ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ನಿಮಗೆ ಗೊತ್ತಾ ಶಾಸ್ತ್ರದ ಪ್ರಕಾರ ಗಣೇಶನನ್ನು ಮಣ್ಣಿನಲ್ಲೇ ತಯಾರಿಸಬೇಕಂತೆ…
ಹೌದು, ಶ್ರೀ ಗಣೇಶನನ್ನು ಶಾಸ್ತ್ರದ ಪ್ರಕಾರ ಜೇಡಿಮಣ್ಣು ಅಥವಾ ಆವೆಮಣ್ಣಿನಿಂದ ತಯಾರಿಸಬೇಕು. ಪುರಾಣದ ಪ್ರಕಾರ ಪಾರ್ವತಿಯು ದೇವಿಯು ಮೃತ್ತಿಕೆಯ (ಮಣ್ಣಿನ) ಆಕಾರ ಮಾಡಿ ಅದರಲ್ಲಿ ಶ್ರೀ ಗಣೇಶನ ಆವಾಹನೆಯನ್ನು ಮಾಡಿದಳು. ‘ಭಾದ್ರಪದ ಶುಕ್ಲ ಚತುರ್ಥಿಯಂದು ಮಣ್ಣಿನ ಗಣೇಶಮೂರ್ತಿಯನ್ನು ತಯಾರಿಸಬೇಕು’, ಎಂಬ ಶಾಸ್ತ್ರವಿಧಿಯಿದೆ.
ಆದ್ರೆ ಇತ್ತೀಚೆಗೆ ಮಾತ್ರ ಬಣ್ಣ ಬಣ್ಣ ಗಣೇಶನ ಮೂರ್ತಿಗಳನ್ನು ತಯಾರಿಸುವುದು ಹೆಚ್ಚು. ಇವುಗಳನ್ನು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ತಾಯರಿಸಲಾಗಿರುತ್ತದೆ. ಕಾರಣ ಗಣೇಶ ಮೂರ್ತಿಗಳು ಆಕರ್ಷಕವಾಗಿ ಕಾಣಲೆಂದು…
ಹಾಗಾದ್ರೆ ಮಣ್ಣಿನ ಮೂರ್ತಿಗೂ ಮತ್ತು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಗೂ ಇರುವ ವ್ಯತ್ಯಾಸವೇನು ಗೊತ್ತಾ..?
ಮಣ್ಣಿನ ಮೂರ್ತಿಯಲ್ಲಿ ಶ್ರೀ ಗಣೇಶನ ಪವಿತ್ರಕಗಳು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಿ ಕಾರ್ಯನಿರತವಾಗಿರುತ್ತವೆ :-
‘ಮಣ್ಣಿನಲ್ಲಿರುವ ಪೃಥ್ವಿತತ್ತ್ವದಿಂದಾಗಿ ಮೂರ್ತಿಯು ಬ್ರಹ್ಮಾಂಡ ಮಂಡಲದಿಂದ ಆಕರ್ಷಿಸಿದ ದೇವತೆಯ ತತ್ತ್ವವು ಮೂರ್ತಿಯಲ್ಲಿ ದೀರ್ಘಕಾಲ ಕಾರ್ಯನಿರತವಾಗಿರುತ್ತದೆ.
ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ವಾಯುಮಂಡಲವು ಶುದ್ಧವಾಗುತ್ತದೆ:-
‘ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ಅದು ಕೂಡಲೇ ನೀರಿನಲ್ಲಿ ಕರಗಿ, ಹರಿಯುವ ನೀರಿನಿಂದ ಸುತ್ತ ಮುತ್ತಲಿನ ಪರಿಸರದಲ್ಲಿ ದೂರದವರೆಗೆ ದೇವತೆಗಳ ಸಾತ್ತ್ವಿಕ ಲಹರಿಗಳನ್ನು ಕಡಿಮೆ ಕಾಲಾವಧಿಯಲ್ಲಿ ಪ್ರಕ್ಷೇಪಿಸುತ್ತದೆ. ಇದರಿಂದ ಸಂಪೂರ್ಣ ಪರಿಸರದ ವಾಯುಮಂಡಲ ಶುದ್ಧವಾಗುತ್ತದೆ. ಈ ಪ್ರಕ್ರಿಯೆಯಿಂದ ಸಮಷ್ಟಿ ಸ್ತರದಲ್ಲಿ ಲಾಭವಾಗಲು ಸಹಾಯವಾಗುತ್ತದೆ
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿ :-
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಲ್ಲಿ ದೇವತೆಯ ತತ್ತ್ವವನ್ನು ಆಕರ್ಷಿಸುವ ಮತ್ತು ಕಾರ್ಯನಿರತವಾಗಿಡುವ ಕ್ಷಮತೆಯು ಕಡಿಮೆಯಿರುತ್ತದೆ. ಆದ್ದರಿಂದ ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಆಧ್ಯಾತ್ಮಿಕ ಸ್ತರದಲ್ಲಿ ಹೆಚ್ಚೇನೂ ಲಾಭವಾಗುವುದಿಲ್ಲ.’
ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದಾಗುವ ಹಾನಿ
ಪ್ಲಾಸ್ಟರ್ ಆಫ್ ಪ್ಯಾರಿಸ್’ ನೀರಿನಲ್ಲಿ ಸಹಜವಾಗಿ ಕರಗದಿರುವುದರಿಂದ ವಿಸರ್ಜನೆಯ ನಂತರ ಮೂರ್ತಿಯು ನೀರಿನ ಮೇಲೆ ತೇಲುತ್ತದೆ. ಅನೇಕ ಕಡೆಗಳಲ್ಲಿ ವಿಸರ್ಜಿತವಾಗದ ಮೂರ್ತಿಗಳ ಅವಶೇಷಗಳನ್ನು ಕೆಲವೊಮ್ಮೆ ಒಟ್ಟು ಮಾಡಿ ಅವುಗಳ ಮೇಲೆ ‘ಬುಲ್ಡೋಝರ್’ನ್ನು ಚಲಾಯಿಸಲಾಗುತ್ತದೆ.
ಹೀಗೆ ಮಾಡುವುದು ಶ್ರೀ ಗಣಪತಿಯ ಘೋರ ವಿಡಂಬನೆಯೇ ಆಗಿದೆ. ಯಾವ ಭಕ್ತಿ ಶ್ರದ್ದೆಗಳಿಂದ ನಾವು ಶ್ರೀ ಗಣಪತಿಯನ್ನು ಆವಾಹನೆ ಮಾಡುತ್ತೇವೆಯೋ, ಅದೇ ಭಕ್ತಿ ಶ್ರದ್ದೆಗಳಿಂದ ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ.
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ವಾತಾವರಣದ ಮೇಲೆ ಬೀರುವ ಪರಿಣಾಮಗಳು:-
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಕೆರೆ, ನದಿ, ಸಮುದ್ರ ಮುಂತಾದವುಗಳ ನೀರು ಕಲುಷಿತಗೊಳ್ಳುತ್ತದೆ. ಜೇಡಿಮಣ್ಣು ಅಥವಾ ಆವೆಮಣ್ಣನ್ನು ಬಿಟ್ಟು ಬೇರೆ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರದ ವಿರುದ್ಧವಾಗಿದೆ!
ಇತ್ತೀಚೆಗೆ ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ನಾಣ್ಯ, ‘ಸಿರಿಂಜ್’ ಮುಂತಾದ ವಸ್ತುಗಳಿಂದಲೂ ಶ್ರೀ ಗಣೇಶಮೂರ್ತಿಯನ್ನು ತಯಾರಿಸುತ್ತಾರೆ. ಇಂತಹ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ. ಇಂತಹ ಮೂರ್ತಿಯ ಕಡೆಗೆ ಶ್ರೀ ಗಣೇಶನ ಪವಿತ್ರಕಗಳು ಆಕರ್ಷಿಸುವುದಿಲ್ಲ.
