ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ನಾವು ಹಂಚಿಕೊಳ್ಳುವ ಕೆಲವೊಂದು ಫೋಟೋಗಳು ಅಥವಾ ವಿಡಿಯೋಗಳು ತುಂಬಾ ಸಂಚಲನವನ್ನೇ ಸೃಷ್ಟಿ ಮಾಡಿಬಿಡುತ್ತವೆ.
ಹೌದು, ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ಆ್ಯಂಡಿ ಎಂಬ ಟ್ವಿಟರ್ ಖಾತೆದಾರ ಈ ಫೋಟೋವನ್ನು ಆಪ್ಲೋಡ್ ಮಾಡಿದ್ದು, ಐ ಲವ್ ಮೈ ಗರ್ಲ್ ಫ್ರೆಂಡ್ ಈವನ್ ಶೀ ಇಸ್ ಜೆಮಿನಿ ಎಂದು ಟ್ವೀಟ್ ಮಾಡಿದ್ದ. ಆದರೆ ಮೇಲ್ನೋಟಕ್ಕೆ ಈ ಫೋಟೋ ಜೋಡಿಯ ಪ್ರೀತಿಯನ್ನು ತೋರಿಸುತ್ತದೆಯಾದರೂ, ಇದೇ ಫೋಟವನ್ನು ಸ್ವಲ್ಪ ಗಮನವಿಟ್ಟು ನೋಡಿದರೆ ಫೋಟೋ ಹಿಂದಿನ ಭಯಾನಕತೆ ಬಯಲಾಗುತ್ತದೆ.
ಈ ಫೋಟೋ ನೋಡಿದ ಲಕ್ಷಾಂತರ ಟ್ವೀಟಿಗರು ಇದಕ್ಕೆ ರೀ-ಟ್ವೀಟ್ ಮಾಡಿದ್ದು, ಇದು ಹೇಗೆ ಸಾಧ್ಯ…ಇನ್ನು ಕೆಲವರು ‘ಈಕೆ ಅತ್ಯಂತ ಭಯಾನಕವಾಗಿದ್ದಾಳೆ’ ಎಂದಿದ್ದಾರೆ. ಮತ್ತೆ ಕೆಲವರು ಆಕೆ ಮನುಷ್ಯಳೋ ಅಥವಾ ಭೂತವೋ ಎಂಬ ಉದ್ಗಾರಗಳೊಂದಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಮತ್ತೆ ಕೆಲವರು ಇದನ್ನು ವ್ಯಂಗ್ಯ ಮಾಡಿದ್ದು, ಇದು ಫೋಟೋಶಾಪ್ ಪವಾಡ ಎಂದು ಟೀಕಿಸಿದ್ದಾರೆ.
ಇಷ್ಟಕ್ಕೂ ಈ ಫೋಟೋ ಹಿಂದಿರುವ ಅಸಲಿಯತ್ತೇನು?
ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ನೋಡುಗರು ಆ ಫೋಟೋದಲ್ಲಿ ಕಂಡ ನಂಬಲಸಾಧ್ಯವಾದ ಸತ್ಯ!. ಈ ಸೆಲ್ಫೀಯನ್ನು ಮೇಲ್ನೋಟಕ್ಕೆ ನೋಡಿದರೆ ಇಬ್ಬರ ನಡುವಿನ ಪ್ರೀತಿ ಎದ್ದು ಕಾಣುತ್ತದೆ. ಆದರೆ ಸೂಕ್ಷ್ಮವಾಗಿ ಗಮನಿಸಿದಾಗಲೇ ಈ ಸುಂದರ ಜೋಡಿಯ ಹಿಂದಿನ ಭಯಾನಕ ರೂಪ ಕಾಣುತ್ತದೆ. ಯಾಕೆಂದರೆ ಫೋಟೋಗೆ ಫೋಸ್ ಕೊಡುವ ಯುವತಿ ಏಕಕಾಲದಲ್ಲಿ ಎರಡೆರಡು ದಿಕ್ಕಿಗೆ ಮುಖ ತೋರಿಸಿದ್ದಾಳೆ. ಸೆಲ್ಫಿ ವೇಳೆ ಯುವತಿ ಯಾವುದಾದರೂ ಒಂದೇ ದಿಕ್ಕಿಗೆ ನೋಡಬೇಕಿತ್ತು. ಆದರೆ ಇವರ ಹಿಂದಿದ್ದ ಕನ್ನಡಿಯಲ್ಲಿ ಯುವತಿ ಅದೇ ಕ್ಷಣದಲ್ಲಿ ಹಿಂಬದಿಗೆ ನೋಡುವುದೂ ಕಾಣುತ್ತದೆ. ಓರ್ವ ವ್ಯಕ್ತಿಗೆ ಎರಡು ಮುಖಗಳಿರಲು ಸಾಧ್ಯವಿಲ್ಲ. ಇನ್ನು ಫೋಟೋ ನೋಡಿದರೆ ಆಕೆ ಸೆಲ್ಫೀಗೆ ಫೋಸ್ ನೀಡಿರುವುದು ಸ್ಪಷ್ಟವಾಗುತ್ತದೆ. ಆದರೆ ಆದೇ ಸಂದರ್ಭದಲ್ಲಿ ಆ ಕನ್ನಡಿಯಲ್ಲಿ ಕಾಣುತ್ತಿರುವುದೇನು ಎಂಬ ಪ್ರಶ್ನೆಯೂ ಮೂಡುತ್ತದೆ.
ಈ ಫೋಟೋ ನಿಜಕ್ಕೂ ವೈರಲ್ ಆಗಿದೆಯಾದರೂ ಇದನ್ನು ಅಪ್ಲೋಡ್ ಮಾಡಿರುವ ಆ್ಯಂಡಿ ಎಂಬ ಟ್ವಿಟರ್ ಖಾತೆದಾರನದ್ದೇ ಅಲ್ಲ… ಈ ಫೋಟೋ ಬ್ರೆಜಿಲ್ ಮೂಲದ ಜೆಫರ್ಸನ್ ನೆಗ್ರಾವ್ ಎಂಬಾತನದ್ದು ಎಂಬುದು ಟ್ವಿಟರ್ ಮೂಲಕ ಬಯಲಾಗಿದೆ. ಈತನ ಗರ್ಲ್ ಫ್ರೆಂಡ್ ಆಡ್ರಿಯಾನೆ ಅಲ್ಫೈಯಾಳೊಂದಿಗೆ ಸೆಲ್ಫಿತೆಗೆದು ಅದನ್ನು ಟ್ವೀಟ್ ಮಾಡಿದ್ದ. ಇದೇ ಫೋಟೋವನ್ನು ಆ್ಯಂಡಿ ಎಂಬ ಖಾತೆದಾರ ತನ್ನ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಇನ್ನು ಈ ಫೋಟೋದ ಮೂಲಕ ಆ್ಯಂಡಿ ಖಾತೆದಾರ ಫೇಮಸ್ ಆದನಾದರೂ ಈ ಟ್ವೀಟ್ ನಿಂದಾಗಿ ವ್ಯಾಪಕ ಟೀಕೆಗಳನ್ನು ಕೂಡ ಏದುರಿಸಿದ್ದಾನೆ. ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.
ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.