ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಬಿಜೆಪಿಯ ವಿಧಾನ ಪರಿಷತ್ ಮಾಜಿ ಸದಸ್ಯರೂ ಆಗಿರುವ ನವರಸ ನಾಯಕ ಜಗ್ಗೇಶ್’ರವರು ವೆಂಕಯ್ಯ ನಾಯ್ಡುರವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಒಂದು ಸಂದೇಶವನ್ನು ಬರೆದುಕೊಂಡಿದ್ದು, ಇದು ಕನ್ನಡಿಗರಿಗೆ ಅಪಮಾನ ಮಾಡುವ ರೀತಿ ಇದೆ ಎಂದು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲ್ಲಿ ಆಕ್ರೋಶಗೊಂಡಿದ್ದಾರೆ.
ಏನದು ಟ್ವೀಟ್..!
ಬಾರದು ಬಪ್ಪುದು, ಬಪ್ಪುದು ತಪ್ಪದು ಇದೇ ದೇವರ ಲೀಲೆ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.ವೆಂಕಯನಾಯ್ಡು ಅವರು ಇದೀಗ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರ ಹಿನ್ನೆಲೆಯಲ್ಲಿ ಜಗ್ಗೇಶ್ ಈ ಟ್ವೀಟ್ ಮಾಡಿ ಅಭಿನಂದಿಸಿದ್ದರು.
ತಮ್ಮ ಟ್ವೀಟ್ ನಲ್ಲಿ ಕರ್ನಾಟಕದಲ್ಲಿ ಅವರನ್ನು ಭಾಷಾಭಾವನೆಯಲ್ಲಿ ರಾಜ್ಯ ಸಭೆಗೆ ಆಕ್ಷೇಪಿಸಿದರು. ಆದರೆ ಇಂದು ಭಾರತಕ್ಕೆ ಉಪರಾಷ್ಟ್ರಪತಿ! ಬಾರದು ಬಪ್ಪುದು, ಬಪ್ಪುದು ತಪ್ಪದು ಇದೇ ದೇವರ ಲೀಲೆ ಅಂತ ಬರೆದುಕೊಂಡಿದ್ದರು.
ಕನ್ನಡಿಗರ ಆಕ್ರೋಶಕ್ಕೆ ಕಾರಣ…
ವೆಂಕಯ್ಯ ನಾಯ್ಡುರವರು ಕರ್ನಾಟಕದಿಂದ ರಾಜ್ಯ ಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದರೂ ರಾಜ್ಯಕ್ಕಾಗಿ ಏನೂ ಕೆಲಸ ಮಾಡಿಲ್ಲ ಎಂದು ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗಿದೆ.
ಹಾಗೂ ಕನ್ನಡಪರ ಧ್ವನಿ ಎತ್ತದೆ, ಕನ್ನಡ ಪರ ಕೆಲಸ ಮಾಡದ ಬಗ್ಗೆ ಕನ್ನಡಿಗರು ವೆಂಕಯ್ಯ ನಾಯ್ಡು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಹೊಗಳಿ ಟ್ವೀಟ್ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಟ್ವೀಟ್ ಕನ್ನಡಿಗರನ್ನು ಪರೋಕ್ಷವಾಗಿ ಅಪಮಾನ ಮಾಡುವ ರೀತಿ ಇದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿವಾದಾತ್ಮಕ ಟ್ವೀಟ್’ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಜಗ್ಗೇಶ್’ರವರು ತಮ್ಮ ಟ್ವೀಟ್’ನ್ನು ಅಳಿಸಿ ಹಾಕಿದ್ದಾರೆ.
ಇದೀಗ ಜಗ್ಗೇಶ್ ಅವರು ಪರೋಕ್ಷವಾಗಿ ಕನ್ನಡಿಗರಿಗೆ ಅಪಮಾನವಾಗುವ ರೀತಿ ಟ್ವೀಟ್ ಮಾಡಿದ್ದಾರೆ ಅಂತ ಸಾಮಾಜಿಕ ಜಾಲ ತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ವಿವಾದಾತ್ಮಕ ಟ್ವೀಟ್ ಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಜಗ್ಗೇಶ್ ಟ್ವೀಟ್ ಡಿಲೀಟ್ ಮಾಡಿದ್ದಾರೆ.
ಯಾವಾಗಲು ಕನ್ನಡದ ಚಿತ್ರರಂಗ, ನೆಲ, ಜಲದ ವಿಷಯ ಬಂದಾಗ ಮೊದಲಿಗರಾಗಿ ಮಾತನಾಡುವ ಜಗ್ಗೇಶ್’ರವರು, ಪಕ್ಷ ಅಂತ ಬಂದಾಗ ಬೇರೆ ರೀತಿ ಮಾತನಾಡುತ್ತಾರಯೇ! ಹಾಗಾದ್ರೆ ಅವರು ಮಾಡಿರುವ ಟ್ವೀಟ್’ನಲ್ಲಿ ಬೇರೆ ಅರ್ಥ ಏನಾದ್ರೂ ಇದೆಯಾ? ಅದನ್ನ ನೀವೇ ಹೇಳ್ಬೇಕು….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2ನೇ ಟೆಸ್ಟ್ ಪಂದ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…