ಆಧ್ಯಾತ್ಮ

ಹಿಂದೂಗಳಿಗೆ ನಾಗರ ಪಂಚಮಿ ಹಬ್ಬ ಏಕೆ ತುಂಬಾ ಮಹತ್ವ ಗೊತ್ತಾ?ರೋಚಕವಾಗಿದೆ ಈ ಹಬ್ಬದ ವೈಶಿಷ್ಟ್ಯಗಳು…

2730

ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.


ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿ ಹಬ್ಬಗಳ ಸಾಲು ಆರಂಭವಾಗುವುದಕ್ಕೆ ನಾಂದಿ ಹಾಡುತ್ತದೆ. ನಾಗರ ಪಂಚಮಿಯ ನಂತರ ರಕ್ಷಾಬಂಧನ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಹೀಗೆ ಹಬ್ಬಗಳು ಒಂದರ ಹಿಂದೊಂದರಂತೆ ಆರಂಭವಾಗುತ್ತವೆ.

ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನ ಆಚರಿಸಲ್ಪಡುವ ಈ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಇಡೀ ಭಾರತದಾದ್ಯಂತ ಈ ಹಬ್ಬವನ್ನು ಶ್ರದ್ಧಾ ಮತ್ತು ಭಕ್ತಿಗಳ ಜೊತೆಯಲ್ಲಿ ಆಚರಿಸಲಾಗುತ್ತದೆ.

ಈ ದಿನ ಹಾವಿಗೆ ಹಾಲೆರೆದು, ಪೂಜಿಸಿ, ಸಕಲ ಇಷ್ಟಾರ್ಥಗಳೂ ಪ್ರಾಪ್ತಿಯಾಗುವಂತೆ ನಾಗದೇವನನ್ನು ಬೇಡುವುದು ವಾಡಿಕೆ. ಈ ದಿನ ಶೇಷ ನಾಗ ಮತ್ತು ಶ್ರೀ ವಿಷ್ಣುವನ್ನು ಭಕ್ತಿಯಿಂದ ಸ್ತುತಿಸಲಾಗುತ್ತದೆ.
ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇದ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ. ಹಿಂದೂಗಳು ನಾಗರ ಪಂಚಮಿಯನ್ನು ಏಕೆ ಆಚರಿಸುತ್ತಾರೆ ಮತ್ತು ಅದರ ಹಿಂದಿನ ಕಾರಣಗಳೇನು?

ಈ ಹಬ್ಬವನ್ನು ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಆಚರಿಸಲಾಗುತ್ತದೆ. ಇದಕ್ಕೆ ಕಾರಣ ಕೂಡ ಇದೆ. ಈ ಸಮಯದಲ್ಲಿ ಹಾವುಗಳು ಜನರಿಗೆ ಭಯಭೀತಿಯನ್ನುಂಟು ಮಾಡಿರುತ್ತವೆ. ಮಳೆಯ ಕಾರಣದಿಂದ ಬಿಲಗಳಲ್ಲಿ ನೀರು ತುಂಬಿಕೊಂಡಾಗ ಹೊರ ಬರುವ ಹಾವುಗಳು ಜನರಿಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಈ ಸಮಯದಲ್ಲಿ ಹಾವುಗಳಿಗೆ ಹಾಲೆರೆದು ಪೂಜಿಸಲಾಗುತ್ತದೆ.

ನಾಗರ ಪಂಚಮಿಯ ಆಚರಣೆಯ ಹಿಂದಿನ ಕಾರಣ
ಪುರಾಣ ಕತೆಯೊಂದರ ಪ್ರಕಾರ ಹಾವು ಕಚ್ಚಿ ಮಡಿದ ತನ್ನ ಸಹೋದರನನ್ನು ಸಹೋದರಿಯೊಬ್ಬಳು ಬದುಕಿಸಿಕೊಂಡ ದಿನ ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಾಗಿತ್ತು. ಹಾವನ್ನು ಭಕ್ತಿಭಾವದಿಂದ ಪೂಜಿಸಿ ತನ್ನ ಅಣ್ಣನನ್ನು ತಂಗಿ ಬದುಕಿಸಿಕೊಂಡ ದಿನವಾಗಿದ್ದರಿಂದ ಈ ದಿನವನ್ನು ಭ್ರಾತೃತ್ವದ ಸಂಕೇತವಾಗಿಯೂ ಕೆಲವೆಡೆ ಆಚರಿಸಲಾಗುತ್ತದೆ.

