ದೇಶ-ವಿದೇಶ

ಮೋದಿ ಸರ್ಕಾರದ ಈ ಯೋಜನೆ ಜಾರಿಗೆ ಬಂದ್ರೆ ನಿಲ್ಲಲಿದೆ ಕರೆಂಟ್ ಕಳ್ಳತನ!ಬರಲಿದೆ ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್‍…

1487

ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್‍ಇಡಿ ಬಲ್ಬ್ಗಳ  ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.

ಎಲ್‍ಇಡಿ ಬಲ್ಬ್ಗಳನ್ನು ಕಡಿಮೆ ಬೆಲೆಗೆ ವಿತರಿಸಿದ ಹಾಗೆ , ಮನೆ ಹಾಗೂ ಕಚೇರಿಗಳಿಗೆ ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್‍ಗಳ ಬೆಲೆಯನ್ನು ಇಳಿಸಲು ಚಿಂತನೆ ನಡೆಸಿದೆ.

ವರದಿಗಳ ಪ್ರಕಾರ ಸುಮಾರು 10 ರಿಂದ 15 ಸಾವಿರ ರೂ. ಬೆಲೆಯಿರುವ ವಿದ್ಯುತ್ ಮೀಟರ್‍ಗಳು 1 ಸಾವಿರ ರೂ.ಗೆ ಇಳಿಕೆಯಾಗಲಿದೆ. ಎಂದು ಕೇಂದ್ರ ಇಂಧನ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ.

ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಲಕ್ಷಾಂತರ ಹೊಸ ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್‍ಗಳನ್ನು ಖರೀದಿಸಲು ಮುಂದಾಗಿದೆ ಎಂದು ವರದಿಯಾಗಿದೆ.

ಈ ಯೋಜನ ಜಾರಿಯಿಂದ ಆಗುವ ಅನುಕೂಲಗಳು:-

  • ವಿದ್ಯುತ್ ಕಳ್ಳತನ ತಡೆಗಟ್ಟಬಹುದು.

  • ರೀಡಿಂಗ್‍ನಲ್ಲಿ ನಡೆಯುವ ಮೋಸ ತಡೆಯಬಹುದು.

  • ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್‍ಗಳು ನಕಲು ಮಾಡಲು ಸಾಧ್ಯವಿಲ್ಲ.
  • ಮೀಟರ್‍ ರೀಡಿಂಗ್’ಗಳು ನೇರವಾಗಿ ಕಂಪ್ಯೂಟರ್’ಗೆ ಹೋಗುತ್ತೆ.

  • ಲೈನ್‍ಮನ್‍ಗಳಿಗೆ ಮೀಟರ್‍ ರೀಡಿಂಗ್ ಕೆಲಸ ಇರುವುದಿಲ್ಲ.

ಮೊದಲಿಗೆ ಇದರ ಬೆಲೆಯನ್ನು 2 ಸಾವಿರದಿಂದ 1500 ರವರೆಗೆ ಇಳಿಸಿ ಕೊನೆಗೆ 1 ಸಾವಿರ ರೂ. ಗಿಂತಲೂ ಕಡಿಮೆಗೆ ಇಳಿಸುವ ಪ್ರಯತ್ನ ಇದಾಗಿದೆ ಅಂದ್ರು. ಹರಿಯಾಣಾದಲ್ಲಿ ಇದೇ ರೀತಿಯ ಯೋಜನೆಗೆ ಮುಂದಾಗಿರುವ ಬಗ್ಗೆ ಕೇಂದ್ರ ಇಂಧನ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ.

ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್‍ಗಳು ಸಂಪೂರ್ಣವಾಗಿ ಮೇಡ್ ಇನ್ ಇಂಡಿಯಾ:-

ಮೂಲ

ಇಡೀ ವಿಶ್ವದಲ್ಲೇ ಈ ರೀತಿಯ ಸಾಧನ ತಯಾರಿಸವಲ್ಲಿ ಭಾರತ ಅತ್ಯುತ್ತಮ ಉತ್ಪಾದಕ ರಾಷ್ಟ್ರಗಳಲ್ಲಿ ಒಂದಾಗಿರುವುದರಿಂದ ಈ ಮೀಟರ್‍ಗಳು ಸಂಪೂರ್ಣವಾಗಿ ಮೇಡ್ ಇನ್ ಇಂಡಿಯಾ ಆಗಿರಲಿವೆ ಅಂತ ಹೇಳಿದ್ದಾರೆ. ಇಲ್ಲಿ ಓದಿ:-ಮೋದಿ ಸರ್ಕಾರದಿಂದ,ಆಗಸ್ಟ್ 15ರ ನಂತರ ಭ್ರಷ್ಟ ಅಧಿಕಾರಿಗಳಿಗೆ ಕಾದಿದೆ ಮಾರಿ ಹಬ್ಬ!

ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಧ್ಯೆ ಮಾತುಕತೆ ನಡೆಯುತ್ತಿದೆ ಅಂತ ಪಿಯೂಶ್ ಗೋಯಲ್   ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…

  • ದೇಗುಲ ದರ್ಶನ

    ತಲಕಾವೇರಿ ತೀರ್ಥೋದ್ಭವ ಸಂಭ್ರಮ: ಬ್ರಹ್ಮ ಕುಂಡಲದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ..!

    ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…

  • ಸುದ್ದಿ

    ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

    ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….

  • ದೇಶ-ವಿದೇಶ

    ಸೋಶಿಯಲ್ ಮೀಡಿಯಾದಲ್ಲಿ ಎಸ್ಸಿ/ಎಸ್ಟಿ ವ್ಯಕ್ತಿಗಳಿಗೆ ನಿಂದಿಸಿದರೆ ಯಾವ ಶಿಕ್ಷೆ ಗೊತ್ತಾ?ಈ ಲೇಖನಿ ಓದಿ…

    ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.