ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಭಾರತದ ದಕ್ಷಿಣ ಭಾಗದಲ್ಲಿ ನೆಲೆಸಿರುವವರಿಗೆ ವರಮಹಾಲಕ್ಷ್ಮಿ ವೃತವು ಹೆಚ್ಚು ಮಹತ್ವಪೂರ್ಣ ಮತ್ತು ವಿಶೇಷ ಎಂದೆನಿಸಿದೆ. ಈ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ.
ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಲಕ್ಷ್ಮಿ ಕೂರಿಸುವುದಕ್ಕೆ ಬೇಕಾದ ಎಲ್ಲಾ ವಸ್ತುಗಳು ದೊರೆಯುವುದುಂಟು.ಲಕ್ಷ್ಮಿ ಕೂರಿಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ. ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ರೀತಿನೀತಿ ನಿಯಮಗಳ ಮೂಲಕ ಲಕ್ಷ್ಮಿಪೂಜೆಯನ್ನು ಮಾಡಬೇಕು.
ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.
ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.
ಲಕ್ಷ್ಮಿ ಪೂಜೆ ಮಾಡುವ ವಿಧಿ ವಿಧಾನಗಳ ಮಾಹಿತಿಯನ್ನು ತಿಳಿಯಲು ಮುಂದೆ ಓದಿ:-
ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.
ಗಣಪತಿಗೆ ಪೂಜೆ ಮಾಡುವಾಗ ಅಷ್ಟನಾಮ ಸಹಸ್ರ ನಾಮಾವಳಿಯನ್ನು ಮಾಡಬೇಕು. ಹೇಳಲು ಸಾಧ್ಯವಾಗದಿದ್ದರೆ ಮಾರುಕಟ್ಟೆಯಲ್ಲಿ ಗಣಪತಿಯ ಸಹಸ್ರ ನಾಮಾವಳಿಯ ಸಿಡಿಗಳು ಲಭ್ಯವಿದೆ ಇದನ್ನು ಹಾಕಬಹುದು.
ಗಣಪತಿ ಪೂಜೆಯ ಬಳಿಕ ಲಕ್ಷ್ಮಿಗೆ ಇಷ್ಟವಾಗುವ ಹಣ್ಣು, ತಿಂಡಿ, ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು. ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ, ಅರಿಶಿನದ ಕೊಂಬು, ಮರದ ಜೊತೆ / ಬಾಗಿನ, ಹಸಿರು ಬಳೆ, ಬಳೆ ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ರವಿಕೆ ಬಟ್ಟೆ (ಬಾಗಿನದ ಸಾಮಾನು ಎಂದರೆ ಇದೀಗ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ) ಇಡಬೇಕು.
ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9ಸುತ್ತಿನ ದಾರ ಇಟ್ಟಿರಬೇಕು. ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.
ಲಕ್ಷ್ಮಿ ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು. ನಂತರ ಸುಮಂಗಲಿಯರಿಗೆ ಅರಿಶಿನ, ಕುಂಕುಮ ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು ಕೊಟ್ಟು ಅವರನ್ನು ಸಂಸತದಿಂದ ಕಳುಹಿಸಿಕೊಡಬೇಕು. ಪೂಜೆಗೆ ಬಂದವರಿಗೆಲ್ಲಾ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.
ದೇವಿಯ ವಿಸರ್ಜನೆ…
ವರಮಹಾಲಕ್ಷ್ಮಿ ದಿನ ಮುಗಿಯಿತು….ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದುಬಿಡುವುದಲ್ಲ…ಪ್ರಾಣಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ, ನೀತಿ, ನಿಯಮಗಳಿಂದ ಮಾಡುತ್ತೇವೆಯೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯನ್ನೂ ಕ್ರಮಬದ್ಧವಾಗಿ, ಪದ್ಧತಿಯಿಂದ ಮಾಡಬೇಕು. ಸಾಮಾನ್ಯವಾಗಿ ವರಲಕ್ಷ್ಮಿಯನ್ನು ಒಂದು, ಮೂರು ಹಾಗೂ ಐದು ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು.
ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡುಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು. ಪ್ರತಿಷ್ಠಾಪನೆ ಉತ್ತಾರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು. ಪೂರ್ವಾಭಿಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು. ನಂತರ ನಿಧಾನವಾಗಿ ಕಳಶವನ್ನು ಅಲುಗಾಡಿಬೇಕು.
ಇದೆಲ್ಲಾ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿಯಿರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು. ಕಲಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನ ಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು.
ಚೌಕ ಹಾಗೂ ರಂಗೋಲಿ ಬರೆದ ಪುಡಿ, ಹೂವು, ಎಲ್ಲಾ ವಸ್ತುವನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು. ನದಿಗೆ ಎಸೆಯಬಾರದು. ನದಿಗೆ ಎಸೆದರೆ ದೋಷ ಉಂಟಾಗುತ್ತದೆ. ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರವಿರುವ ಪದ್ಧತಿಗಳನ್ನೂ ಅನುಸರಿಸುವುದೂ ಸಹ ಅಷ್ಟೇ ಮುಖ್ಯ.
ಈ ವರಮಹಾಲಕ್ಷ್ಮಿ ಹಬ್ಬದ ಮತ್ತೊಂದು ವಿಶೇಷತೆಯೇನೆಂದರೆ ಜಾತಿ, ಮತ, ಭೇದವಿಲ್ಲದೆ ಹಿಂದೂ ಧರ್ಮದ ಎಲ್ಲರೂ ಆ ತಾಯಿಯನ್ನು ವಿವಿಧ ರೀತಿಯಲ್ಲಿ ಪೂಜಿಸಿ ಅವಳನ್ನು ಆರಾಧಿಸುತ್ತಾರೆ.
ಧನ, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ. ಎಷ್ಟೇ ಈ ನಮ್ಮ ಆಧುನಿಕ, ಪಾಶ್ಚಿಮಾತ್ಯ ಜೀವನ ನಮ್ಮನ್ನು ಆವರಿಸದರೂ ನಾವು ನಮ್ಮ ಸಂಪ್ರದಾಯ, ಪದ್ದತಿಗಳನ್ನು ಇನ್ನೂ ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಈ ವರಮಹಾಲಕ್ಷ್ಮಿ ಹಬ್ಬದ ಆಚರಣೆಯೇ ಸಾಕ್ಷಿ. ಎಲ್ಲರೂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿ, ವಿಷ್ಣುವಿನ ಹೃದಯವಾಸಿ ಲಕ್ಷ್ಮಿದೇವಿಯನ್ನು ಪೂಜಿಸಿ, ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ.
ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು…
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.
ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ
ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್ ನ ಬ್ಲಾಕ್ ಮೇಲ್ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…