ನಾಗರಪಂಚಮಿಗೂ ಭಗವಾನ್ ಶ್ರೀ ಕೃಷ್ಣನಿಗೂ ಇದೆ ಸಂಭಂದ

ನಾಗರ ಪಂಚಮಿಗೂ ಭಗವಾನ್ ಶ್ರೀಕೃಷ್ಣನಿಗೂ ಸಂಬಂಧವಿದೆ. ಪುರಾಣ ಕತೆಯೊಂದರ ಕೃಷ್ಣನು ಯಮುನಾ ನದಿಯ ತೀರದಲ್ಲಿ ಆಡುತ್ತಿದ್ದನು. ಆಗ ಅವನು ಆಟವಾಡುತ್ತಿದ್ದ ವಸ್ತು ನದಿ ದಂಡೆಯಲ್ಲಿದ್ದ ಮರದ ಕಾಂಡದಲ್ಲಿ ಸಿಕ್ಕಿ ಹಾಕಿಕೊಂಡಿತು. ಆ ಚೆಂಡನ್ನು ಎತ್ತಿಕೊಳ್ಳಲು ಹೋದಾಗ ಕೃಷ್ಣನು ಜಾರಿ ನದಿಯಲ್ಲಿ ಬಿದ್ದನು.
ಕೃಷ್ಣ ನದಿಗೆ ಬಿದ್ದ ಸಂದರ್ಭದಲ್ಲಿ ಕಾಳಿಯಾ ಎಂಬ ಹಾವೊಂದು ಕೃಷ್ಣನ ಮೇಲೆ ಆಕ್ರಮಣ ಮಾಡುತ್ತದೆ. ಆದರೆ ದೈವತ್ವದ ಸ್ವರೂಪವಾಗಿದ್ದ ಶ್ರೀಕೃಷ್ಣ ಕಾಳಿಯಾನನ್ನು ಮಣಿಸುತ್ತಾನೆ.

ಸ್ವಲ್ಪ ಸಮಯದ ನಂತರ ಆ ಹಾವಿಗೆ ಕೃಷ್ಣನು ಸಾಮಾನ್ಯ ಬಾಲಕನಲ್ಲ ಎಂದು ಅರಿವಾಗುತ್ತದೆ. ಆಗ ಆ ಹಾವು ಕೃಷ್ಣನನ್ನು ತನ್ನನ್ನು ಕೊಲ್ಲಬೇಡವೆಂದು ಅಂಗಲಾಚುತ್ತದೆ.  ಆಗ ಜನರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ವಚನ ಪಡೆದು, ಶ್ರೀಕೃಷ್ಣ ಆ ಹಾವನ್ನು ಬಿಟ್ಟು ಬಿಡುತ್ತಾನೆ. ಹೀಗೆ ಕೃಷ್ಣನು ಕಾಳಿಯಾ ಹಾವನ್ನು ಸೋಲಿಸಿದ ದಿನ ಶ್ರಾವಣ ಶುಕ್ಲ ಪಂಚಮಿಯಾಗಿತ್ತು. ಭಯಂಕರ ಸರ್ಪವನ್ನು ಗೆದ್ದ ಸಂತೋಷವನ್ನು ನೆನಪಿಸಿಕೊಳ್ಳುವ ಸಲುವಾಗಿ ನಾಗರ ಪಂಚಮಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ.

 

ನಮ್ಮ ಕರ್ನಾಟಕದಲ್ಲಿ ನಾಗರ ಪಂಚಮಿಯನ್ನು ಹೇಗೆ ಆಚರಿಸುತ್ತಾರೆ?

ಹಿಂದೂಗಳು ನಾಗ ಪಂಚಮಿಯಂದು ಚಂದನ ಅಥವಾ ಅರಿಶಿಣದಿಂದ ಮಣೆ ಮೇಲೆ ನವನಾಗಗಳ ಆಕೃತಿ ಬರೆದು ಪೂಜೆ ಮಾಡುವ ಪದ್ಧತಿ ಇದೆ. ಇಲ್ಲವೆಂದರೆ ನಾಗರ ಕಲ್ಲುಗಳಿಗೆ ಸಹ ಪೂಜೆ ಮಾಡುತ್ತಾರೆ. ಈ ದಿನ, ನಾಗದೇವನಿಗೆ ಅರಳು ಮತ್ತು ಹಾಲನ್ನು ನೈವೇದ್ಯವೆಂದು ಅರ್ಪಿಸಬೇಕು.

ಹಿಂದೂ ನಂಬಿಕೆಗಳ ಪ್ರಕಾರ ,ಈ ದಿನ ಜನರು ಭೂಮಿಯನ್ನು ಅಗೆಯಲು ಹೋಗುವುದಿಲ್ಲ. ಅದರ ಬದಲಿಗೆ ನಾಗರ ಕಲ್ಲು, ಮಣ್ಣಿನ ನಾಗ ಅಥವಾ ಚಿತ್ರ ಪಟದ ಮುಂದೆ ಉರಿದ ಭತ್ತ, ಧೂರ್ವವನ್ನು ಇಟ್ಟು ಪೂಜಿಸಲಾಗುತ್ತದೆ. ಈ ಹಬ್ಬವನ್ನು ಕರ್ನಾಟಕ ಸೇರಿದಂತೆ  ಭಾರತದ ಎಲ್ಲಾ ಭಾಗಗಳಲ್ಲಿ ಆಚರಿಸಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