ದೇಶ-ವಿದೇಶ

ಪೊಲೀಸ್ ಅಧಿಕಾರಿ ಮುಂದೆಯೇ, ಠಾಣಾಧಿಕಾರಿಯ ಸೀಟ್ನಲ್ಲಿ ಕುಳಿತ ಸ್ವಘೋಷಿತ ದೇವ ಮಹಿಳೆ..!

235

ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.

ಸ್ವಘೋಷಿತ ದೇವ ಮಹಿಳೆಯನ್ನು ಪೊಲೀಸ್ ಠಾಣೆಗೆ ಆಹ್ವಾನಿಸಿ ಆತ್ಮೀಯತೆಯಿಂದ ಸ್ವಾಗತಿಸಿ, ರಕ್ಷಣೆ ಮಾಡಬೇಕಾದ ಪೊಲೀಸ್ ಅಧಿಕಾರಿಗಳೇ ಆಕೆಗೆ ತನ್ನ ಸೀಟ್ ಅನ್ನು ಬಿಟ್ಟು ಕೊಟ್ಟಿರುವ ಫೋಟೋ ಇದೀಗ ವಿವಾದಕ್ಕೀಡಾಗಿದೆ.

ದೇಶದಾದ್ಯಂತ ಬಹು ಚರ್ಚೆಗೀಡಾಗಿರುವ ಸ್ವಯಂಘೋಷಿತ ದೇವಮಹಿಳೆ ರಾಧೆ ಮಾ ತನ್ನ ಫ್ಯಾಷನ್’ಗಳಿಗೆ ಫೇಮಸ್ಸು. ಇದೀಗ ಮುಖ್ಯ ಠಾಣಾಧಿಕಾರಿಯ ಸೀಟ್ನಲ್ಲೇ ಕುಳ್ಳಿರಿಸಿ ರಾಧೇ ಮಾಗೆ ಪೊಲೀಸ್ ಸಿಬ್ಬಂದಿ ಗೌರವಿಸಿದ ವಿಚಾರ ಬಹಿರಂಗಗೊಂಡಿದೆ.

ದೆಹಲಿಯ ವಿವೇಕ್ ವಿಹಾರ್ ಪೊಲೀಸ್ ಠಾಣೆಗೆ ರಾಧೆ ಮಾಳನ್ನು ಆತ್ಮೀಯವಾಗಿ ಆಹ್ವಾನಿಸಿದ್ದರು. ಈ ಸಂದರ್ಭದಲ್ಲಿ ಠಾಣಾಧಿಕಾರಿ ಎದ್ದು ತನ್ನ ಕುರ್ಚಿಯಲ್ಲಿ ರಾಧೆ ಮಾಳನ್ನು ಕೂರಿಸಿ, ತಾನು ರಾಧೆ ಮಾ ಪಕ್ಕದಲ್ಲಿ ಕೈಮುಗಿದು ನಿಂತಿರುವ ಫೋಟೋ ವೈರಲ್ ಆಗಿದೆ.

ಕೌಟುಂಬಿಕ ಹಿಂಸೆ ಪ್ರಕರಣವೊಂದರಲ್ಲಿ ಆರೋಪ ಹೊತ್ತಿರುವ ರಾಧೆ ಮಾರ ತನಿಖೆಗೆಂದು ಸ್ಟೇಷನ್’ಗೆ ಆಗಮಿಸಿದ್ದರು. ಆದರೆ ಈ ಸಂದರ್ಭದಲ್ಲಿ ಠಾಣಾಧಿಕಾರಿಯೇ ರಾಧೆ ಮಾ ಪಕ್ಕದಲ್ಲೇ ನಿಂತು ಕೈಮುಗಿದು, ಕೆಂಪು ಶಲ್ಯ ಹೊದ್ದಿಸಿದ್ದಾರೆ.

ಸದ್ಯ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಭಾರೀ ವಿವಾದ ಸೃಷ್ಟಿಸಿವೆ.ರಾಧೆ ಮಾಳನ್ನು ಠಾಣೆಗೆ ಆಹ್ವಾನಿಸಿರುವ ಘಟನೆ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ. ರಾಧೆ ಮಾಗೆ ಖ್ಯಾತ ಸಿನಿಮಾ ನಿರ್ಮಾಪಕ, ನಿರ್ದೇಶಕ ಸುಭಾಶ್ ಘಾಯ್ ಸೇರಿದಂತೆ ಗಣ್ಯಾತೀ ಗಣ್ಯರ ಭಕ್ತರನ್ನು ಹೊಂದಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಊಟ ಮಾಡುವಾಗ ಈ ತಪ್ಪುಗಳನ್ನು ಮಾಡಲೇಬೇಡಿ! ಏನ್ ಗೊತ್ತಾ?ಮುಂದೆ ಓದಿ…

    ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ..ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…

  • inspirational

    ಶೈನ್, ಭೂಮಿ ಮಧ್ಯೆ ಫೈಟ್, ಭೂಮಿಗೆ ವಾರ್ನಿಂಗ್ ಕೊಟ್ಟ ಶೈನ್.

    ಬಿಗ್‍ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್‍ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್‍ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…

  • ಸುದ್ದಿ

    ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

    ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

  • ಗ್ಯಾಜೆಟ್

    ನಿಮ್ಮ ಮೊಬೈಲ್’ನಲ್ಲೇ ಆಧಾರ್ ಲಿಂಕ್ ಮಾಡಿ..!ಈ ಲೇಖನ ಓದಿ…

    ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.

  • ದೇಶ-ವಿದೇಶ, ವಿಸ್ಮಯ ಜಗತ್ತು

    ಮಹಿಳೆಯರಿಗೆ ವಾಸಿಸಲು ಅತ್ಯಂತ ಕಷ್ಟಕರವಾದ ದೇಶಗಳು ಯಾವುದು ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.