ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.
ಅವಿವಾಹಿತ ಹೆಣ್ಣು ಮಕ್ಕಳು ತಮಗೆ ಭೀಮನಂತೆ ಇರುವ ಗಂಡ ಸಿಗಲೆಂದು ಶಿವನನ್ನು ಪೂಜಿಸುವ ಹಬ್ಬವೇ ‘ಭೀಮನ ಅಮಾವಾಸ್ಯೆ’.
ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲವಾದರೂ, ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುತ್ತಾರೆ.
ಇದಕ್ಕೆ ಪತಿ ಸಂಜೀವಿನಿ ವ್ರತ ಎಂದೂ ಕೂಡ ಕರೆಯುತ್ತಾರೆ. ಭೀಮನ ಅಮಾವಾಸ್ಯೆ ಎಂದು ಎಲ್ಲೆಡೆ ಜನಪ್ರಿಯವಾಗಿದೆ.
ಒಮ್ಮೆ ವ್ರತ ಕೈಗೊಂಡರೆ ಐದು, ಒಂಭತ್ತು ಅಥವಾ ಹದಿನಾರು ವರ್ಷ ಸಂಪೂರ್ಣಗೊಳಿಸಿ ಉದ್ಯಾಪನೆ ಮಾಡಿ ಎಲ್ಲರಿಗೂ ಸಿಹಿಯೂಟ ಹಾಕಿಸಬೇಕು ಎಂದು ಹಿಂದೂ ಪುರಾಣಗಳು ಹೇಳುತ್ತವೆ.
ಆಷಾಢದಲ್ಲಿ ಗಂಡನ ಸಂಗ ತೊರೆದು ತವರಿನ ಗೂಡು ಸೇರಿಕೊಂಡ ಹೆಂಗಳೆಯರು ಗಂಡನ ಪಾದಕ್ಕೆರಗಿ ಆಶೀರ್ವಾದ ಪಡೆಯುವುದು ವಾಡಿಕೆ.
*ಭೀಮನ ಅಮಾವಾಸ್ಯೆ ಹಿನ್ನಲೆಯು ಒಂದು ಪುರಾಣ ಕತೆ ಅವಲಂಬಿಸಿದೆ.
ಆಸೆ ಬುರುಕ ಬ್ರಾಹ್ಮಣನೊಬ್ಬ ರಾಜಕುಮಾರನ ಶವದೊಂದಿಗೆ ತನ್ನ ಮಗಳ ಮದುವೆಯನ್ನು ಮಾಡಿ ಬಿಡುತ್ತಾನೆ. ಸುರಿಯುತ್ತಿದ್ದ ಮಳೆಯಲ್ಲಿ ಶವವನ್ನೂ ಹಾಗೂ ವಧುವನ್ನೂ ರಾಜ ಪರಿವರದವರೂ ನದಿ ತೀರದಲ್ಲಿ ಬಿಟ್ಟು ಹೋಗುತ್ತಾರೆ. ಶವದ ಮುಂದೆ ಕುಳಿತು ರೋಧಿಸುತ್ತಿದ್ದ ಆ ವಧು, ಮರಳಿನಲ್ಲಿ ಶಿವಲಿಂಗ ಮಾಡಿ ಪೂಜಿಸುತ್ತಾಳೆ. ಅವಳ ಭಕ್ತಿಗೆ ಮೆಚ್ಚಿದ ಶಿವಪಾರ್ವತಿಯರು ಪ್ರತ್ಯಕ್ಷರಾಗಿ ರಾಜಕುಮಾರನಿಗೆ ಜೀವದಾನ ಮಾಡುತ್ತಾರೆ.
ಅಮವಾಸ್ಯೆ ದಿನ ತನ್ನ ಪತಿಯನ್ನು ಬದುಕಿಸಿಕೊಳ್ಳಲು ನಡೆಸಿದ ಪೂಜೆಯೇ ಜ್ಯೋತಿರ್ಭಿಮೇಶ್ವರ ವ್ರತ ಎಂಬ ಐತಿಹ್ಯವಿದೆ.
ಭೀಮನ ಅಮವಾಸ್ಯೆ ವ್ರತಾಚಾರಣೆಯ ಹಿನ್ನೆಲೆಯ ಬಗ್ಗೆ ಇನ್ನು ಒಂದು ಐತಿಹ್ಯ ಇದೆ.
ಕುಂಡಿನಿ ಪಟ್ಟಣದಲ್ಲಿ ಪತಿಭಕ್ತಳೂ, ಶಾಸ್ತ್ರಜ್ಞಳೂ, ನಿರ್ಮಲ ಮನದವಳೂ ಆದ ಚಾರುಮತಿ ಎಂಬ ಸಾಧ್ವಿ ಇರುತ್ತಾಳೆ. ಈ ಬ್ರಾಹ್ಮಣ ಸಾಧ್ವಿಗೆ ಮಹಾಲಕ್ಷ್ಮಿ ಕನಸಿನಲ್ಲಿ ಕಾಣಿಸಿಕೊಂಡು ತನ್ನನ್ನು ನಿರ್ದಿಷ್ಟ ಪ್ರಕಾರವಾಗಿ ಪೂಜಿಸಲು ತಿಳಿಸುತ್ತಾಳೆ. ಅದರಂತೆ ಚಾರುಮತಿ ಮಂಗಳಸ್ನಾನ ಮಾಡಿ, ಅಕ್ಕಿಯಿಂದ ಪರಿವೃತವಾದ ಕಲಶದಲ್ಲಿ ವರಲಕ್ಷ್ಮಿಯನ್ನು ಆವಾಹನೆ ಮಾಡಿ, ಕಲ್ಪೋಕ್ತ ಪ್ರಕಾರ ಸಂಧ್ಯಾಕಾಲದಲ್ಲಿ ಅರ್ಚಿಸಿ, ಬಲಗೈಗೆ ದಾರ ಕಟ್ಟಿಕೊಂಡು ತುಪ್ಪದಿಂದ ಮಾಡಿದ ಭಕ್ಷ್ಯಗಳನ್ನು ಬ್ರಾಹ್ಮಣರಿಗೆ ನಿವೇದಿಸಿ, ಸುಹಾಸಿನಿಯರಿಗೆ ದಕ್ಷಿಣೆ ಸಹಿತ ತಾಂಬೂಲ ನೀಡಿ ವ್ರತವಾಚರಿಸುತ್ತಾಳೆ.
