ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ಮುಂಬೈನಲ್ಲಿನ ಚೀನಾ ದೂತವಾಸ ಕಚೇರಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಲಿಯು ಯೂಫಾ ಅವರು ಈ ರೀತಿಯ ಎಚ್ಚರಿಕೆ ನೀಡಿದ್ದು. ಭಾರತಿಯ ಸೈನಿಕರು ಅತಿಕ್ರಮವಾಗಿ ಪ್ರವೇಶ ಮಾಡಿದ್ದು, ಚೀನೀ ಯೋಧರು ಇದನ್ನು ಸಮರ್ಥವಾಗಿ ನಿಭಾಯಿಸಲು ಸಿದ್ದರಿದ್ದಾರೆ.
ಹೀಗಾಗಿ ಭಾರತವೇ ಸ್ವಯಂ ಪ್ರೇರಿತವಾಗಿ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು.ಅಂತರಾಷ್ಟ್ರೀಯ ಕಾನೂನನ್ನು ನಾನು ಅರ್ಥ ಮಾಡಿಕೊಂಡಂತೆ, ಬೇರೆ ದೇಶದ ಭೂಭಾಗವನ್ನು ಯಾವ ದೇಶದವರೆ ಪ್ರವೇಶಿಸಿದರೂ ಮೂರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.
ಅಂತರಾಷ್ಟ್ರೀಯ ಕಾನೂನಿನ ಪ್ರಕಾರ, ಸಮವಸ್ತ್ರದಲ್ಲಿರುವ ಒಂದು ದೇಶದ ಯೋಧರು ಮತ್ತೊಂದು ದೇಶದ ಗಡಿಯೊಳಗೆ ಕಾಲಿಟ್ಟರೇ ಸಹಜವಾಗಿಯೇ ಅವರು ಶತ್ರುಗಳಾಗಿಬಿಡುತ್ತಾರೆ. ಅಂತಹ ಸಂದರ್ಭದಲ್ಲಿ ಅವರು ಮೂರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಗಡಿಯೊಳಕ್ಕೆ ಕಾಲಿಟ್ಟ ಯೋಧರು ಸ್ವಯಂಪ್ರೇರಿತವಾಗಿ ವಾಪಸ್ ಹೋಗಬೇಕು. ಇಲ್ಲದಿದ್ದರೆ, ಅವರನ್ನು ಬಂಧಿಸಬಹುದು. ಒಂದು ವೇಳೆ ಗಡಿ ವಿವಾದ ತೀವ್ರಗೊಂಡಿದ್ದೇ ಆದರೆ, ಅವರನ್ನು ಹತ್ಯೆ ಮಾಡಲೂ ಬಹುದು ಎಂದು ತಿಳಿಸಿದ್ದಾರೆ. ಲಿಯು ಯೂಫಾ ಅವರು ಚೀನಾ ಸರ್ಕಾರಿ ಸ್ವಾಮ್ಯದ ಆಂಗ್ಲ ವಾಹಿನಿ ಸಿಸಿಟೀವಿ ತಿಳಿಸಿದ್ದಾರೆ.
ಡೋಕ್ಲಾಮ್ ಪ್ರದೇಶ ತನಗೆ ಸೇರಿದ್ದು ಎಂದು ಚೀನಾ ವಾದಿಸುತ್ತಿದೆ. ಹೀಗಾಗಿ ತನ್ನ ಗಡಿಯೊಳಕ್ಕೆ ಭಾರತೀಯ ಯೋಧರು ಕಾಲಿಟ್ಟಿದ್ದಾರೆ ಎಂಬ ಅಭಿಪ್ರಾಯ ಆ ದೇಶದವರಲ್ಲಿದೆ. ಅದನ್ನೇ ಆಧಾರವಾಗಿಟ್ಟುಕೊಂಡು ಚೀನಾದ ಮಾಜಿ ರಾಯಭಾರಿ ಈ ರೀತಿ ಹೇಳಿದ್ದಾರೆ.
ಸಿಕ್ಕಿಂನ ಡೋಕ್ಲಾಮ್ ಪ್ರದೇಶದಲ್ಲಿರುವ ವಿವಾದಿತ ಪ್ರದೇಶ ತ್ರಿರಾಷ್ಟ್ರ (ಭಾರತ-ಚೀನಾ-ಭೂತಾನ್)ಕ್ಕೆ ಸಂಬಂಧಿಸಿದ್ದು, ಆದರೆ, ಚೀನಾ ತ್ರಿರಾಷ್ಟ್ರ ಗಡಿ ಸಂಧಿ ಸ್ಥಳದ ಯಾಥಾಸ್ಥಿತಿಯನ್ನು ಮಾರ್ಪಾಡು ಮಾಡಲು ಯತ್ನಿಸುತ್ತಿದೆ. ಆದರೆ ಭಾರತದ ಪ್ರಕಾರ, ಡೋಕ್ಲಾಮ್ ಪ್ರದೇಶ ಮೂರು ದೇಶಗಳ ಸಂಗಮದಲ್ಲಿ ಸೇರಲಿದ್ದು ಆ ಕಾರಣದಿಂದ ಅದರ ಹಕ್ಕು ಭಾರತದ ಮಿತ್ರ ದೇಶ ಭೂತಾನ್’ದ್ದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….