ರಾಜಕೀಯ

ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡಿದ್ದ ರಾಜ್ಯ ಕರ್ನಾಟಕ!ಇಂದಿರಾಗಾಂಧಿಯವರಂತೆ ಪ್ರಿಯಾಂಕ ಗಾಂಧಿಯನ್ನು ಗೆಲ್ಲಿಸುತ್ತಾ?ಹಾಗಾದ್ರೆ ಇವರು ಯಾವ ಕ್ಷೇತ್ರದಲ್ಲಿ ನಿಂತ್ರೆ ಗೆಲ್ತಾರೆ…ಮುಂದೆ ಓದಿ…

740

ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಮರುಜೀವ ನೀಡಿದ ರಾಜ್ಯ ಕರ್ನಾಟಕ. ಹೀಗಾಗಿ ರಾಜ್ಯದಿಂದ ಈಗ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಇಲ್ಲಿಂದ ಲೋಕಸಭೆಗೆ ಸ್ಪರ್ಧಿಸಲು ಚಿಂತನೆ ನಡೆಸಿದೆ.

 ಸೋನಿಯಾ ಪುತ್ರಿ ಪ್ರಿಯಾಂಕಾಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಸುದ್ದಿ ಹರಿದಾಡುತ್ತಿದೆ. ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಅಸ್ತಿತ್ವ ನೀಡಿದ್ದ ಕರ್ನಾಟಕ, ಅದರಲ್ಲೂ ಚಿಕ್ಕಮಗಳೂರಿನಿಂದ ಪ್ರಸ್ತುತ (ಉಡುಪಿ-ಚಿಕ್ಕಮಗಳೂರು) ಕ್ಷೇತ್ರದಿಂದ ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸಿರುವುದು ತಿಳಿದುಬಂದಿದೆ.

ಅಲ್ಲದೆ, ಮೈಸೂರು ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಯಾವುದಾದರೂ ಕ್ಷೇತ್ರದಿಂದ ಇವರನ್ನು ಕಣಕ್ಕಿಳಿಸಿ ಗೆಲ್ಲಿಸುವ ಇರಾದೆ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂದಿರಾಗಾಂಧಿಯವರ ನೆನಪು ಜನರ ಮನಸ್ಸಿನಿಂದ ಮಾಸಿಲ್ಲ.

ಪ್ರಿಯಾಂಕಾ ಗಾಂಧಿಯವರು ಇಂದಿರಾ ಅವರನ್ನೇ ಹೋಲುತ್ತಾರೆ. ರಾಹುಲ್‍ಗಿಂತಲೂ ಜನ ಪ್ರಿಯಾಂಕಾ ಅವರನ್ನು ಹೆಚ್ಚು ಬಯಸುತ್ತಾರೆ. ಹಾಗಾಗಿ ಮುಂಬರುವ ಚುನಾವಣೆಗೆ ಕರ್ನಾಟಕದಿಂದ ಪ್ರಿಯಾಂಕ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ವರ್ಚಸ್ಸು ಹೆಚ್ಚಿಸುವ ಚಿಂತನೆ ಪಕ್ಷದ್ದಾಗಿದೆ.

ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಕೊಂಚ ಜೀವ ಹಿಡಿದುಕೊಂಡಿದೆ. ಇಲ್ಲಿಂದಲೇ ಮರು ಜೀವ ಪಡೆದುಕೊಳ್ಳಬೇಕಾಗಿದೆ. 2018ರ ವಿಧಾನಸಭೆ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಬೇಕಾಗಿದೆ.

ಅದಕ್ಕಾಗಿ ಇನ್ನಿಲ್ಲದ ಹರಸಾಹಸ ಮಾಡಬೇಕಾಗಿದೆ. ಬಿಜೆಪಿ, ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಡ್ಡು ಹೊಡೆದು ನಿಂತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ರಾಜ್ಯಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ.

2018ರ ವಿಧಾನಸಭೆ ಚುನಾವಣೆಗೆ ಪ್ರಚಾರಕ್ಕೆ ಕರೆತರುವುದರ ಜತೆಗೆ 2019ರ ಲೋಕಸಭೆ ಚುನಾವಣೆಗೆ ವೇದಿಕೆ ಕಲ್ಪಿಸಿಕೊಡುವುದು ಕಾಂಗ್ರೆಸ್ ಪಕ್ಷದ ಯೋಜನೆಯಾಗಿದೆ. ವಿಶೇಷವಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಪ್ರಿಯಾಂಕಾ ಅವರು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿಲ್ಲ. ಸೋನಿಯಾಗಾಂಧಿಯವರನ್ನು ನಂಬುವಂತೆ ರಾಜಕೀಯ ಮುಖಂಡರು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯನ್ನು ನಂಬುವುದಿಲ್ಲ. ಆದರೂ ಕಾಂಗ್ರೆಸ್‍ಗೆ ಸದ್ಯ ಅವರೇ ಆಧಾರ ಸ್ತಂಭಗಳು.

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