ಇದರ ಫಲವಾಗಿ ಅವಳು ಸಕಲ ಸೌಭಾಗ್ಯ ಪಡೆಯುತ್ತಾಳೆ.
ಈ ಪ್ರಕಾರವಾಗಿ ಭೀಮನ ಅಮಾವಾಸ್ಯೆಯ ದಿನ ಹೆಣ್ಣು ಮಕ್ಕಳು ಮತ್ತು ಸುಮಂಗಲಿಯರು ಮಂಗಳಸ್ನಾನ ಮಾಡಿ, ಮಂಟಪ ನಿರ್ಮಿಸಿ, ಅದರಲ್ಲಿ ಧಾನ್ಯರಾಶಿ ಮಾಡಿ, ಅದರ ಮೇಲೆ ದೀಪವನ್ನಿಟ್ಟು, ಗೋಧಿಹಿಟ್ಟಿನಿಂದ ಮಾಡಿದ ಭಕ್ಷ್ಯವನ್ನು ನೈವೇದ್ಯ ಮಾಡಿ ಈಶ್ವರನನ್ನು ಆರಾಧಿಸುತ್ತಾರೆ.
ಹೊಸಿಲ ಮೇಲೆ ಭಂಡಾರ ಇಟ್ಟು ಸೋದರರಿಂದ ಒಡೆಸುವ ಪದ್ಧತಿಯೂ ಸಂಪ್ರದಾಯಸ್ಥ ಬ್ರಾಹ್ಮಣರ ಮನೆಯಲ್ಲಿ ಇದೆ.
*ಪೂಜಾ ವಿಧಾನ:*
ಈ ವ್ರತವನ್ನು ಆಷಾಢ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆ ದಿನ ಆಚರಿಸಬೇಕು. ಹೆಣ್ಣು ಮಕ್ಕಳು ಮದುವೆಯಾದ ನಂತರ ಒಂಭತ್ತು ವರ್ಷ ಈ ವ್ರತ ಮಾಡುವ ಪದ್ಧತಿ ಇದೆ. ಒಂದು ತಟ್ಟೆಯಲ್ಲಿ ಧಾನ್ಯ ರಾಶಿ ಹಾಕಿ , ಅದರ ಮೇಲೆ 2 ದೀಪದ ಕಂಭ ಇಡಬೇಕು. ತುಪ್ಪ ಹಾಕಿ ದೀಪ ಹಚ್ಚಬೇಕು.
ಈ ದೀಪಸ್ತಂಭದಲ್ಲಿ ಈಶ್ವರ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಮಾಡಬೇಕು . ಸಾಮನ್ಯವಾಗಿ ಉಪಯೋಗಿಸುವ ಪೂಜಾ ಸಾಮಗ್ರಿಗಳ ಜೊತೆಗೆ, 9 ಗಂಟಿನ ಗೌರಿ ದಾರ ಇಟ್ಟು ಪೂಜೆ ಮಾಡಬೇಕು, ಪೂಜೆ ನಂತರ ಕೈಗೆ ಕಟ್ಟಿಕೊಳ್ಳಬೇಕು. ಮೊದಲು ಗಣಪತಿ ಪೂಜೆ ಮಾಡಿ ನಂತರ ಭೀಮೆಶ್ವರನ ಪೂಜೆ ಮಾಡಬೇಕು .ಜೊತಗೆ ಗಣೇಶ ಅಷ್ಟೋತ್ತರ , ಶಿವ ಅಷ್ಟೋತ್ತರ ಗಳನ್ನು ಹೇಳಿಕೊಂಡು ಪೂಜೆ ಮಾಡಬೇಕು.
ಹೀಗೆ ಪ್ರತಿ ವರ್ಷ ಪೂಜೆ ಮಾಡುವುದರಿಂದ ಮನೆಯಲ್ಲಿ ಸುಖ, ಸಂತೋಷ ನೆಮ್ಮದಿ ದೊರೆತು ಆಯುಷ್ಯ, ಆರೋಗ್ಯ ವೃದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಹೆಣ್ಣು ಮಕ್ಕಳು ಪ್ರತಿ ವರ್ಷ ಭೀಮನ ಅಮಾವಾಸ್ಯೆಯಲ್ಲಿ ವ್ರತಾಚರಣೆ ಮಾಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್…
ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…
ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್‌ಏಲಕ್ಕಿ ಪುಡಿ –…
ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…