ದೇಶ-ವಿದೇಶ

ಮೋದಿ ಸರಕಾರದ ಮೂರು ವರುಷದ ಸಂಭ್ರಮಾಚರಣೆಗೆ, ರಾಷ್ಟ್ರಕ್ಕೆ ಸಮರ್ಪಿತವಾದ ದೇಶದ ಅತಿ ದೊಡ್ಡದಾದ ಸೇತುವೆ

185

ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು. ಇಲ್ಲಿ ಓದಿರಿ :-ಗೋ ಹತ್ಯೆ ನಿಷೇಧ. ನಿಯಮದಲ್ಲಿ ಏನೇನಿದೆ ಗೊತ್ತ???

ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ 20 ದಿನಗಳ ಸಂಭ್ರಮಾಚರಣೆ ದೇಶಾದ್ಯಂತ ನಡೆಯಲಿದೆ. ಜೂನ್‍ 15ರವರೆಗೆ ದೇಶದ ಪ್ರಮುಖ 900 ನಗರಗಳಲ್ಲಿ ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು, ಮುಖಂಡರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಚೀನಾದ ಗಡಿಯ ಸಮೀಪದಲ್ಲಿರುವ ಈ ಸೇತುವೆ ದೇಶದ ಅತಿ ಉದ್ದನೆಯ ಸೇತುವೆಯಾಗಲಿದೆ. ಬ್ರಹ್ಮಪುತ್ರ ನದಿಗೆ ಅಡ್ಡವಾಗಿ ಈ ಸೇತುವೆಯನ್ನು ಕಟ್ಟಲಾಗಿದ್ದು 9.15ಕಿ.ಮೀ. ಉದ್ದವಿದೆ. ಢೋಲಾ – ಸಡಿಯಾ ನಡುವೆ ಈ ಸೇತುವೆ ಸಂಪರ್ಕವನ್ನು ನಿರ್ಮಿಸುತ್ತದೆ.
950 ಕೋಟಿ ರೂ.ಗಳ ವೆಚ್ಚದಲ್ಲಿ ಈ ಬೃಹತ್ ಸೇತುವೆ ನಿರ್ಮಿಸಲಾಗಿದೆ. ಅಸ್ಸಾಂ ರಾಜಧಾನಿ ಡಿಸ್ಪುರದಿಂದ 540 ಕಿ.ಮೀ. ಹಾಗೂ ಅರುಣಾಚಲದ ರಾಜಧಾನಿ ಇಟಾನಗರದಿಂದ 300 ಕಿ.ಮೀ. ದೂರದಲ್ಲಿ ಈ ಸೇತುವೆ ಇದೆ. ವಾಯು ಮಾರ್ಗವಾಗಿ ಈ ಸೇತುವೆ ಚೀನಾಕ್ಕೆ 100 ಕಿ.ಮೀ. ದೂರದಲ್ಲಿದೆ. ಈ ಸೇತುವೆಯಿಂದ ಅರುಣಾಚಲ ಪ್ರದೇಶ ಹಾಗೂ ಅಸ್ಸಾಂ ನಡುವಿನ ಪ್ರಯಾಣದ ಅಂತರ 4 ಗಂಟೆ ಕಡಿಮೆಯಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಭಾರತ ಚೀನಾ ನಡುವೆ ಯುದ್ದ ನಡೆದ್ರೆ,ಯಾವ ದೇಶಗಳು ಭಾರತಕ್ಕೆ ಸಹಾಯ ಮಾಡುತ್ತವೆ ಗೊತ್ತಾ???

    ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….

  • inspirational

    ಪ್ರಯಾಣಿಕರ ಉಪಯೋಗಕ್ಕಾಗಿ ಆಟೋವನ್ನೇ ಮನೆಯಂತೆ ಮಾಡಿದ ಚಾಲಕ ಸಿಗುತ್ತೆ ಹಲವು ಸೌಲಭ್ಯ..!

    ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್‍ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…

  • ಸುದ್ದಿ

    ‘ವಾಟ್ಸಾಪ್’:ನಿಮ್ಮ ಖಾಸಗಿ ವಿಷಯಗಳನ್ನು ಬಹಿರಂಗಪಡಿಸಬಹುದು ಎಚ್ಚರ…!

    ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…

  • ಸುದ್ದಿ

    ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

    ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…

  • ಉಪಯುಕ್ತ ಮಾಹಿತಿ

    2019ರಿಂದ ಎಲ್ಲ ಕಾರುಗಳಲ್ಲಿ ಏರ್ಬ್ಯಾಗ್ ಕಡ್ಡಾಯ..!ತಿಳಿಯಲು ಈ ಲೇಖನ ಓದಿ..

    ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.