯ”..! ತಿಳಿಯಲು ಈ ಓದಿ..

    ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್‌ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್‌, ಕ್ಲಿನಿಕ್‌ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.

  • Health

    ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುವ ರುಚಿಕರ ಹಣ್ಣುಗಳು.

    ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ  ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…

  • ಆಧ್ಯಾತ್ಮ

    ಮಾರ್ಚ್ 4 ಮಹಾಶಿವರಾತ್ರಿ..ಇಂದು ತಪ್ಪದೆ ಈ ಕೆಲಸ ಮಾಡಿ…

    ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…

  • ಮನರಂಜನೆ

    ಬಿಗ್ ಬಾಸ್’ನಿಂದ ಮಧ್ಯರಾತ್ರಿ ಶಾಕಿಂಗ್ ಎಲಿಮನೇಷನ್..!ರಾತ್ರೋರಾತ್ರಿ ಮನೆಯಿಂದ ಹೊರಹೋದವರು ಯಾರು?ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.