‘ಇಕೋ ಫ್ರೆಂಡ್ಲಿ’ ಗಣೇಶಮೂರ್ತಿಗಳ ಬಗೆಗಿನ ವಂಚನೆಯಿಂದ ಎಚ್ಚರ :-
ಇತ್ತೀಚೆಗೆ ಕೆಲವು ಸಂಸ್ಥೆಗಳು ‘ಇಕೋ-ಫ್ರೆಂಡ್ಲಿ (‘ಇಕಾಲಾಜಿಕಲ್ ಫ್ರೆಂಡ್ಲಿ’, ಅಂದರೆ ಪರಿಸರ ಸ್ನೇಹಿ) ಶ್ರೀ ಗಣೇಶಮೂರ್ತಿ’ಗಳನ್ನು ತಯಾರಿಸಲು ಆಹ್ವಾನಿಸುತ್ತಾರೆ. ಅವುಗಳಲ್ಲಿ ಕೆಲವು ಮೂರ್ತಿಗಳನ್ನು ಕಾಗದದ ಮುದ್ದೆಗಳಿಂದ ತಯಾರಿಸಲಾಗುತ್ತದೆ. ಇದು ಅಶಾಸ್ತ್ರೀಯವಂತೂ ಆಗಿದೆ, ಹಾಗೆಯೇ ಪರಿಸರಕ್ಕೆ ಹಾನಿಕರಕವೂ ಆಗಿದೆ.
ಏಕೆಂದರೆ ಕಾಗದದ ಮುದ್ದೆಗಳು ನೀರಿನಲ್ಲಿರುವ ಪ್ರಾಣವಾಯುವನ್ನು ಹೀರುತ್ತವೆ ಮತ್ತು ಜೀವಗಳಿಗೆ ಹಾನಿಕರವಾದ ‘ಮಿಥೇನ್’ ವಾಯುವನ್ನು ನಿರ್ಮಿಸುತ್ತವೆ. ಇಂತಹ ಸಂಸ್ಥೆಗಳಿಂದ ಮಾಡಲಾಗಿರುವ ನಿಸರ್ಗದ ವಿಚಾರವು ಕೇವಲ ಮೇಲುಮೇಲಿನದ್ದಾಗಿರುತ್ತದೆ. ಹಿಂದೂ ಧರ್ಮಶಾಸ್ತ್ರವು ನಿಸರ್ಗದ ರಕ್ಷಣೆಯೊಂದಿಗೆ ಮಾನವನ ಸರ್ವಾಂಗೀಣ ಉನ್ನತಿಯ ವಿಚಾರವನ್ನೂ ಮಾಡಿರುತ್ತದೆ ಎಂಬುದನ್ನು ಗಮನದಲ್ಲಿಡಿ.
ಧರ್ಮಶಾಸ್ತ್ರಕ್ಕನುಸಾರ ತರಬೇಕಾದ ಜೇಡಿಮಣ್ಣಿನ ಮೂರ್ತಿಯು ದುಬಾರಿಯಾಗಿರುತ್ತದೆ. ಈ ರೀತಿ ಹೇಳುವುದು ಕುಂಟುನೆಪವಾಗಿದೆ. ಪ್ರತಿಯೊಂದು ಕುಟುಂಬದಲ್ಲಿ ಗಣೇಶೋತ್ಸವಕ್ಕಾಗಿ ಆಗುವ ಒಟ್ಟು ಖರ್ಚಿನಲ್ಲಿಮೂರ್ತಿಯ ಖರೀದಿಗಾಗಿ ಆಗುವ ಖರ್ಚು ಅತ್ಯಲ್ಪವಾಗಿರುತ್ತದೆ.
ಶ್ರೀ ಗಣೇಶನನ್ನು ಪೂಜಿಸುವುದರ ಉದ್ದೇಶವು ಕುಟುಂಬದಲ್ಲಿನ ಸದಸ್ಯರಿಗೆ ಮೂರ್ತಿಯಿಂದ ಗಣೇಶತತ್ತ್ವ ಸಿಗುವುದಾಗಿದೆ. ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಈ ಲಾಭ ಸಿಗುವುದು ಸಾಧ್ಯವಿಲ್ಲ. ಗಣೇಶಭಕ್ತರೇ, ಮೂರ್ತಿಯ ಖರ್ಚಿನ ಪ್ರಶ್ನೆಯಿದ್ದರೆ, ಚಿಕ್ಕ ಮೂರ್ತಿಯನ್ನು ತೆಗೆದುಕೊಳ್ಳಿರಿ; ಆದರೆ ತುಲನೆಯಲ್ಲಿ ಅಗ್ಗವಾಗಿದೆ ಎಂದು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯನ್ನು ಕೊಳ್ಳುವ ಧರ್ಮಶಾಸ್ತ್ರವಿರೋಧಿ ವರ್ತನೆಯನ್ನು ಮಾಡಬೇಡಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ…
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ
ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!