ಕಾನೂನು

ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

137

ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

ತ್ರಿವಳಿ ತಲಾಖ್‌ ಸಂವಿದಾನ ಬಾಹಿರ ಎಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ. ಒಂದೊಮ್ಮೆ ತ್ರಿವಳಿ ತಲಾಖ್ ಬ್ಯಾನ್ ಮಾಡಬೇಕಿದ್ದರೆ ಇದಕ್ಕೆ ಕಾನೂನು ಜಾರಿಗೆ ತನ್ನಿ ಎಂದು ಕೇಂದ್ರ ಸರಕಾರಕ್ಕೆ ಸಲಹೆ ನೀಡಿದೆ.

ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲವಾದ್ದರಿಂದ ತ್ರಿವಳಿ ತಲಾಖ್‌ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಮೂಲ

ಇನ್ನು ತ್ರಿವಳಿ ತಲಾಖ್ ನೀಡುವುದಕ್ಕೆ 6 ತಿಂಗಳ ಕಾಲ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅದಕ್ಕೂ ಮೊದಲು ಇದಕ್ಕೆ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.

ನ್ಯಾಯಮೂರ್ತಿಗಳ ಬಹುಮತದ ತೀರ್ಪಿನ ಆಧಾರದ ಮೇಲೆ ತ್ರಿವಳಿ ತಲಾಖ್‌ ಅನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ. ಬೇರೆ ಬೇರೆ ಧರ್ಮಕ್ಕೆ ಸೇರಿದ ನ್ಯಾ. ಖೇಹರ್, ಕುರಿಯನ್ ಜೋಸೆಫ್, ರೋಹಿಂಗ್ಟನ್ ಎಫ್ ನಾರಿಮನ್, ಉದಯ್ ಲಲಿತ್, ಎಸ್ ಅಬ್ದುಲ್ ನಜೀರ್ ನ್ಯಾಯಪೀಠ ಈ ತೀರ್ಪು ನೀಡಿದೆ.

ಈ ಹಿಂದೆ ತ್ರಿವಳಿ ತಲಾಖ್‌ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಮಹಿಳೆಯರ ಗುಂಪನ್ನು ಕೇಂದ್ರ ಸರ್ಕಾರವು ಬೆಂಬಲಿಸಿತ್ತು. ಈ ವಿಚಾರವನ್ನು ಲಿಂಗ ಸಮಾನತೆ, ಸಾಂವಿಧಾನಿಕ ನೈತಿಕತೆ ಮತ್ತು ಆತ್ಮಸಾಕ್ಷಿಯ ದೃಷ್ಟಿಯಿಂದ ಪರಿಶೀಲನೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿತ್ತು.

ತ್ರಿವಳಿ ತಲಾಖ್‌ ಎಂಬುದು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವಣ ಸಂಘರ್ಷ ಅಲ್ಲ. ಇದು ಮುಸ್ಲಿಂ ಸಮುದಾಯದೊಳಗಿನ ಗಂಡಸರು ಮತ್ತು ಹೆಂಗಸರ ನಡುವಣ ಸಂಘರ್ಷ ಎಂದು ಸರ್ಕಾರ ವಾದಿಸಿತ್ತು.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಗ್ರಾಮ ಇಡೀ ವಿಶ್ವಕ್ಕೆ ಮಾದರಿಯಾಗಿದೆ!ಇಂಟರ್ನೆಟ್ನಲ್ಲಿ ವೈರಲ್ ಆಗಿರುವ ಈ ಗ್ರಾಮ ಯಾವುದು ಗೊತ್ತಾ?

    ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್‌ನೆಟ್‌ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್‌ನೆಟ್‌ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.

  • ಸುದ್ದಿ

    ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…

  • ಸುದ್ದಿ

    170 ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್ …!

    ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…

  • ಸೌಂದರ್ಯ

    ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

    ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

  • ವಿಚಿತ್ರ ಆದರೂ ಸತ್ಯ

    ಇವನಿಗೆ 12ಸಾವಿರ ವರ್ಷ ಜೈಲು ಶಿಕ್ಷೆ!ಶಾಕ್ ಆಯ್ತಾ?ಈ ಲೇಖನಿ ಓದಿ…

    ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!