ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧಕ-೧ , ದ.ರಾ.ಬೇಂದ್ರೆ ಯವರ ಜೀವನ ಮತ್ತು ಅವರ ಸಾಧನೆ ಬಗ್ಗೆ ಕಿರು ಲೇಖನ.
( ನಿಮ್ಮ ಅಭಿಪ್ರಾಯ ಮತ್ತು ಮುಂದಿನ ಸಾಧಕರನ್ನು ನೀವೇ ನಮಗೆ ತಿಳಿಸಿ )
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ(ಅಂಬವ್ವ). ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ. ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯ ಕುಟುಂಬ. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗ ಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಂ.ಎ. ಮಾಡಿಕೊಂಡು ಕೆಲಕಾಲ (೧೯೪೪ – ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು. ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ “ಕೃಷ್ಣ ಕುಮಾರಿ”-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.
ಬೇಂದ್ರೆ ಸ್ಮಾರಕ, ಧಾರವಾಡ
ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ “ಪ್ರಭಾತ” ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. “ಗರಿ”, “ಕಾಮಕಸ್ತೂರಿ “, “ಸೂರ್ಯಪಾನ”, “ನಾದಲೀಲೆ”, “ನಾಕುತಂತಿ” ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ “ಗೆಳೆಯರ ಗುಂಪು” ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು.
(ಪ್ರಥಮ ಆವೃತ್ತಿಯ ವರ್ಷದೊಂದಿಗೆ) ಅಂಬಿಕಾತನಯದತ್ತರ ಸಮಗ್ರ ಕಾವ್ಯ ೬ ಸಂಪುಟಗಳು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ‌್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್‍ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್‍ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.